Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಮೇ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 9 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಸಂಬಂಧ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಈಗಾಗಲೇ ನಿಯೋಜಿಸಿರುವ ಗಣತಿದಾರರು ತಮ್ಮ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯವರು ವಾಸಿಸುವ ಮನೆಗಳಿಗೆ ತೆರಳಿ ಮಾಹಿತಿ ಪಡೆದು ಸಮೀಕ್ಷೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ಸೂಚಿಸಿದರು. ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಗೆ ನಿರ್ಲಕ್ಷ್ಯ ವಹಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಗಣತಿದಾರರ ಜೊತೆ ಮೇಲ್ವಿಚಾರಕರು ಸಹ ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡು ಸಮೀಕ್ಷೆಯ ಪ್ರಗತಿ ಸಾಧಿಸಬೇಕು. ಪರಿಶಿಷ್ಟ ಜಾತಿ ಕುಟುಂಬ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಗಮನಹರಿಸಬೇಕು ಎಂದು ಅವರು ಹೇಳಿದರು. ಮೊಬೈಲ್ ಅಪ್ಲಿಕೇಷನ್ ಮೂಲಕ ಮಾಹಿತಿ ತುಂಬಬೇಕು. ಇದು ಸರಳ ವಿಧಾನವಾಗಿದ್ದು, ಆಸಕ್ತಿ ವಹಿಸಿದಲ್ಲಿ ಸುಗಮವಾಗಿ ಹಾಗೂ ಸುಲಲಿತವಾಗಿ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಇಚ್ಛಾಶಕ್ತಿ ವಹಿಸಬೇಕು ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಜೊತೆಗೂಡಿ ಇಡೀ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಸಂಬಂಧಿಸಿದಂತೆ ಮೇಲ್ವಿಚಾರಣೆ ವಹಿಸಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಮೇ, 17 ರವರೆಗೆ ನಡೆಯುವ ಮನೆ ಮನೆ ಸಮೀಕ್ಷೆ ಸಂಬಂಧ ಸಂಪೂರ್ಣ ಪ್ರಗತಿ ಸಾಧಿಸಬೇಕು. ಸಮಗ್ರ ಸಮೀಕ್ಷೆ ಸಂಬಂಧಿಸಿದಂತೆ ಪ್ರತೀ ನಿತ್ಯ ತಾಲ್ಲೂಕುವಾರು ಮಾಹಿತಿ ಒದಗಿಸುವಂತೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ವಿಚಾರಣಾ ಆಯೋಗವು ಸಮಗ್ರ ಸಮೀಕ್ಷೆ ಸಂಬಂಧ ಪುಸ್ತಕ ಹೊರತಂದಿದ್ದು, ಅದನ್ನು ಅಧ್ಯಯನ ಮಾಡಿಕೊಂಡು ಸಮೀಕ್ಷೆ ಕೈಗೊಳ್ಳಬೇಕು ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಉಪ ನಿರ್ದೇಶಕರು ಪ್ರತಿ ದಿನ ಗಣತಿದಾರರ ಮೇಲ್ವಿಚಾರಕರ ಜೊತೆ ಸಂಪರ್ಕವನ್ನು ಸಾಧಿಸಿ ಗಣತಿದಾರರು ಗಣತಿ ಕಾರ್ಯ ಕೈಗೊಳ್ಳುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಹಾಗೂ ಪರಿಶೀಲಿಸುವಂತೆ ಸೂಚನೆ ನೀಡಿದರು. ಸಭೆಯ ಆರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಗಾಗಿ ಮನೆಮನೆಗೆ ತೆರಳುತ್ತಿರುವ ಗಣಿತಿದಾರರಿಗೆ ಸಂಬಂಧಪಟ್ಟ ಮತಗಟ್ಟೆಗಳ ಮತಗಟ್ಟೆ ಅಧಿಕಾರಿ (ಬಿಎಲ್‍ಓ) ಗಳು ಮನೆಗಳನ್ನು ಗುರುತಿಸಲು ಸಹಕರಿಸಬೇಕೆಂದು ಕೋರಿದರು. ಸರ್ಕಾರದ ನಿರ್ದೇಶನದಂತೆ ಸಮೀಕ್ಷೆ ಮಾಡಬೇಕಿದ್ದು, ಆ ದಿಸೆಯಲ್ಲಿ ಈಗಾಗಲೇ ಬೂತ್‍ಮಟ್ಟದಲ್ಲಿ ನಿಯೋಜಿಸಿರುವ ಗಣತಿದಾರರು ಪರಿಶಿಷ್ಟ ಜಾತಿ ಕುಟುಂಬದವರ ಮನೆ ಮನೆಗೆ ತೆರಳಿ ಸಮಗ್ರ ಸಮೀಕ್ಷೆ ಕೈಗೊಳ್ಳಬೇಕು. ಜಾತಿ, ಉಪಜಾತಿ ಮತ್ತು ಮೂಲ ಉಪಜಾತಿ ನಮೂದು ಮಾಡಬೇಕು ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಸಂಬಂಧಿಸಿದಂತೆ ಕ್ಷೇತ್ರ ಪ್ರಚಾರದಲ್ಲಿನ ಕಾರ್ಯದ ಬಗ್ಗೆ ಮಾಹಿತಿ ನೀಡಿ ಅಂತರ್ಜಾಲ ಸಮಸ್ಯೆ ಇದೆ ಎಂದು ತಿಳಿಸಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲೂ ಸಹ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಪರಿಶಿಷ್ಟ ಜಾತಿಯವರ ಬಡಾವಣೆಯಲ್ಲಿ ಸಮೀಕ್ಷೆ ಕೈಗೊಳ್ಳುವಂತಾಗಲು ಸಹಕರಿಸಬೇಕು. ಯಾವುದೇ ಕಾರಣದಿಂದ ಪರಿಶಿಷ್ಟ ಜಾತಿ ಕುಟುಂಬಗಳು ಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಎಂದು ಸೂಚಿಸಿದರು. ಗಣತಿದಾರರು ಮನೆ ಮನೆಗೆ ತೆರಳಿ ಸಮೀಕ್ಷೆ ಮಾಡಬೇಕು. ಬಿಎಲ್‍ಒಗಳು ಸಮೀಕ್ಷೆ ಸಂಬಂಧ ಅಗತ್ಯ ಸಹಕಾರ ನೀಡಬೇಕು. ಬಡಾವಣೆ ಪ್ರದೇಶ ಮನೆಗಳ ಬಗ್ಗೆ ನಿಖರ ಮಾಹಿತಿ ನೀಡುವಂತಾಗಬೇಕು. ಆಶಾ ಕಾರ್ಯಕರ್ತರು ಸಹ ಕೈಜೋಡಿಸಬೇಕು ಎಂದು ಶೇಖರ್ ಮನವಿ ಮಾಡಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಹಶೀಲ್ದಾರರು, ತಾ.ಪಂ.ಇಒಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.