
ಮಡಿಕೇರಿ ಏ.30 NEWS DESK : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 2024ರ ಜನವರಿ, 01 ರಿಂದ 2024ರ ರ ಡಿ. 31 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಮೇ, 20 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು. ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.









