Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 9 ರಿಂದ ಸುಂಟಿಕೊಪ್ಪದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಸಾಧಕರಿಗೆ ಅಭಿನಂದನಾ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 9 ರಿಂದ ಸುಂಟಿಕೊಪ್ಪದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಸಾಧಕರಿಗೆ ಅಭಿನಂದನಾ ಸಮಾರಂಭ*

ಮೇ 6, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ ಮೇ 9 ರಿಂದ 11ರ ವರೆಗೆ ಸುಂಟಿಕೊಪ್ಪದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ, ವಿವಿಧ ಕ್ರೀಡಾಕೂಟ ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸ್‍ನ್ ಪಿಂಟೋ ಮಾತನಾಡಿ, ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 14ನೇ ವರ್ಷದ ಪಂದ್ಯಾವಳಿಗೆ ಮೇ 9 ರಂದು ಚಾಲನೆ ದೊರೆಯಲಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ, ಬೆಂಗಳೂರು ಮಹಾ ಧರ್ಮಪ್ರಾಂತ್ಯದ ವಿಶ್ರಾಂತ ಮಹಾಧರ್ಮಧ್ಯಕ್ಷರಾದ ಅತೀ ವಂದನೇಯ ಡಾ.ಬರ್ನಾಡ್ ಮೋರಾಸ್ ಆರ್ಶೀವಚನ ನೀಡಲಿದ್ದಾರೆ. ಧ್ವಜಾರೋಹಣವನ್ನು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರು ಫಾ.ವಿಜಯ್ ಕುಮಾರ್ ನೆರವೇರಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯನ್ನು ಪ್ರಥಮ ಬಹುಮಾನ ದಾನಿ ವಿಲಿಯಂ, ಉದ್ಯಮಿ ಮತ್ತು ಬಹುಮಾನ ದಾನಿ ನಾಪಂಡ ಮುತ್ತಪ್ಪ ಉದ್ಘಾಟಿಸಲಿದ್ದಾರೆ. ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ವಲಯ ಶ್ರೇಷ್ಠ ಗುರು ಫಾ.ಜಾರ್ಜ್ ದೀಪಕ್, ಹಟ್ಟಿಹೊಳೆ ನಿರ್ಮಲ ಮಾತೆ ದೇವಾಲಯದ ಧರ್ಮ ಗುರು ಫಾ.ಗಿಲ್ಬರ್ಟ್ ಡಿ’ಸಿಲ್ವಾ, ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರು ಹಾಗೂ ವ್ಯವಸ್ಥಾಪಕ ಫಾ.ಮೊದಲೈ ಮುತ್ತು, ಕೂಡಿಗೆ ಪವಿತ್ರ ಕುಟುಂಬ ದೇವಾಲಯದ ಧರ್ಮ ಗುರು ಫಾ.ಚಾಲ್ರ್ಸ್ ನೊರೋನ, ಕುಶಾಲನಗರ ಸಂತ ಸೆಬಾಸ್ಟ್ಯನ್ ದೇವಾಲಯದ ಧರ್ಮ ಗುರು ಫಾ.ಮಾರ್ಟಿನ್ ಎಂ, ಸೋಮವಾರಪೇಟೆ ಓ.ಎಲ್.ವಿ.ಚರ್ಚ್ ಧರ್ಮ ಗುರು ಫಾ.ಅವಿನಾಷ್, ಹೊಸಕೋಟೆ ಸಂತ ಸೆಬಾಸ್ಟ್ಯನ್ ದೇವಾಲಯದ ಧರ್ಮ ಗುರು ಫಾ.ಸೆಬಾಸ್ಟ್ಯನ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಆರ್ಥಿಕ ಸಮಿತಿ ಅಧ್ಯಕ್ಷರಾದ ಪಿ.ಎಂ.ಬಿಜು, ಮೈಸೂರು ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಸಂಘಗಳ ಒಕ್ಕೂಟದ ಅಧ್ಯಕ್ಷ ಗ್ರೇಶಿಯನ್ ರೋಡ್ರಿಗಸ್, ಸುಂಟಿಕೊಪ್ಪ ಪಾಲನ ಸಮಿತಿ ಕಾರ್ಯದರ್ಶಿ ಡೆನ್ನಿಸ್ ಡಿ’ಸೋಜ, ಸುಂಟಿಕೊಪ್ಪ ಆಹಾರ ಸಮಿತಿ ಅಧ್ಯಕ್ಷ ಗ್ರೇಸಿ ಭಾಗವಹಿಸಲಿದ್ದಾರೆ. ಮೇ 11 ರಂದು ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿರಾಜಪೇಟೆ ವಲಯ ಶ್ರೇಷ್ಠ ಗುರು ಫಾ.ಜೇಮ್ಸ್ ಡಾಮಿನಿಕ್ ದಿವ್ಯ ಉಪಸ್ಥಿತರಿರಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಫೈನಲ್ ಪಂದ್ಯ ಉದ್ಘಾಟನೆ ಹಾಗೂ ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಸಂತ ಮೇರಿ ದೇವಾಲಯದ ಧರ್ಮಗುರು ಫಾ.ಜೋಜಿ ವಡಕೇವಿಟಿಲ್, ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಉಪಾಧ್ಯಕ್ಷರಾದ ಶಿವಮ್ಮ, ಮಾಜಿ ಅಧ್ಯಕ್ಷರಾದ ರೋಸ್ ಮೇರಿ ರಾಡ್ರಿಗಸ್, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ರೋಮನ್ ಕ್ಯಾಥೋಲಿಕ್ ಅಸೋಶಿಯೇಷನ್ ಪ್ರಧಾನ ಕಾರ್ಯದರ್ಶಿ ಜೂಡಿ ಡೇವಿಡ್ ವಾಝ್, ಕೃಷಿಕ ಎಂ.ಟಿ.ಬೇಬಿ, ಕೊಡಗು ಪ್ರೊಟೆಸ್ಟೆಂಟ್ ಚರ್ಚ್‍ಗಳ ಅಧ್ಯಕ್ಷ ಪಿ.ಆರ್.ಮಹದೇವ್, ಕಂಬಿಬಾಣೆ ಕಾಫಿ ಬೆಳೆಗಾರ ಟಿ.ಕೆ.ಸಾಯಿಕುಮಾರ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯ ಗುರು ಫಾ.ವಿಜಯ್ ಕುಮಾರ್, ಸುಂಟಿಕೊಪ್ಪ ಸ.ಪ್ರಾ.ಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಯು.ರಫೀಕ್, ಆರ್ಥಿಕ ಸಮಿತಿ ಸದಸ್ಯ ಜೇಮ್ಸ್ ಡಿ’ಸೋಜ ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಾದ ಪೊಲೀಸ್ ಇಲಾಖೆಯ ರಾಜೇಶ್, ಎಂ.ಎಸ್.ಸಿ (ಸಿ.ಎಸ್) ಪದವಿಯಲ್ಲಿ ಚಿನ್ನದ ಪದಕ ವಿಜೇತರಾದ ಶೈನಿ ಡಿ’ಸೋಜ, ಪ್ರಗತಿಪರ ಕೃಷಿಕ ಎಸ್.ಎಂ.ಡಿ’ಸಿಲ್ವ, ಎಂ.ಬಿ.ಬಿ.ಎಸ್ ನಲ್ಲಿ ಉನ್ನತ ಅಂಕ ಪಡೆದ ಡಾ.ಆನ್ ಲಿಷಾ, ಸಮಗ್ರ ಕೃಷಿಕ ಪಿ.ಎಂ.ಬಿಜು, ಸಸ್ಯಶಾಸ್ತ್ರದಲ್ಲಿ ಪಿ.ಹೆಚ್.ಡಿ ಪಡೆದ ಡಾ.ನಿಲನ ಜೇಮ್ಸ್, ಟೆರೆಶಿಯನ್ ಪ್ರೆಸ್ ಮಾಲೀಕ ಪೌಲ್ ಕ್ಸೇವಿಯರ್, ನಾಟಿ ವೈದ್ಯ ಜಾನ್ ಲೋಬೋ, ಉರಗ ತಜ್ಞ ಪಿಯೂಸ್ ಪೆರೆರಾ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದೆಂದು ತಿಳಿಸಿದರು. ಅಸೋಸಿಯೇಷನ್‍ನ ಕಾರ್ಯಧ್ಯಕ್ಷರಾದ ವಿ.ಎ.ಲಾರೆನ್ಸ್ ಮಾತನಾಡಿ, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲೆಯ 5 ತಾಲ್ಲೂಕುಗಳಲ್ಲಿಯೂ ಘಟಕಗಳನ್ನು ಸ್ಥಾಪಿಸಿ, ತಮ್ಮದೇ ಆದ ಛಾಪನ್ನು ಮೂಡಿಸುತ್ತಿದೆ. ಕೇವಲ ಕ್ರೀಡೆ ಮಾತ್ರವಲ್ಲದೆ ಸಮುದಾಯದ ಏಳಿಗಾಗಿ ವಿವಿಧ ಸಾಮಾಜಿಕ ಕಳಕಳಿಯನ್ನು ಹೊಂದಿದೆ ಎಂದರು. ಅನಾರೋಗ್ಯಸ್ಥರಿಗೆ, ಶಾಲಾ ಮಕ್ಕಳಿಗೆ ನೆರವು ನೀಡುವ ಕೆಲಸವನ್ನು ಮಾಡುತ್ತಿದೆ. ಕ್ರೀಡೆ ಸಮುದಾಯದ ಏಳಿಗೆಯ ಪ್ರತೀಕವಾಗಿದ್ದು, ಜಿಲ್ಲೆಯ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕ್ರೀಡಾ ಕೂಟ ಆಚರಣಾ ಸಮಿತಿ ಸಂಚಾಲಕ ಪಿ.ಎಫ್.ಸೆಬಾಸ್ಟ್ಯನ್ ಮಾತನಾಡಿ, ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಈಗಾಗಲೇ 26 ತಂಡಗಳು ನೋಂದಾಯಿಸಿಕೊಂಡಿದೆ. ಕಾರ್ಯಕ್ರಮಕ್ಕೆ ಸುಮಾರು ಮೂರು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಎಲ್ಲಾ ಸಮುದಾಯ ಬಾಂಧವರಿಂದಲೂ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ದೊರೆತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್‍ನ ಗೌರವಾಧ್ಯಕ್ಷ ಜೋಕಿಮ್ ವಾಸ್, ಮಹಿಳಾ ಘಟಕದ ಉಪಾಧ್ಯಕ್ಷೆ ಗ್ರೇಸಿ ಡೇವಿಡ್, ಕಾರ್ಯಕಾರಿ ಮಂಡಳಿ ಸದಸ್ಯ ಪಿ.ಎಂ.ಬಿಜು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.