Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಕಲಿ ದಾಖಲೆಯ ಪಾಕಿಸ್ತಾನಿ, ಬಾಂಗ್ಲಾದೇಶಿಗರನ್ನು ಕೊಡಗಿನಿಂದ ಹೊರಗಟ್ಟಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಕಲಿ ದಾಖಲೆಯ ಪಾಕಿಸ್ತಾನಿ, ಬಾಂಗ್ಲಾದೇಶಿಗರನ್ನು ಕೊಡಗಿನಿಂದ ಹೊರಗಟ್ಟಲು ಆಗ್ರಹ*

ಮೇ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪಾಕಿಸ್ತಾನಿ ಪ್ರಚೋದಿತ ಉಗ್ರಗಾಮಿಗಳಿಂದ ದಾಳಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಯಲ್ಲೆ ಕೊಡಗು ಜಿಲ್ಲೆಯಲ್ಲಿ ನಕಲಿ ದಾಖಲೆಗಳೊಂದಿಗೆ ಇರಬಹುದಾದ ಪಾಕಿಸ್ತಾನಿಗಳು ಹಾಗೂ ಬಾಂಗ್ಲಾದೇಶಿಗರನ್ನು ಗುರುತಿಸಿ ತಕ್ಷಣ ಹೊರಗಟ್ಟಬೇಕೆಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈಗಾಗಲೆ ಭಾರತ ಬಿಟ್ಟು ಹಿಂತೆರಳುವಂತೆ ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಅದರಂತೆಯೆ ಜಿಲ್ಲೆಯಲ್ಲಿ ಇರಬಹುದಾದ ಪಾಕಿಸ್ತಾನಿಗಳು ಹಾಗೂ ಬಾಂಗ್ಲಾದೇಶಿಗರ ದಾಖಲೆ ಪತ್ರಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಬೇಕು. ನಿಯಮ ಉಲ್ಲಂಘಿಸಿ ನಕಲಿ ದಾಖಲೆಯೊಂದಿಗೆ ತಂಗಿದ್ದರೆ ಹೊರ ಕಳಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಬೇಕೆಂದರು. ನಿರಂತರವಾಗಿ ಭಯೋತ್ಪಾದಕರಿಗೆ ನೆರವು ನೀಡುತ್ತಾ ಭಾರತದ ನೆಲದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಿರುವ ಪಾಕಿಸ್ತಾನವನ್ನು ಭೂಪಟದಲ್ಲೆ ಇಲ್ಲದಂತೆ ಮಾಡಬೇಕೆಂದು ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದರು.
*ಸ್ವಾಗತಾರ್ಹ* ಸದಾಶಿವ ಆಯೋಗದಲ್ಲಿ ಸೂಚಿಸಿರುವಂತೆ ಪರಿಶಿಷ್ಟ ಸಮುದಾಯದ ಉಪ ಪಂಗಡಗಳನ್ನು ಗುರುತಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಜಾತಿ ಗಣತಿಯನ್ನು ಬೆಂಬಲಿಸುತ್ತೇವೆ. ಅತ್ಯಂತ ಸಣ್ಣ ಸಮುದಾಯಗಳನ್ನು ಈ ಗಣತಿ ಕಾರ್ಯದ ಮೂಲಕ ಗುರುತಿಸಿ, ಅವರ ಆಚಾರ, ವಿಚಾರ, ಸಂಸ್ಕೃತಿಯನ್ನು ಉಳಿಸುವ ಕಾರ್ಯದೊಂದಿಗೆ, ಸಣ್ಣ ಸಮುದಾಯಗಳಿಗೂ ಉನ್ನತ ಸ್ಥಾನಕ್ಕೇರುವ ಅವಕಾಶಗಳು ತೆರೆದುಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು. *ಅನುದಾನ ಇಲ್ಲ* ಕೊಡಗಿನಲ್ಲಿರುವ ಕಾಂಗ್ರೆಸ್‍ನ ಇಬ್ಬರು ಶಾಸಕರಿಂದ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಹೆಚ್ಚಿನ ಅನುದಾನಗಳು ದೊರೆತಂತೆ ಕಾಣುತ್ತಿಲ್ಲ. ಇವರ ಈ ಅಧಿಕಾರದ ಅವಧಿಯಲ್ಲಿ ಇಲಾಖಾ ಅಧಿಕಾರಿಗಳಿಗೆ ಸ್ವತಂತ್ರವಾಗಿ ತಮ್ಮ ಅಧಿಕಾರವನ್ನು ಚಲಾಯಿಸುವ ಅವಕಾಶವು ದೊರಕುತ್ತಿಲ್ಲವೆಂದು ಆರೋಪಿಸಿದರು. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸೂಕ್ತ ಕ್ರಮವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಅವರು ಪೊಲೀಸ್ ಇಲಾಖೆ ಪಕ್ಷವೊಂದರ ಅಣತಿಯಂತೆ ವರ್ತಿಸದೆ, ಜನಪರವಾಗಿ ಕಾರ್ಯನಿರ್ವಹಿಸುವಂತಾಗಬೇಕೆಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ನೀಡುವ ಕೆಲಸ ಆಗಬೇಕಾಗಿದೆ. ರಾಜ್ಯ ಮತ್ತು ಕೊಡಗು ಜಿಲ್ಲೆಯಲ್ಲಿ ನಕಲಿ ಆಧಾರ್ ಹಾಗೂ ಇನ್ನಿತರ ದಾಖಲೆಗಳನ್ನು ಹೊಂದಿಕೊಂಡು ನೆಲೆಸಿರುವ ಅಕ್ರಮ ವಲಸಿಗರನ್ನು ಗುರುತಿಸಿ ಹೊರ ಕಳುಹಿಸುವ ಕೆಲಸವಾಗಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಭಾರತ ಸರ್ಕಾರ ಉಗ್ರಗಾಮಿಗಳ ವಿರುದ್ಧ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಪಕ್ಷದ ಪೂರ್ಣ ಬೆಂಬಲವಿದೆ. ಆಂತರಿಕವಾಗಿ ನಡೆಯಬಹುದಾದ ಯಾವುದೇ ದೇಶ ದ್ರೋಹಿ ಕೃತ್ಯಗಳನ್ನು ತಡೆಗಟ್ಟಲು ಸಜ್ಜಾಗಿದೆಯೆಂದು ತಿಳಿಸಿದರು. ಕೇಂದ್ರ ಸರ್ಕಾರ ರಾಷ್ಟ್ರೀಯ ಜನಗಣತಿಯ ಸಂದರ್ಭವೆ ಜಾತಿ ಗಣತಿ ಮಾಡಲು ನಿರ್ಧರಿಸಿರುವುದು ಸರಿಯಾದ ಕ್ರಮವಾಗಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ ಕುಮಾರ್ ಮಾತನಾಡಿ, ಜಿಲ್ಲೆಯ ಶಾಸಕರಿಗೆ ತಮ್ಮ ಇಲ್ಲಿಯವರೆಗಿನ ಆಡಳಿತದ ಅವಧಿಯಲ್ಲಿ ಕನಿಷ್ಟ ಭಾಗಮಂಡಲಕ್ಕೆ ತೆರಳುವ ರಸ್ತೆಯನ್ನು ಸರಿಪಡಿಸಲಾಗಿಲ್ಲ. ರಸ್ತೆ ಅವ್ಯವಸ್ಥೆ ಗೊತ್ತಾಗದಿರಲೆಂದು ಕಾಂಗ್ರೆಸ್ ಪ್ರಮುಖರನ್ನು ಹೆಲಿಕಾಪ್ಟರ್ ನಲ್ಲಷ್ಟೆ ಕಾವೇರಿ ಕ್ಷೇತ್ರಕ್ಕೆ ಕರೆತರಲಾಗುತ್ತಿದೆ ಎಂದು ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಮಹೇಶ್ ಜೈನಿ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2026-27ನೇ…

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.