Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನಗಣತಿ, ಜಾತಿಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ “ಕಾಲಮ್ ಮತ್ತು ಕೋಡ್” ಸೇರಿಸಲು ಒತ್ತಾಯ : ಮೇ 9 ರಂದು ಸಿಎನ್‍ಸಿಯಿಂದ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜನಗಣತಿ, ಜಾತಿಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ “ಕಾಲಮ್ ಮತ್ತು ಕೋಡ್” ಸೇರಿಸಲು ಒತ್ತಾಯ : ಮೇ 9 ರಂದು ಸಿಎನ್‍ಸಿಯಿಂದ ಸತ್ಯಾಗ್ರಹ*

ಮೇ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 7 NEWS DESK : ಮುಂಬರುವ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ “ಕಾಲಮ್ ಮತ್ತು ಕೋಡ್” ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 9 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ರಿಂದ 11.30 ಗಂಟೆಯವರೆಗೆ ಸತ್ಯಾಗ್ರಹ ನಡೆಯಲಿದ್ದು, ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಮಂತ್ರಿಗಳು ಹಾಗೂ ಅದರ ಅಧೀನದಲ್ಲಿ ಬರುವ ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಿಗೆ (ಆರ್‌ಜಿಸಿಸಿಐ) ವಿವರವಾದ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು. ಜನಗಣತಿಯಲ್ಲಿ ಕೊಡವ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ನಿಖರವಾಗಿ ಪ್ರತಿನಿಧಿಸಲು ಮತ್ತು ಕೊಡವ ಜನಸಂಖ್ಯಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತ್ಯೇಕ ಕಾಲಮ್ ಮತ್ತು ಕೋಡ್ ನ್ನು ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಿದ “ಸಂಘ” ಕ್ಷೇತ್ರದಂತೆ, ಸೂಕ್ಷ್ಮ ಜನಾಂಗ ಕೊಡವರಿಗೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ರಾಜಕೀಯ ಸ್ಥಾನಮಾನ ನೀಡಬೇಕು.
ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸುತ್ತದೆ. ಸೋಶಿಯಲ್ ಎಂಜಿನಿಯರಿಂಗ್ ಸರ್ಕಾರವು ಸಮುದಾಯದ ನಿರ್ದಿಷ್ಟ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಉದ್ದೇಶಿತ ನೀತಿಗಳನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುತ್ತದೆ. ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ವಿಶಿಷ್ಟ ಗುರುತು ಹಾಗೂ ಅಸ್ತಿತ್ವವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಏಕ-ಜನಾಂಗೀಯ ಸಮುದಾಯವಾಗಿ ಕೊಡವರು ವಿಶಿಷ್ಟ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕುರುಹುವನ್ನು ಹೊಂದಿದ್ದು ಅದರ ಗುರುತಿಸುವಿಕೆ ಮತ್ತು ರಕ್ಷಣೆಗೆ ಅರ್ಹವಾಗಿದೆ. ಕೊಡವರ ಯೋಧ ಪರಂಪರೆಯು ಅವರ ಗುರುತಿನ ಅವಿಭಾಜ್ಯ ಅಂಗವಾಗಿದೆ ಮತ್ತು ಜನಗಣತಿಯಲ್ಲಿ ನಿಖರವಾದ ಪ್ರಾತಿನಿಧ್ಯವು ಅವರ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ.
1871-72 ರಿಂದ 1931 ರವರೆಗಿನ ಜನಗಣತಿ ನಿಖರ ಮತ್ತು ವೈಜ್ಞಾನಿಕವಾಗಿದ್ದು, ಕೊಡವ ಕುಲವನ್ನು ಕೊಡವ ಲ್ಯಾಂಡ್ ನ ಏಕ-ಜನಾಂಗೀಯ, ಸ್ವತಂತ್ರ, ಆದಿಮಸಂಜಾತ ಯೋಧ ಕುಲವೆಂದು ದಾಖಲಿಸಲಾಗಿದೆ. ಇದರಿಂದಾಗಿ ಕೊಡವ ಜನಾಂಗೀಯ ಪೂರ್ವಾರ್ಜಿತತೆಯನ್ನು ಗುರುತಿಸಲಾಗಿದೆ. ಅದಾಗ್ಯೂ, 1941 ರಿಂದ 2011 ರವರೆಗೆ ಕೊಡವರನ್ನು ಆಡಳಿತಾತ್ಮಕ ಉದ್ದೇಶಗಳಿಗಾಗಿ ಸರ್ಕಾರ ಉದ್ದೇಶಪೂರ್ವಕವಾಗಿ ಇತರ ಸಮುದಾಯಗಳೊಂದಿಗೆ ವಿಲೀನಗೊಳಿಸಿತು. ಇದು ಕೊಡವ ಸಮುದಾಯದ ಗುರುತು ಮತ್ತು ಅಸ್ತಿತ್ವಕ್ಕೆ ದಕ್ಕೆಯನ್ನುಂಟುಮಾಡಿತು ಎಂದು ನಾಚಪ್ಪ ತಿಳಿಸಿದ್ದಾರೆ.
ಜಾತಿ ಗಣತಿ ಮತ್ತು ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಬೇಕು, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವರಿಗೆ ಎಸ್ಟಿ ಟ್ಯಾಗ್ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸತ್ಯಾಗ್ರಹದ ಸಂದರ್ಭ ಸರ್ಕಾರದ ಮುಂದಿಡುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.