
ಮಡಿಕೇರಿ ಮೇ 2 NEWS DESK : ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ ಯುವ ವೇದಿಕೆಯ ಸಹಯೋಗದಲ್ಲಿ 2ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೇ 3 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಪುದಿಯನೆರವನ ರೇವತಿ ರಮೇಶ್, ನಗರಸಭಾ ಸದಸ್ಯೆ ಕುಟ್ಟನ ಶ್ವೇತಾ ಪ್ರಶಾಂತ್, ಕಾಫಿ ಬೆಳೆಗಾರರಾದ ದಂಬೆಕೋಡಿ ಲೀಲಾ ಚಿಣ್ಣಪ್ಪ, ಮೂಟೇರ ಬೀನಾ ಸ್ಟಾರ್‍ಸನ್, ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾದ ವಿನುತ ಪಾತಿಕಲ್ಲು ಸುಳ್ಯ ಹಾಗೂ ಅಶ್ವಿನಿ ಕೃಷ್ಣಕಾಂತ್ ಭಾಗವಹಿಸಲಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಮಂದ್ರೀರ ಸುಗೀತಾ ಜಯಪ್ರಕಾಶ್, ಕೋಶಾಧಿಕಾರಿ ಚೊಕ್ಕಾಡಿ ಪ್ರೇಮ ರಾಘವಯ್ಯ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಕಾವ್ಯಶ್ರೀ ಕಪಿಲ್ ದುಗ್ಗಳ, ಸಂಘಟನಾ ಕಾರ್ಯದರ್ಶಿ ತೋಟಂಬೈಲು ಪ್ರೇಮ ಆನಂದ ಹಾಗೂ ಮಹಿಳಾ ಕ್ರಿಕೆಟ್ ಪಂದ್ಯಾವಳಿಯ ಸಹ ಸಂಚಾಲಕರಾದ ಪರಿಚನ ಸೋನಿ ಶರತ್ ಉಪಸ್ಥಿತರಿರುವರು.










