Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಮುದ್ದಂಡ ಕಪ್ ಹಾಕಿ ಉತ್ಸವ’ : ಮಂಡೇಪಂಡ ಚಾಂಪಿಯನ್*  
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*‘ಮುದ್ದಂಡ ಕಪ್ ಹಾಕಿ ಉತ್ಸವ’ : ಮಂಡೇಪಂಡ ಚಾಂಪಿಯನ್*  

ಏಪ್ರಿಲ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.27 : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ ‘ಮಂಡೇಪಂಡ’ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಬೆಳ್ಳಿ ಮಹೋತ್ಸವದ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು ಮಂಡೇಪಂಡ ಅಲಂಕರಿಸಿತು.  ಕಾರ್ಮೋಡಗಳು ಕವಿದ ವಾತಾವರಣದ ನಡುವೆ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರ ಹರ್ಷೋದ್ಘಾರಗಳ ನಡುವೆ ಮಂಡೇಪಂಡ ಮತ್ತು ಚೇಂದಂಡ ನಡುವಿನ ಪಂದ್ಯ ಅತ್ಯಂತ ಕುತೂಹಲಕಾರಿಯಾಗಿ ಆರಂಭಗೊಂಡಿತು. ಪಂದ್ಯದ ಆರಂಭಿಕ ಕ್ಷಣಗಳಲ್ಲೆ ಚೇಂದಂಡ ತಂಡ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆದುಕೊಂಡಿತು. ಇದನ್ನು ಗೋಲಾಗಿಸುವಲ್ಲಿ ತಂಡದ ಪ್ರಮುಖ ಮುನ್ಪಡೆ ಆಟಗಾರ, ಒಲಂಪಿಯನ್ ನಿಕಿನ್ ತಿಮ್ಮಯ್ಯ ವಿಫಲರಾದರು. ದಾಳಿಗೆ ಪ್ರತಿ ದಾಳಿ ನಡೆಸಿದ ಮಂಡೇಪಂಡ ತಂಡ, ಆಕರ್ಷಕ ಶಾರ್ಟ್ ಪಾಸ್‌ಗಳ ಮೂಲಕ ಎದುರಾಳಿ ಚೇಂದಂಡ ತಂಡದ ಗೋಲು ಆವರಣವನ್ನು ಪ್ರವೇಶಿಸಿ ಗೋಲು ಗಳಿಕೆಯ ಪ್ರಯತ್ನ ನಡೆಸಿ ಗೋಲು ಗಳಿಸುವ ಪ್ರಯತ್ನದಲ್ಲಿ ವಿಫಲವಾಯಿತು. ಹೀಗಿದ್ದೂ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆದುಕೊಂಡಿತು. ಇದರಲ್ಲಿ ಮಂಡೇಪಂಡ ಗೌತಮ್ ಮಿಂಚಿನ ಗೋಲು ಸಿಡಿಸುವ ಮೂಲಕ ಮೊದಲ ಕ್ವಾರ್ಟರ್‌ನಲ್ಲಿ ಮಂಡೇಪಂಡ ತಂಡ ಮೂರು ಬಾರಿಯ ಚಾಂಪಿಯನ್ ಚೇಂದಂಡ ತಂಡದ ವಿರುದ್ಧ 1-0 ಗೋಲಿನ ಮುನ್ನಡೆಯನ್ನು ಸಾಧಿಸಿತು. ರೋಚಕ ಆಟಕ್ಕೆ ಬಿರುಮಳೆಯ ಅಡ್ಡಿ- ದ್ವಿತೀಯ ಕ್ವಾರ್ಟರ್‌ನಲ್ಲಿ ಚೇಂದಂಡ ತಂಡ ಸಮಬಲದ ಗೋಲಿಗಾಗಿ ಆರಂಭಿಕ ಹಂತದಿಂದಲೆ ದಾಳಿಗೆ ಇಳಿಯಿತಲ್ಲದೆ ದ್ವಿತೀಯ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆದುಕೊಂಡಿತು. ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ವಿಫಲವಾಯಿತಾದರು, ಇದರ ಬೆನ್ನಲ್ಲೆ ಮತ್ತೊಂದು ಪೆನಾಲ್ಟಿ ಕಾರ್ನರ್ ಅವಕಾಶ ಪಡೆಯುತ್ತಿರುವಂತೆಯೆ ಮೋಡಗಳು ಮಳೆ ಸುರಿಸಲಾರಂಭಿಸಿತು. ಸಿಡಿಲು ಗುಡುಗಿನ ಮಳೆಯ ನಡುವೆಯೇ ನಡೆದ ಪೆನಾಲ್ಟಿ ಕಾರ್ನರ್‌ನಲ್ಲಿ ಚೇಂದಂಡ ಗೋಲು ಗಳಿಸುವಲ್ಲಿ ವಿಫಲವಾಯಿತು.
ಬಿರು ಮಳೆಯ ಹಿನ್ನೆಲೆಯಲ್ಲಿ ಪಂದ್ಯವನ್ನು ನಿಲ್ಲಿಸಲಾಯಿತು. ಧಾರಾಕಾರ ಸುರಿದ ಮಳೆಯಿಂದ ಮೈದಾನದ ಅಲ್ಲಲ್ಲಿ ನೀರು ತುಂಬಿ ಕೊಂಡಿತು. ಸುಮಾರು ಅರ್ಧ ಗಂಟೆಗಳ ಕಾಲ ಸುರಿದ ಮಳೆ ನಿಂತ ಬಳಿಕ, ಭಾರೀ ಪ್ರಯತ್ನಗಳಿಂದ ಮೈದಾನದಲ್ಲಿ ನಿಂತಿದ್ದ ನೀರನ್ನು ತೆಗೆದು ಆಟಕ್ಕೆ ಅಣಿಗೊಳಿಸಲಾಯಿತು.
ಮತ್ತೆ ಪಂದ್ಯ ಆರಂಭಗೊಳ್ಳುತ್ತಿದ್ದಂತೆಯೇ ಚೇಂದಂಡ ತಂಡ ಮತ್ತೆ ದಾಳಿಯನ್ನು ಸಂಘಟಿಸಿ ಇನ್ನೇನು ಮಂಡೇಪಂಡ ತಂಡದ ವಿರುದ್ಧ ಸಮಬಲದ ಗೋಲು ದಾಖಲಿಸಿತು ಎನ್ನುವಷ್ಟರಲ್ಲೆ, ಮಂಡೇಪಂಡ ತಂಡ ಯುವ ಪ್ರತಿಭೆ, ಗೋಲ್ ಕೀಪರ್ ದ್ಯಾನ್ ಬೋಪಣ್ಣ ಆಕರ್ಷಕವಾಗಿ ಚೆಂಡನ್ನು ತಡೆಗಟ್ಟಿ, ಮಂಡೇಪಂಡ ತಂಡದ ಮುನ್ನಡೆಯನ್ನು ಅಬಾಧಿತವಾಗಿ ಉಳಿಯುವಂತೆ ಮಾಡಿದರು. ಈ ಹಂತದಲ್ಲಿ ಮತ್ತೆ ಆರಂಭಗೊಂಡ ಮಳೆ ಮೈದಾನವನ್ನು ಅಕ್ಷರಶಃ ಹೊಳೆಯನ್ನಾಗಿಸುವುದರೊಂದಿಗೆ ಪಂದ್ಯ ಸ್ಥಗಿತಗೊಂಡಿತು. ನಿಯಮದಂತೆ ಮಂಡೇಪಂಡಕ್ಕೆ ಗೆಲುವು- ಮಳೆಯ ಆರ್ಭಟ ಇಳಿಮುಖವಾದರು ಮೈದಾನ ಮಳೆಯ ನೀರಿನಿಂದ ಆವರಿಸಿಕೊಂಡು ಸರಿಪಡಿಸಲಾಗದ ಹಂತವನ್ನು ಮುಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ, ಆಯೋಜಕರು, ತೀರ್ಪುಗಾರರು ಮತ್ತು ಇತ್ತಂಡಗಳ ವ್ಯವಸ್ಥಾಪಕರು ಪರಸ್ಪರ ಚರ್ಚಿಸುವುದರೊಂದಿಗೆ, ಮಂಡೇಪಂಡವನ್ನು ವಿಜಯಿ ಎಂದು ಘೋಷಿಸಲಾಯಿತು.
ತೋಯ್ದು ತೊಪ್ಪೆಯಾದ ಪ್ರೇಕ್ಷಕ ವರ್ಗ- ಎರಡು ಭಾರಿ ಸುರಿದ ಭಾರೀ ಮಳೆಗೆ ಪ್ರೇಕ್ಷಕ ವರ್ಗ ತೋಯ್ದು ತೊಪ್ಪೆಯಾಯಿತು. ಹೀಗಿದ್ದೂ ಅವರಲ್ಲಿನ ಕ್ರೀಡಾ ಉತ್ಸಾಹ ಬತ್ತಿರಲಿಲ್ಲ, ಮೈದಾನದ ನಾಲ್ಕು ಮೂಲೆಗಳಿಂದ ವಾಲಗಕ್ಕೆ ಗ್ಯಾಲರಿಯಲ್ಲೆ ನಿಂತುಕೊಂಡು ನೃತ್ಯ ಮಾಡುತ್ತಿದ್ದುದು ವಿಶೇಷ. ಹೀಗಿದ್ದೂ ಬೆಳ್ಳಿ ಮಹೋತ್ಸವದ ಫೈನಲ್ಸ್ ಪೂರ್ಣ ಪ್ರಮಾಣದಲ್ಲಿ ನಡೆಯದ ಬೇಸರ ಕ್ರೀಡಾ ಪ್ರೇಮಿಗಳ, ಆಯೋಜಕರ ಮನದಲ್ಲಿ ಮೂಡಿತು. ನೆಲ್ಲಮಕ್ಕಡ ತೃತೀಯ ಸ್ಥಾನ- ಅಂತಿಮ ಪಂದ್ಯಕ್ಕೂ ಮುನ್ನ ನಡೆದ ತೃತೀಯ ಸ್ಥಾನದ ಪಂದ್ಯದಲ್ಲಿ ನೆರವಂಡ ತಂಡ 2-1 ಗೋಲುಗಳ ಅಂತರದಿಂದ ಕುಪ್ಪಂಡ (ಕೈಕೇರಿ) ತಂಡವನ್ನು ಮಣಿಸಿತು. ನೆಲ್ಲಮಕ್ಕಡ 3ನೇ ಹಾಗೂ ಕುಪ್ಪಂಡ (ಕೈಕೇರಿ) ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.