
ಮಡಿಕೇರಿ ಏ.26 NEWS DESK : ಚೆಯ್ಯಂಡಾಣೆಯ ಚೇಲವಾರ ಗ್ರಾಮದ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಮೇ 3 ಮತ್ತು 4 ರಂದು ದ್ವಿತೀಯ ವರ್ಷದ ನೇಮೋತ್ಸವ ನಡೆಯಲಿದೆ. ಮೇ 3 ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಪೂಜೆ, ಸಂಜೆ 5 ಗಂಟೆಗೆ ದೈವಗಳ ಭಂಡಾರ ತೆಗೆಯುವುದು, 6 ಗಂಟೆಗೆ ಮಂತ್ರವಾದಿ ಗುಳಿಗ ದೈವದ ಕೋಲ, ರಾತ್ರಿ 9 ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ, 10.30 ಗಂಟೆಗೆ ಪಾಷಾಣಮೂರ್ತಿ ದೈವದ ಕೋಲ, ರಾತ್ರಿ 2 ಗಂಟೆಗೆ ಮಯೊಂತಿ ದೈವದ ಕೋಲ ಜರುಗಲಿದೆ. ಮೇ 4 ರಂದು ಬೆಳಿಗ್ಗೆ 7 ಗಂಟೆಗೆ ಕಾರ್ಣಿಕ ದೈವ ಸ್ವಾಮಿ ಕೊರಗಜ್ಜ ದೈವದ ಕೋಲ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೈವಗಳ ಸೇವೆಯನ್ನು ನಡೆಸಿಕೊಟ್ಟು ಶ್ರೀ ದೈವಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ : ನೇಮೋತ್ಸವದಲ್ಲಿ ಫೋಟೋ, ವಿಡಿಯೋ ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅನ್ನದಾನ ಹಾಗೂ ಧನ ಸಹಾಯ ಮಾಡಲು ಇಚ್ಚಿಸುವವರು 8762819468, 8197524497, 9449301059 8971171913 ಸಂಪರ್ಕಿಸಬಹುದಾಗಿದೆ.










