
ಮಡಿಕೇರಿ ಮೇ 8 NEWS DESK : ಕಾವೇರಿಯ ಕ್ಷೇತ್ರ ಭಾಗಮಂಡಲದ ಶ್ರೀ ಭಗಂಡೇಶ್ವರನ ಸನ್ನಿಧಿಯಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಸಂಕಲ್ಪ ಪೂಜೆ ಮಾಡಲಾಯಿತು. ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲೆಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.










