
ನಾಪೋಕ್ಲು ಏ.28 NEWS DESK : ಬಲ್ಲಮಾವಟಿ ಗ್ರಾಮದ ರಾಟೆ ಭಗವತಿ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಿಯನ್ನು ರಾಟೆಯ ಉಯ್ಯಾಲೆಯಲ್ಲಿ ತೂಗುವ ವಿಶಿಷ್ಟ ಆಚರಣೆಯಲ್ಲಿ ಊರಿನ ಪರ ಊರಿನ ಭಕ್ತರು ಪಾಲ್ಗೊಂಡಿದ್ದರು. ಬಲ್ಲತ್ತನಾಡಿನ ಪುರಾತನ ಭಗವತಿ ಭದ್ರಕಾಳಿ ದೇವಾಲಯದಲ್ಲಿ ಈ ಉತ್ಸವಕ್ಕಾಗಿ ದೇವಾಲಯದ ಮುಂಭಾಗದಲ್ಲಿ ದೊಡ್ಡ ಕಬ್ಬಿಣದ ರಾಟೆಯಲ್ಲಿ ದೇವರ ವಿಗ್ರಹವನ್ನು ತುಗಲಾಗುತ್ತದೆ. ಈ ಸಂದರ್ಭ ಭಕ್ತರು ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಹಾಗೂ ಸಾಂಪ್ರದಾಯಿಕ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಉತ್ಸವದ ಅಂಗವಾಗಿ ಭದ್ರಕಾಳಿ ದೇವಿಯ ವಿಗ್ರಹವನ್ನು ರಾಟೆ ಉಯ್ಯಾಲೆಯಲ್ಲಿ ತೂಗುವುದು ಮಾತ್ರವಲ್ಲದೆ ಮೂರು ತೆರೆ ಮುಡಿ ಕೋಲಗಳು ದೇವಾಲಯದ ಮೈದಾನದಲ್ಲಿ ನೆರವೇರಿತು. ಈ ಸಂದರ್ಭ ಭಕ್ತಾದಿಗಳು ಹರಕೆ ಕಾಣಿಕೆ ಒಪ್ಪಿಸಿ, ಪ್ರಸಾದ ಸ್ವೀಕರಿಸಿದರು.
ವರದಿ : ದುಗ್ಗಳ ಸದಾನಂದ.










