
ನಾಪೋಕ್ಲು ಮೇ 10 NEWS DESK : “ಆಪರೇಷನ್ ಸಿಂಧೂರ್” ಕಾರ್ಯಚರಣೆ ಯಶಸ್ವಿಯಾದ ಹಿನ್ನೆಲೆ ಭಾರತೀಯ ಸೈನಿಕರಿಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಪಟ್ಟಣದ ಮೊಹಿಯದ್ದೀನ್ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಜಮಾಯತ್ ಅಧ್ಯಕ್ಷರಾದ ಎಂ.ಹೆಚ್.ಅಬ್ದುಲ್ ರೆಹಮಾನ್ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಖತೀಬರಾದ ಉಬೈದುಲ್ಲ ಸುಖಾಫಿ ಮಾತನಾಡಿ, ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷಗಳು ನಡೆಯುತ್ತಿದ್ದು, ಭಾರತೀಯರ ಸಂರಕ್ಷಣೆಗಾಗಿ ಶತ್ರುಗಳೊಂದಿಗೆ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಭಾರತೀಯ ಸೈನಿಕರ ಯಶಸ್ಸಿಗೆ ವಿಶೇಷ ಪ್ರಾರ್ಥನೆ ನಡೆಸಲಾಯಿತು ಎಂದರು. ಈ ಸಂದರ್ಭ ಮೊಹಿಯದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.
ವರದಿ : ದುಗ್ಗಳ ಸದಾನಂದ.










