Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಕರಕುಶಲ ತಯಾರಿಕೆ ಶಿಬಿರ ಆರಂಭ : ಭಾರತೀಯ ಕರಕುಶಲ ವಸ್ತುಗಳಿಗೆ ಭಾರೀ ಬೇಡಿಕೆ : ಆರ್.ಕೆ.ಬಾಲಚಂದ್ರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಕರಕುಶಲ ತಯಾರಿಕೆ ಶಿಬಿರ ಆರಂಭ : ಭಾರತೀಯ ಕರಕುಶಲ ವಸ್ತುಗಳಿಗೆ ಭಾರೀ ಬೇಡಿಕೆ : ಆರ್.ಕೆ.ಬಾಲಚಂದ್ರ

ಮೇ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಮೇ 8 NEWS DESK : ಕೇಂದ್ರ ಸರ್ಕಾರದ  ಕರಕುಶಲ ಮತ್ತು ಜವಳಿ ಮಂತ್ರಾಲಯ ಇಲಾಖೆಯ ಮೈಸೂರಿನ   ಕರಕುಶಲ    ವಿಸ್ತರಣಾ ಸೇವಾ ಕೇಂದ್ರದ ವತಿಯಿಂದ  ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ದಿನಗಳ ಕರಕುಶಲ ವಸ್ತುಗಳ ತಯಾರಿಕೆ ಶಿಬಿರಕ್ಕೆ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಲೀಡ್ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಆರ್.ಕೆ.ಬಾಲಚಂದ್ರ, ವೈವಿಧ್ಯಮಯ ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯ ಸಮ್ಮಿಲನವಾಗಿರುವ ಭಾರತ ದೇಶವು ಶ್ರೀಮಂತ ಕಲೆಯಾದ ಕರಕುಶಲ ಕಲೆಗೆ ಪ್ರಸಿದ್ಧಿಯಾಗಿದೆ. ಭಾರತದ ಕರಕುಶಲ ವಸ್ತುಗಳು ಕರಕುಶಲವು ಕೈ ಉಪಕರಣಗಳೊಂದಿಗೆ ಕೈಯಿಂದ ವಸ್ತುಗಳನ್ನು ಸಂಸ್ಕರಿಸುವುದು ಪುರಾತನ ಕಾಲದಿಂದಲೂ ರೂಢಿಯಾಗಿ ಬಂದಿದೆ ಎಂದರು.  ಭಾರತೀಯ ಶ್ರೀಮಂತ ಕಲೆಯಾದ ಕರಕುಶಲ ಕಲೆಯು ತಲೆ ತಲೆಮಾರುಗಳಿಂದ ಬಂದಿದ್ದು,  ಭಾರತದ ಕರಕುಶಲ ವಸ್ತಗಳಿಗೆ ಪ್ರಪಂಚದಾದ್ಯಂತ ಹೆಚ್ಚಿನ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಇಂತಹ  ಕರಕುಶಲ ತರಬೇತಿ ಶಿಬಿರಗಳಿಗೆ ಇತ್ತಿಚಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದಿದೆ. ಕರಕುಶಲ ತರಬೇತಿಗಳನ್ನು ಪಡೆದವರಿಗೆ ಅನೇಕ ಉದ್ಯೋಗವಕಾಶಗಳಿವೆ. ವಿದ್ಯಾರ್ಥಿಗಳು ಕರಕುಶಲ ಕಲೆಯಿಂದ  ಕ್ರಿಯಾಶೀಲ ಮತ್ತು ಸೃಜನಶೀಲತೆ ಬೆಳೆಸಿಕೊಳ್ಳಲು ಸಾಧ್ಯ ಎಂದು ಬಾಲಚಂದ್ರ ಹೇಳಿದರು.  ವಿದ್ಯಾರ್ಥಿಗಳು ತಮ್ಮ ಬದುಕನ್ನು ಸವಾಲಾಗಿ ಸ್ವೀಕರಿಸಿ ಬದುಕಿನ ಮಜಲುಗಳನ್ನು ಎದುರಿಸುವ ಸಾಮಥ್ರ್ಯ ಬೆಳೆಸಿಕೊಳ್ಳಬೇಕು ಎಂದರು.  ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಿಬಿರದ ಜಿಲ್ಲಾ ಸಂಯೋಜಕ ಹಾಗೂ ಕುಶಲಕರ್ಮಿ ಜಿ.ಧರ್ಮಪ್ಪ, ಈ ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಗಳಲ್ಲಿ ಇಂತಹ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ ಎಂದರು.  ಶಿಬಿರದಲ್ಲಿ ಬಿದಿರು ಕಲೆ, ಮರ ಕೆತ್ತನೆ, ಮಣ್ಣಿನ ಕಲಾಕೃತಿಗಳ ತಯಾರಿಕೆ ಸೇರಿದಂತೆ ಇನ್ನಿತರ ಕರಕುಶಲ ಕಲೆಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.  ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ, ಕರಕುಶಲ ಕಲೆಯಿಂದ ಆರ್ಥಿಕ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ. ನಮ್ಮ ದೇಶದ ಆರ್ಥಿಕಾವೃದ್ಧಿಗೆ ಕರಕುಶಲ ಕಲೆ ಕೂಡ ಸಹಕಾರಿಯಾಗಿವೆ ಎಂದರು. ಶಿಬಿರದ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದ  ಸಚಿವಾಲಯದ ವಿಸ್ತರಣಾ ಕೇಂದ್ರದ ಅಭಿವೃದ್ಧಿ ಅಧಿಕಾರಿ ಎಂ.ಬಿ.ಶಾಬೀರ,  ಕರಕುಶಲ ಕಲೆಯು ಶ್ರೀಮಂತ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ದಿಸೆಯಲ್ಲಿ ಇಂತಹ ಜಾಗೃತಿ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ತಮ್ಮ ಕಲಿಕೆಯೊಂದಿಗೆ ವೃತ್ತಿಪರ ಬದುಕಿಗೆ ಸಹಕಾರಿಯಾಗಿವೆ ಎಂದರು.  ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಕರಕುಶಲ ಕಲೆ ಹಾಗೂ ಕಲಾಕೃತಿಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲಾಯಿತು.  ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಪಿಯೂ ಕಾಲೇಜಿನ ಪ್ರಾಂಶುಪಾಲ ಡಾ.ಎನ್. ನಾಗೇಂದ್ರಸ್ವಾಮಿ, ಸಚಿವಾಲಯದ ಅಭಿವೃದ್ಧಿ ಅಧಿಕಾರಿ ಸ್ವದೇಶ್ ಘಾರ, ಸಿಬ್ಬಂದಿ ಹೆಚ್.ಜಿ.ಮಹೇಶ್, ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.