Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಕೊಲೆ : ಐವರು ಆರೋಪಿಗಳ ಬಂಧನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಕೊಲೆ : ಐವರು ಆರೋಪಿಗಳ ಬಂಧನ

ಮೇ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಮೇ 3 : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಗಣ ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯೊಂದರಲ್ಲಿ ಇತ್ತೀಚೆಗೆ ನಡೆದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿ ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದ ಅನಿಲ್ ಎನ್.ಎಸ್.(25), ಸೋಮವಾರಪೇಟೆ ತಾಲ್ಲೂಕಿನ ಅಬ್ಬೂರುಕಟ್ಟೆಯ ದೀಪಕ್(21), ನೇರುಗಳಲೆಯ ಸ್ವೀಫನ್ ಡಿಸೋಜ(26), ಹಿತ್ತಲಮಕ್ಕಿಯ ಕಾರ್ತಿಕ್ ಹೆಚ್.ಎಂ.(27) ಹಾಗೂ ಪೊನ್ನಂಪೇಟೆಯ ನಲ್ಲೂರು ಗ್ರಾಮದ ಹರೀಶ್ ಪಿ.ಎಸ್.(29) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರ ಬಳಯಿಂದ 13.03 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, 2 ಮೊಬೈಲ್, ಮೃತ ವ್ಯಕ್ತಿಯ ಮೊಬೈಲ್ ಮತ್ತು ಮೃತ ವ್ಯಕ್ತಿಗೆ ಸೇರಿದ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯಲ್ಲಿ ವಾಸವಿದ್ದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿಯವರನ್ನು ಇದೇ ಏ.23 ರಂದು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಕುರಿತು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಅನಿಲ್ ಎನ್.ಎಸ್., ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗುವ ಪ್ರಯತ್ನದಲ್ಲಿದ್ದಾಗ, ಆಕೆಯ ಮನೆಯ ಕಡೆಯವರು, ನಿನ್ನ ಬಳಿ ಯಾವುದೇ ಆಸ್ತಿ ಮತ್ತು ಹಣವಿಲ್ಲವೆಂದು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಶೀಘ್ರವಾಗಿ ಆಸ್ತಿ ಮತ್ತು ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಅನಿಲ್ ತಿಳಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಬಂಧಿತ ಆರೋಪಿ ಅನಿಲ್ ತಾನು ಕೆಲಸ ಮಾಡುವ ಜಾಗಗಳಲ್ಲಿ ಇರುವವರನ್ನು ಪರಿಚಯ ಮಾಡಿಕೊಂಡು ಜಮೀನಿನಲ್ಲಿ ನಿಧಿ ಇರುವುದಾಗಿ ನಂಬಿಸಿ ಬೆಂಗಳೂರು, ಹಾಸನ, ಪೊನ್ನಂಪೇಟೆ ಕಡೆಗಳಲ್ಲಿ ಹಣ ಪಡೆದು ಮೋಸ ಮಾಡಿರುವ ಕುರಿತು ಆರೋಪವಿದೆ. ಒಂಟಿಯಾಗಿ ವಾಸ ಮಾಡುತ್ತಾ ಹೆಚ್ಚಿನ ಆಸ್ತಿ ಹೊಂದಿರುವವರನ್ನು ಗುರುತಿಸಿ ಆಸ್ತಿ ಖರೀದಿ, ಮಾರಾಟ ಮಾಡುವ ನೆಪದಲ್ಲಿ ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ತಿತಿಮತಿಯಲ್ಲಿನ ಒಂಟಿ ಮಹಿಳೆಯೊಬ್ಬರನ್ನು ಅನಿಲ್ ಸಂಪರ್ಕಿಸಿದ್ದ. ಸದರಿ ಮಹಿಳೆಗೆ ಸ್ಥಳೀಯವಾಗಿ ಸಂಬಂಧಿಕರು ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸದರಿ ವ್ಯವಹಾರವನ್ನು ಸ್ಥಗಿತಗೊಳಿಸಿದ್ದ. ಕೋಣನಕಟ್ಟೆ ಎಂಬಲ್ಲಿ 50 ಏಕರೆ ಜಾಗದ ಮಾಲೀಕರೊಬ್ಬರನ್ನು ಆಸ್ತಿ ಖರೀದಿಸುವ ನೆಪದಲ್ಲಿ ಪರಿಚಯಿಸಿಕೊಂಡು ಮನೆಯಲ್ಲಿ ಮಕ್ಕಳು ಇರುವುದರಿಂದ ವ್ಯವಹಾರವನ್ನು ಸರಿ ಬರುವುದಿಲ್ಲ ಎಂದು ಕೈಬಿಟ್ಟಿರುವ ಕುರಿತು ಎಸ್‌ಪಿ ರಾಮರಾಜನ್ ಮಾಹಿತಿ ನೀಡಿದರು. ಮೃತ ಪ್ರದೀಪ್ ಕೊಯ್ಲಿ ಅವಿವಾಹಿತ ಮತ್ತು ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ಮಾಹಿತಿಯನ್ನು ಖಚಿತ ಪಡಿಸಿಕೊಂಡಿದ್ದ ಅನಿಲ್, ತೋಟ ಖರೀದಿ ವ್ಯವಹಾರದ ಕುರಿತು ಮಧ್ಯವರ್ತಿಗಳ ಮೂಲಕ ಚರ್ಚಿಸಿದ್ದ ಎಂದು ಹೇಳಲಾಗಿದೆ. ಆಸ್ತಿ ಖರೀದಿದಾರರು ವಿದೇಶದಲ್ಲಿರುವುದಾಗಿ ತಿಳಿಸಿ ಅವರ ಪರವಾಗಿ ಮೃತ ಪ್ರದೀಪ್ ಕೊಯ್ಲಿ ಅವರಿಗೆ 1 ಲಕ್ಷ ಹಣವನ್ನು ಮುಂಗಡವಾಗಿ ನೀಡಿದ್ದನೆಂದು ಎಸ್‌ಪಿ ತಿಳಿಸಿದರು. ಪ್ರದೀಪ್ ಅವರನ್ನು ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ಮೃತದೇಹವನ್ನು ಹೂತು ಹಾಕುವ ಕುರಿತು ಉಪಾಯ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ವಿವರಿಸಿದರು.
ಪ್ರದೀಪ್ ಕೊಯ್ಲಿ ಹತ್ಯಾಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ಉಪ ವಿಭಾಗ ಮಟ್ಟದ ವಿಶೇಷ ತನಿಖಾ ತಂಡದಲ್ಲಿ ವಿರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್., ಗೋಣಿಕೊಪ್ಪಲು ಸಿಪಿಐ ಶಿವರಾಜ್ ಮುದೋಳ್, ವಿರಾಜಪೇಟೆ ಸಿಪಿಐ ಅನೂಪ್ ಮಾದಪ್ಪ ಪಿ., ಕುಟ್ಟ ಸಿಪಿಐ ಶಿವರುದ್ರ ಬಿ.ಎಸ್., ಗೋಣಿಕೊಪ್ಪ ಪಿಎಸ್‌ಐ ಪ್ರದೀಪ್ ಕುಮಾರ್, ವಿರಾಜಪೇಟೆ ಪಿಎಸ್‌ಐ ಪ್ರಮೋದ್ ಕುಮಾರ್, ಪೊನ್ನಂಪೇಟೆ ಪಿ.ಎಸ್.ಐ. ನವೀನ್ ಜಿ., ಶ್ರೀಮಂಗಲ ಪಿಎಸ್‌ಐ ರವಿಂದ್ರ, ಕುಟ್ಟ ಪಿಎಸ್‌ಐ ಮಹದೇವ ಹೆಚ್.ಕೆ., ವಿರಾಜಪೇಟೆ ಗ್ರಾಮಾಂತರ ಪಿಎಸ್‌ಐ ಲತಾ ಎನ್.ಜೆ. ಹಾಗೂ ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಮತ್ತು ಡಿಸಿಆರ್‌ಬಿ ಸಿಬ್ಬಂದಿಗಳು ತಾಂತ್ರಿಕ ಸಿಬ್ಬಂದಿಗಳು ಕಾರ್ಯಾಚರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.