Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ಸಮಗ್ರ ಸಮೀಕ್ಷೆ : ಪರಿಶಿಷ್ಟ ಜಾತಿಗಳ ಕುಟುಂಬ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಗಮನಹರಿಸಲು : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ಸಮಗ್ರ ಸಮೀಕ್ಷೆ : ಪರಿಶಿಷ್ಟ ಜಾತಿಗಳ ಕುಟುಂಬ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಗಮನಹರಿಸಲು : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ

ಏಪ್ರಿಲ್ 28, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.28 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ 5 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್‍ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಮಾಸ್ಟರ್ ಟ್ರೈನರ್‍ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ಹೇಳುವ ಮಾಹಿತಿ ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬಂಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಅತೀಮುಖ್ಯ ಕಾರ್ಯದಲ್ಲಿ ಒಂದಾಗಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯಲ್ಲಿನ ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಮೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿಗಳು ವೈಜ್ಞಾನಿಕ ಮತ್ತು ವಸ್ತುನಿಷ್ಠವಾಗಿ ಸಮೀಕ್ಷೆ ಮಾಡಬೇಕು. ಸಂಶಯಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ನಡೆಸಬೇಕು ಎಂದು ಸಲಹೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮೀಕ್ಷೆ ಕೈಗೊಳ್ಳಲಾಗಿದ್ದು, ಮೊಬೈಲ್ ಆ್ಯಪ್ ಆಧಾರ್‍ದಲ್ಲಿ ಮನೆ ಮನೆ ಸಮೀಕ್ಷೆ ಮಾಡಬೇಕಿದೆ ಎಂದು ತಿಳಿಸಿದರು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು, ಯಾವುದೇ ರೀತಿಯ ಸಂಶಯ ಇಲ್ಲದಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕೈಗೊಳ್ಳುವಂತೆ ಸಲಹೆ ಮಾಡಿದರು. ಜಿಲ್ಲೆಯ 544 ಪೋಲಿಂಗ್ ಸ್ಟೇಷನ್ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ತಾಲ್ಲೂಕು ಸಂಪನ್ಮೂಲ ತರಬೇತಿ ಅಧಿಕಾರಿಗಳು ಸಮೀಕ್ಷೆ ಮಾಡುವವರಿಗೆ ಸರಿಯಾದ ಮಾಹಿತಿ ನೀಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸಮಗ್ರ ಸಮೀಕ್ಷೆ ಕೈಗೊಂಡು ದತ್ತಾಂಶ ಸಂಗ್ರಹಿಸಬೇಕಿದೆ ಎಂದರು. ಮೇ, 05 ರಿಂದ 17 ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಹಾಗೆಯೇ ಮೇ, 19 ರಿಂದ 21 ರವರೆಗೆ ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರ ಕೈಗೊಂಡು ಮನೆ ಮನೆ ಭೇಟಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿಗಳ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು. ‘ಪರಿಶಿಷ್ಟ ಜಾತಿ ಮುಖಂಡರ ಜೊತೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಏಪ್ರಿಲ್ 29 ರಂದು ಸಭೆ ನಡೆಯಲಿದ್ದು, ಪರಿಶಿಷ್ಟ ಜಾತಿಗಳ ಸಮಾಜದವರು ಸ್ವಯಂ ಪ್ರೇರಣೆಯಿಂದ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ ಎಂದು ಶೇಖರ್ ಅವರು ಇದೇ ಸಂದರ್ಭದಲ್ಲಿ ಕೋರಿದರು. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯತ್ ವ್ಯಾಪ್ತಿಯ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ (ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ), ಸೋಮವಾರಪೇಟೆಯ ಅಂಬೇಡ್ಕರ್ ಭವನ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ, ಈ ತಾಲ್ಲೂಕುಗಳಲ್ಲಿ ಬೆಳಗ್ಗೆ 11 ಹಾಗೂ ಕುಶಾಲನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ತಹಶೀಲ್ದಾರರ ನೇತೃತ್ವದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಶೇಖರ್ ಅವರು ತಿಳಿಸಿದರು.’ ಮೇ, 02 ರಂದು ಗಣತಿದಾರರ ಹಂತದಲ್ಲಿ ತರಬೇತಿ ನಡೆಯಲಿದೆ. ತರಬೇತಿಗೆ ನಿಯೋಜನೆಗೆ ಆಗಿರುವ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಪರಿಶಿಷ್ಟ ಜಾತಿಯಲ್ಲಿನ ಮೂಲ ಜಾತಿಯನ್ನು ಸಮೀಕ್ಷೆ ಮಾಡುವುದು ಅತೀ ಮುಖ್ಯವಾಗಿದೆ ಎಂದು ಶೇಖರ್ ನುಡಿದರು. ‘ಮಾಸ್ಟರ್ ತರಬೇತಿದಾರರಾದ ಪ್ರಶಾಂತ್ ಅವರು ಮಾತನಾಡಿ ಮೊಬೈಲ್ ಅಪ್ಲಿಕೇಶನ್‍ನಲ್ಲಿ ಮಾಹಿತಿ ತುಂಬುವ ವಿಧಾನ, ಜಾತಿ, ಮೂಲ ಜಾತಿ/ಉಪ ಜಾತಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಮತ್ತು ಸದಸ್ಯರ ಹೆಸರು, ಲಿಂಗ, ವಯಸ್ಸು, ಆಧಾರ್ ಕಾರ್ಡ್ ಸಂಖ್ಯೆ, ಶಿಕ್ಷಣ/ ವಿಧ್ಯಾಭ್ಯಾಸ, ವೃತ್ತಿ, ಕುಟುಂಬದ ಕುಲಕಸುಬು, ಆಸ್ತಿವಿವರ, ಕೃಷಿ, ಕುಟುಂಬದ ಆದಾಯ, ಉದ್ಯೋಗ, ಹೀಗೆ ಹಲವು ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್‍ನಲ್ಲಿ ತುಂಬಬೇಕಿದೆ ಎಂದು ಮಾಹಿತಿ ನೀಡಿದರು.’ ಇನ್ನಷ್ಟು ಮಾಹಿತಿ:ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುವ ಜಾತಿಗಳನ್ನು ಉಪ ವರ್ಗೀಕರಣ ಮಾಡಿ ಒಳ ಮೀಸಲಾತಿಯನ್ನು ನೀಡಬಹುದು ಎಂದು 2024ರ ಆಗಸ್ಟ್, 01 ರಂದು ತೀರ್ಪು ನೀಡಿದೆ. ಕರ್ನಾಟಕ ಸರ್ಕಾರವು ಒಳಮೀಸಲಾತಿ ಜಾರಿ ಮಾಡಲು ಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕವ್ಯಕ್ತಿ ವಿಚಾರಣಾ ಆಯೋಗವನ್ನು ನೇಮಿಸಿ ಒಳ ಮೀಸಲಾತಿ ವರ್ಗೀಕರಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಉಪ ವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶ ಸಂಗ್ರಹಿಸಲು ಸಮೀಕ್ಷೆ ಕೈಗೊಳ್ಳಲು ಉದ್ದೇಶಿಸಿದೆ. ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಮತ್ತಿತರ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು ಆಯೋಗದ ಉದ್ದೇಶವಾಗಿದೆ. ಪರಿಶಿಷ್ಟ ಜಾತಿಗಳ ಸ್ಥಿತಿಗತಿಗಳ ಬಗ್ಗೆ ವೈಜ್ಞಾನಿಕವಾಗಿ ಮತ್ತು ವಾಸ್ತವಿಕ ಮಾಹಿತಿ ಪಡೆದುಕೊಂಡು ಒಳ ಮೀಸಲಾತಿ ವರ್ಗೀಕರಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು ಆಯೋಗದ ಉದ್ದೇಶವಾಗಿದೆ. ಪರಿಶಿಷ್ಟ ಜಾತಿಗಳ ನಿರ್ದಿಷ್ಟ ಸಂಖ್ಯೆ ಯಾವುದೇ ಸಮೀಕ್ಷೆ ದಾಖಲೆಗಳಿಂದ ಜಾತಿಗಳ ಜಾತಿವಾರು ಜನಸಂಖ್ಯೆಯ ಅಂಕಿ ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಸಮೀಕ್ಷೆ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಒಳ ಮೀಸಲಾತಿ ಉಪವರ್ಗೀಕರಣ ಮಾಡಲು ಸಾಧ್ಯವಾಗದೇ ಇರುವುದರಿಂದ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ಕೈಗೊಂಡು ವರ್ಗೀಕರಣ ಮಾಡುವುದು ಸಮೀಕ್ಷೆಯ ಉದ್ದೇಶವಾಗಿದೆ. ಸಮೀಕ್ಷೆಯಿಂದ ಹೊರಹೊಮ್ಮಿದ ಅಂಶಗಳ ಆಧಾರದಲ್ಲಿ ಅಂತಹ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಾನಮಾನ ಅಧ್ಯಯನ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡುವುದಕ್ಕಾಗಿ ರಾಜ್ಯಾದ್ಯಂತ ಎಲ್ಲಾ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಕುರಿತು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.