
ಮಡಿಕೇರಿ ಮೇ 8 NEWS DESK : ಭಾರತೀಯ ಸೇನೆಯಿಂದ ಉಗ್ರರ ನೆಲೆಗಳ ಮೇಲೆ ನಡೆಸಿದ ‘ಆಪರೇಷನ್ ಸಿಂಧೂರ್’ ದಾಳಿ ಯಶಸ್ವಿ ಹಿನ್ನೆಲೆಯಲ್ಲಿ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಭಾರತೀಯ ಸೈನ್ಯಕ್ಕೆ ಶಕ್ತಿ ತುಂಬಲು ಮತ್ತು ದೇಶದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಜಿ.ರಾಜೇಂದ್ರ, ಅಂಬೆಕಲ್ ಕುಶಾಲಪ್ಪ, ಚುಮ್ಮಿದೇವಯ್ಯ, ಪ್ರಕಾಶ್ ಆಚಾರ್ಯ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.









