
ಮಡಿಕೇರಿ ಏ.28 NEWS DESK : ಹವಮಾನದ ವೈಪರಿತ್ಯ ಮತ್ತು ಆರೋಗ್ಯದ ಪರಿಸ್ಥಿತಿ ನಿಭಾಯಿಸಲು ವೈದ್ಯಕೀಯ ಕಾಲೇಜುಗಳ ಪಾತ್ರ ಮಹತ್ವದ್ದು ಎಂದು ಆರೋಗ್ಯ ಮತ್ತು ಕುಟುಂಬಗಳ ಕಲ್ಯಾಣ ಇಲಾಖೆಯ ಜನರಲ್ ಡೈರೆಕ್ಟರ್ ಡಾ.ರವಿಕುಮಾರ್ ಹೇಳಿದರು. ಜಿಮ್ಸ್ ಕಲುಬುರ್ಗಿ ಯುನಿಸೆಫಾ ಹಾಗೂ ಎನ್ ಹೆಚ್ ಎಮ್ ಸಹಾಯೋಗದೊಂದಿಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಮುದಾಯ ವೈದ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಹವಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಷಯದ ಬಗ್ಗೆ ದಕ್ಷಿಣ ಕರ್ನಾಟಕದ ವಿವಿಧ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಿಬ್ಬಂದಿಗಳಿಗೆ ಎರಡು ದಿನಗಳ ತರಬೇತಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹವಮಾನ ಬದಲಾವಣೆಯಿಂದ ಮಾನವನ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ರಾಮಚಂದ್ರ ಕಾಮತ್ ಮಾತನಾಡಿ, ದುಷ್ಪರಿಣಾಮಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ವೈದ್ಯಕೀಯ ಸಂಸ್ಥೆಗಳ ಸುಮಾರು 30 ಸಿಬ್ಬಂದಿಗಳು ಹಾಜರಿದ್ದು, ತರಬೇತಿಯ ಸದುಪಯೋಗವನ್ನು ಪಡೆದುಕೊಂಡರು.









