Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಯಲಹಂಕದಲ್ಲಿ 14 ಅಡಿಗಳ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ : ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

ಯಲಹಂಕದಲ್ಲಿ 14 ಅಡಿಗಳ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ : ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಮೇ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಯಲಹಂಕ ಮೇ 3 NEWS DESK : ಯಲಹಂಕದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು  ಲೋಕಾರ್ಪಣೆಗೊಳಿಸಿದರು.  ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದರು. ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರರು. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು. ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೂ ಉಳಿದು ಕೊಳ್ಳುವುದು ಹುಟ್ಟಿದ ಜಾತಿಯಲ್ಲಿ ಮಾತ್ರ. ಆದ್ದರಿಂದ ಈ ಜಾತಿ ವ್ಯವಸ್ಥೆ ನಿಂತ ನೀರಿನಂತಿದೆ. ಇದನ್ನು ಮನಗಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಯಶಸ್ಸನ್ನು ಕಾಣಬೇಕಾದರೆ ಈ ದೇಶದ ಅವಕಾಶ ವಂಚಿತರು, ಶೋಷಿತರು, ದೌರ್ಜನ್ಯಕ್ಕೆ ಒಳಗಾದವರಿಗೆಲ್ಲರಿಗೂ ಸಮಾನ ಅವಕಾಶಗಳು ದೊರೆತು ಅವರೆಲ್ಲರೂ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಬೇಕು ಎಂದಿದ್ದರು. ಸ್ವಾತಂತ್ರ್ಯಾನಂತರ ಒಬ್ಬ ವ್ಯಕ್ತಿ , ಒಂದು ಮತ ಜಾರಿಗೆ ಬಂದಿದೆ. ಇದು ಈ ದೇಶದ ರಾಷ್ಟ್ರಪತಿಗಳಿಗೂ ಒಂದೇ ಮತ, ಒಬ್ಬ ಪೌರಕಾರ್ಮಿಕನಿಗೂ ಒಂದೇ ಮತ. ಬಸವಣ್ಣನವರು ಹೇಳಿದ್ದು ಇದನ್ನೇ. ಅಂಬೇಡ್ಕರ್ ಅವರು ಕೂಡಾ ಬಸವಣ್ಣನವರ ವಚನಗಳನ್ನು ಓದಿದ್ದರು ಎಂಬುದು ಅವರ ಬರಹಗಳಿಂದ ತಿಳಿದು ಬರುತ್ತದೆ. ಸಮಾಜದಲ್ಲಿ ಯಾವ ಕೆಲಸವೂ ಮೇಲೂ ಅಲ್ಲ, ಕೀಳೂ ಅಲ್ಲ. ಎಲ್ಲವೂ ಸಮಾನ ಎಂದೇ ಪ್ರತಿಪಾದಿಸಿದರು. ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ ಆದರೆ ಸಾಮಾಜಿಕ ಆರ್ಥಿಕ ಸಿಕ್ಕಿಲ್ಲ. ಎಲ್ಲಿವರೆಗೂ ಇದು ಸಿಗುವುದಿಲ್ಲ ಅಲ್ಲಿಯವರೆಗೆ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಿಲ್ಲ. ನಮ್ಮ ಸರ್ಕಾರವು ಇದನ್ನೇ ನಂಬಿದ್ದು, ನಾವು ರೂಪಿಸುತ್ತಿರುವ ಕಾರ್ಯಕ್ರಮಳೂ ಇದೇ ಹಿನ್ನೆಲೆಯಿಂದ ಮೂಡಿಬಂದಿವೆ. ಜನರನ್ನು ಹಿಂದಕ್ಕೆ ಮಾತ್ರ ತಳ್ಳಬೇಡಿ. ಮುಂದಕ್ಕೆ ಎಳೆಯಲು ಪ್ರಯತ್ನ ಮಾಡಬೇಕು. ಮುಂದಕ್ಕೆ ಎಳೆಯಲು ಸಾಧ್ಯವಾಗದಿದ್ದರೆ ಅಲ್ಲೇ ಬಿಡಿ. ಆದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ ಎಂದು ಅಂಬೇಡ್ಕರ್ ಹೇಳಿದ್ದರು. ಅವರು ಓದಿಕೊಂಡಿರುವುದು ಸ್ವಾರ್ಥಕ್ಕಾಗಿ ಅಲ್ಲ, ಅಸಮಾನತೆಯನ್ನು ಹೋಗಲಾಡಿಸಲು ಎಂದು ತಿಳಿಸಿದ್ದರು. ನಾವು ಸಾಧ್ಯವಾದಷ್ಟರ ಮಟ್ಟಿಗೆ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ, ಸಾಮಾಜಿಕವಾಗಿ ಜನರಲ್ಲಿ ಶಕ್ತಿ ತುಂಬಲು ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಆರ್ಥಿಕವಾಗಿ ಶಕ್ತಿ ತುಂಬದಿದ್ದರೆ ಅಸಮಾನತೆ ಹೋಗಲಾಡಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಬೇಕು. ಒಂದೇ ಬಾರಿಗೆ ಎಲ್ಲರನ್ನೂ ಮುಖ್ಯವಾಹಿನಿಗೆ ತರಲು ಸಾಧ್ಯವಾಗದಿದ್ದರೂ ಕ್ರಮೇಣವಾಗಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮ ಹೋರಾಟ ನಿರಂತರವಾಗಿರಬೇಕು. ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಮೂರು ಮಂತ್ರಗಳನ್ನು ಬಿಟ್ಟು ಹೋಗಿದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು. ಆಗ ಮಾತ್ರ ಸ್ವಾಭಿಮಾನ, ಜ್ಞಾನ ಬರಲು, ಸಂಘಟಿತರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಅಂಬೇಡ್ಕರ್ ಅವರು ಅಂದಿನ ಕಾಲದಲ್ಲಿಯೇ ಎಷ್ಟೇ ಕಷ್ಟವಾದರೂ, ಮಾನಸಿಕ ತೊಂದರೆಯಾದರೂ ಶಿಕ್ಷಣವನ್ನು ಬಿಡಲಿಲ್ಲ. ಅಂಬೇಡ್ಕರ್ ಅವರೊಬ್ಬ ದೂರದೃಷ್ಟಿಯಿದ್ದ ನಾಯಕರು. ಅಂಥವರಿಗೆ ಮಾತ್ರ ನೂರು ವರ್ಷಗಳಲ್ಲಿ ಸಮಾಜದಲ್ಲಿ ಏನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತದೆ. ವಿಶ್ವನಾಥ್ ಅವರು ಯಲಹಂಕದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದಾಗಿ ಹೇಳಿರುವುದನ್ನು ನಾನು ಸ್ವಾಗತಿಸುತ್ತೇನೆ. ಯಲಹಂಕದಲ್ಲಿ ದಲಿತರು ಹಿಂದುಳಿದವರೇ ಹೆಚ್ಚಿದ್ದು, ಎಲ್ಲರಿಗೂ ನ್ಯಾಯ ದೊರಕಿಸುವ ಕೆಲಸವನ್ನು ವಿಶ್ವನಾಥ್ ಮಾಡುತ್ತಿದ್ದಾರೆ. ವಿಶ್ವನಾಥ್ ಅವರ ಕ್ಷೇತ್ರಕ್ಕೆ ಅನುದಾನದ ಬೇಡಿಕೆಯನ್ನು ಪರಿಗಣಿಸಲಾಗುವುದು. ಸಮಗ್ರ ಸಾಮಾಜಿಕ ವ್ಯವಸ್ಥೆ ಬದಲಾಗಬೇಕು. ಅಂಬೇಡ್ಕರ್ ದಲಿತರಾಗಿ ಹುಟ್ಟಿದರೂ ಸಾಮಾಜಿಕ ನ್ಯಾಯದಿಂದ ವಂಚಿತರಾದವರೆಲ್ಲರ ನಾಯಕರಾಗಿದ್ದರು. ಈ ದೇಶದಲ್ಲಿ ಅವರು ಹುಟ್ಟಿರವುದೇ ಹೆಮ್ಮೆಯ ಸಂಗತಿ. ಅಂಬೇಡ್ಕರ್ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ, ಪ್ರತಿಮೆಗಳು ಸಂಕೇತಗಳಾದರೂ, ಇವುಗಳಿಂದ ಅಂಬೇಡ್ಕರ್ ಅವರ ವಿಚಾರಗಳು ಇನ್ನಷ್ಟು ಪಸರಿಸಲಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸರ್ಕಾರದ ಸಚಿವರುಗಳು, ಶಾಸಕರುಗಳು, ಸಂಪುಟ ಸಹದ್ಯೋಗಿಗಳಲ್ಲದೆ ಮಾತ್ರವಲ್ಲದೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ  ಭಾಗವಹಿಸಿ ಶುಭ ಕೋರಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.