Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
  • *ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿವೈಎಸ್ಪಿ ಗಂಗಾಧರಪ್ಪಗೆ ಬೀಳ್ಕೊಡುಗೆ : ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಮುಖ್ಯ : ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿವೈಎಸ್ಪಿ ಗಂಗಾಧರಪ್ಪಗೆ ಬೀಳ್ಕೊಡುಗೆ : ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಮುಖ್ಯ : ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅಭಿಮತ*

ಮೇ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 1 NEWS DESK : ಕುಶಾಲನಗರದಲ್ಲಿ ಪೊಲೀಸ್ ಉಪ ಅಧೀಕ್ಷಕ ( ಡಿವೈಎಸ್ಪಿ )ರಾಗಿ ಸೇವೆ ಸಲ್ಲಿಸುತ್ತಿದ್ದು, ಬೆಂಗಳೂರಿಗೆ ವರ್ಗಾವಣೆ ಆಗಿರುವ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಅವರಿಗೆ ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕುಶಾಲನಗರ  ರೈತ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಪರ ಕೆಲಸ ಮಾಡಿದವರನ್ನು ಸಮಾಜ ಸದಾ ಸ್ಮರಿಸುತ್ತದೆ. ಇದಕ್ಕೆ ಜ್ಬಲಂತ ಉದಾಹರಣೆ ಡಿವೈಎಸ್ಪಿ ಗಂಗಾಧರಪ್ಪ ಅವರ ಸೇವಾ ತತ್ಪರತೆ ಹಾಗೂ ಕರ್ತವ್ಯ ನಿಷ್ಠೆಯೇ ಸಭೆಯಲ್ಲಿ ಸೇರಿರುವ ಜನರೇ ಸಾಕ್ಷಿಯಾಗಿದ್ದಾರೆ ಎಂದರು. ಡಿವೈಎಸ್ಪಿ ಗಂಗಾಧರಪ್ಪ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪರಿಣಾಮ ಕುಶಾಲನಗರದ ಜನತೆ ಒಗ್ಗೂಡಿ ನಾಗರಿಕ ಸನ್ಮಾನ ಮಾಡುತ್ತಿರುವುದೇ ಅವರ ಕರ್ತವ್ಯ ನಿಷ್ಠೆಯ ದ್ಯೋತಕವಾಗಿದೆ ಎಂದು ಬಣ್ಣಿಸಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಾಗರಿಕರ ಕೂಡ ಅಗತ್ಯ ಎಂದು ಡಾ ಅಶೋಕ ಆಲೂರ ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿ.ಪಿ.ಶಶಿಧರ್, ತಮ್ಮ ಸೇವಾವಧಿಯಲ್ಲಿ ಪ್ರಾಮಾಣಿಕ, ದಕ್ಷ ಹಾಗೂ ಜನಸ್ನೇಹಿ ಅಧಿಕಾರಿಯಾಗಿ ಅಧಿಕಾರಿ ವೃಂದಕ್ಕೆ ಮಾದರಿಯಾಗಿರುವ ಡಿವೈಎಸ್ಪಿ ಗಂಗಾಧರಪ್ಪ ಅವರು ಜನಸ್ನೇಹಿ ಅಧಿಕಾರಿಯಾಗಿ ಜನಮಾನಸದಲ್ಲಿ ಸದಾ ಹಸಿರಾಗಿ ಉಳಿಯುತ್ತಾರೆ ಎಂದರು. ಸರ್ಕಾರದ ಕಟ್ಟುಪಾಡುಗಳೊಂದಿಗೆ ಕಾನೂನು ಪರಿಪಾಲಿಸುವ ಮೂಲಕ ಸಮಾಜದ ದುಷ್ಟ ಶಕ್ತಿಗಳ ದಮನಕ್ಕೆ ಕಾರಣವಾಗಿ ಶ್ರಮಿಸುವ ಇಂತಹ ಅಧಿಕಾರಗಳ ಸೇವೆಯು ಇಂದಿನ ಅಗತ್ಯವಾಗಿದೆ ಎಂದರು. ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿ, ಇವತ್ತಿನ ರಾಜಕೀಯ ಪರಿಸ್ಥಿತಿ ಹಾಗೂ ಕೆಲಸದ ಒತ್ತಡದ ನಡುವೆ ಡಿವೈಎಸ್ಪಿ ಗಂಗಾಧರಪ್ಪ ಅವರು ಜನಸ್ನೇಹಿ ಅಧಿಕಾರಿಯಾಗಿ ಕುಶಾಲನಗರ ಭಾಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು. ಕುಶಾಲನಗರ ರೈತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಮಾತನಾಡಿ, ಇಂತಹ ಅಧಿಕಾರಿಗಳ ಕರ್ತವ್ಯ ನಿಷ್ಠೆಯು ಇತರೆ ಅಧಿಕಾರಿಗಳಿಗೆ ಮಾದರಿಯಾಗಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಗಂಗಾಧರಪ್ಪ, ಕೊಡಗು ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದು ಮನಃಪೂರ್ವಕವಾಗಿ ಕೆಲಸ ‌ತೃಪ್ತಿ ತಂದಿದೆ, ಇಲ್ಲಿನ ಜನರ ಶಿಸ್ತು, ಪ್ರೀತಿ- ವಿಶ್ವಾಸ ಕ್ಕೆ ತಾವು ಸದಾ ಚಿರೃಣಿಯಾಗಿರುತ್ತೇನೆ ಎಂದರು. ಕಾನೂನು ಪರಿಪಾಲನೆ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದರೆ ಎಂತಹ ಜಟಿಲ ಸಮಸ್ಯೆಗಳನ್ನು ಕೂಡ ಸುಲಭವಾಗಿ ಪರಿಹರಿಸಲು ಸಾಧ್ಯ ಎಂದು ಗಂಗಾಧರಪ್ಪ ಹೇಳಿದರು. ಇದೇ ವೇಳೆ ಡಿವೈಎಸ್ಪಿ ಗಂಗಾಧರಪ್ಪ ಮತ್ತು ಅವರ ಪತ್ನಿ ಪ್ರಿಯಾಂಕ ಅವರನ್ನು ಪ್ರಜ್ಞಾವಂತ ನಾಗರಿಕ ವೇದಿಕೆ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಸತೀಶ್, ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಚ್.ನಜೀರ್ ಅಹ್ಮದ್, ನಗರ ಛೇಂಬರ್ ಆಫ್ ಕಾಮರ್ಸ್ ನ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿದರು. ಪುರಸಭೆ ಸದಸ್ಯ ವಿ.ಎಸ್.ಆನಂದಕುಮಾರ್, ಎ.ಪಿ.ಸಿ.ಎಂ.ಎಸ್.ನ ಉಪಾಧ್ಯಕ್ಷ ದೊಡ್ಡಯ್ಯ, ವಿವಿಧ ಸಂಘಟನೆಗಳ ಪ್ರಮುಖರು, ನಾಗರಿಕರು ಇದ್ದರು. ಕೆ.ಎಸ್.ಮೂರ್ತಿ ಸ್ವಾಗತಿಸಿದರು. ಉಪನ್ಯಾಸಕ ಜಮೀಲ್ ಅಹ್ಮದ್, ಶಿಕ್ಷಕಿ ಗಾಯತ್ರಿ ನಿರ್ವಹಿಸಿದರು. ಟಿ.ಜಿ.ಪ್ರೇಮಕುಮಾರ್ ವಂದಿಸಿದರು. ಕಲಾವಿದ ಬಿ.ಎಸ್.ಲೋಕೇಶ್ ಸಾಗರ್ ಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.25 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ…

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.