
ಮಡಿಕೇರಿ ಮೇ 1 NEWS DESK : ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಎಂ.ಸಿ. ಮುತ್ತಣ್ಣ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಟಿ.ಎನ್.ಶಾಂತಿ ಅವರನ್ನು ಇಲಾಖಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.










