Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ : ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ : ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ*

ಮೇ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 12 NEWS DESK : ಗೌತಮ ಬುದ್ಧನ ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಭಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಪಸರಿಸಿದ್ದಾರೆ ಎಂದು ವಿನಾಯಕ ನರ್ವಡೆ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೇರಿಕ ಭೇಟಿ ಸಂದರ್ಭದಲ್ಲಿ ‘ಯುದ್ಧದ ನಾಡಿನಿಂದ ಬಂದಿಲ್ಲ, ಬುದ್ಧನ ನಾಡಿನಿಂದ ಬಂದಿದ್ದೇನೆ’ ಎಂಬ ಸಂದೇಶ ಸಾರಿದ್ದರೂ ಎಂಬುದನ್ನು ಯಾರೂ ಮರೆಯುವಂತಿಲ್ಲ. ಆ ನಿಟ್ಟಿನಲ್ಲಿ ಇಡೀ ಭಾರತ ದೇಶ ಶಾಂತಿ ಸಹಭಾಳ್ವೆ, ಸಹೋದರತ್ವಕ್ಕೆ ಹೆಸರಾಗಿದೆ ಎಂದು ಉಪ ವಿಭಾಗಾಧಿಕಾರಿ ನುಡಿದರು. ಭಗವಾನ್ ಬುದ್ಧರ 2587 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತವಲ್ಲದೆ ಥೈಲಾಂಡ್, ಚೀನಾ, ಕಾಂಬೋಡಿಯಾ, ನೇಪಾಳ, ಶ್ರೀಲಂಕಾ, ಜಪಾನ್, ಟಿಬೆಟ್ ಹೀಗೆ ವಿವಿಧ ರಾಷ್ಟ್ರಗಳಲ್ಲಿ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ ಎಂದರು. ಬೌದ್ಧ ಧರ್ಮ ಪವಿತ್ರ ಹಬ್ಬವಾದ ಬುದ್ಧ ಪೂರ್ಣಿಮವನ್ನು ವಿಶ್ವದೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಬುದ್ಧನ ಸಂದೇಶಗಳು ಇಂದಿಗೂ ಸಹ ಪ್ರಸ್ತುತವಾಗಿದ್ದು, ಸ್ಫೂರ್ತಿದಾಯಕವಾಗಿದೆ ಎಂದರು. ಸಂತಕವಿ ಕನಕದಾಸ ಮತ್ತು ತತ್ವಪದಕಾರ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಡಾ. ಕೆ.ಹೆಚ್.ಮುಸ್ತಾಪ ಮಾತನಾಡಿ ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ, ಮಹಾನ್ ದಾರ್ಶನಿಕ, ಸಿದ್ದಾರ್ಥ ಎನ್ನುವ ರಾಜವಂಶದ ಕುಡಿಯಾಗಿದ್ದು, ಸಕಲ ವೈಬೋಗಗಳನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ ಎಂದರು. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಬುದ್ಧ ಬೋಧಿಸಿದ್ದಾರೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯ ದಿನವನ್ನು ಸ್ಮರಿಸಲು ಪ್ರತೀ ವರ್ಷ ಬುದ್ಧ ಪೂರ್ಣಿಮೆ ಆಚರಿಸಲಾಗುತ್ತದೆ ಎಂದರು. ಬೌದ್ಧ ಧರ್ಮವು ಈ ನೆಲದಲ್ಲಿ ಹುಟ್ಟಿ ವಿಶ್ವದೆಲ್ಲೆಡೆ ಪಸರಿಸಿದೆ. ಸತ್ಯ, ಸಮಾನತೆ, ಭ್ರಾತೃತ್ವ ಬೌದ್ಧ ಧರ್ಮದ ಮೂಲ ಮಂತ್ರವಾಗಿದೆ ಎಂದರು. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಅವರು ಮಾತನಾಡಿ ಬುದ್ಧ ಎಂದರೆ ಜ್ಞಾನ, ಹುಟ್ಟಿದ್ದು ರಾಜ ಮನೆತನದಲ್ಲಿ, ಆದರೂ ಸಹ ಬೆಳೆಯುತ್ತಾ ಇತರರಂತೆ ಬದುಕು ನಡೆಸುತ್ತಾರೆ. ಶಾಂತಿಯ ಸಂದೇಶ ಸಾರುತ್ತಾರೆ ಎಂದರು. ಆಸೆಯೇ ದುಃಖಕ್ಕೆ ಮೂಲ ಎಂಬುದನ್ನು ಬುದ್ಧ ಸಾರಿದ್ದಾರೆ. ಸಾಮ್ರಾಟ್ ಅಶೋಕ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಬುದ್ಧನ ಶಾಂತಿ ಸಂದೇಶಗಳನ್ನು ಅನುಸರಿಸುತ್ತಾರೆ. ಶಾಂತಿ ದೂತರಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಬುದ್ದ ಸಹಜತೆ, ಪರಿಸರ ಹಾಗೂ ನಿಸರ್ಗದ ತತ್ವದಂತೆ ನಡೆದುಕೊಳ್ಳುತ್ತಾರೆ. ಗೌತಮ ಬುದ್ಧ ಮಹಾ ಬೆಳಕು, ಚೈತನ್ಯದ ಚಿಲುಮೆ ಎಂದರೆ ತಪ್ಪಾಗಲಾರದು. ಎಲ್ಲರನ್ನು ಪ್ರೀತಿಸಬೇಕು ಮತ್ತು ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ ಗೌತಮ ಬುದ್ಧರು ಶಾಂತಿಮಂತ್ರವನ್ನು ಇಡೀ ಜಗತ್ತಿಗೆ ಸಾರಿದ್ದಾರೆ. ಎಲ್ಲರೂ ಸಮಾನವಾಗಿ ಸಹೋದರತೆಯಿಂದ ಬದುಕು ನಡೆಸಬೇಕು ಎಂಬುದು ಗೌತಮ ಬುದ್ಧರ ಆಶಯವಾಗಿತ್ತು ಎಂದರು. ಇಂದಿನ ಆಧುನಿಕ ಯುಗದಲ್ಲಿಯೂ ಸಹ ಜಾತಿ ವ್ಯವಸ್ಥೆ ಸರಿಯಲ್ಲ. ಕ್ರೀಡಾಕೂಟಗಳು ಸಹ ಜಾತಿಯಲ್ಲಿ ನಡೆಯುತ್ತಿರುವುದು ಬೇಸರದ ಸಂಗತಿ ಎಂದರು. ಬೈಲುಕುಪ್ಪೆಯ ಬಿಕ್ಷು ಮಾತನಾಡಿ ಬುದ್ಧರ ಸಂದೇಶಗಳು ಸಾರ್ವಕಾಲೀಕವಾಗಿದ್ದು, ಬುದ್ಧನ ಮಾರ್ಗದಲ್ಲಿ ನಡೆದರೆ ಜೀವನ ನೆಮ್ಮದಿ ಎಂದರು. ಬುದ್ದರು ಮಾನವೀಯ ಮೌಲ್ಯಗಳನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ. ಬೌದ್ಧ ಸಂಸ್ಕøತಿ ಮತ್ತು ಸಂಪ್ರದಾಯ ಇಂದಿಗೂ ಸಹ ಪ್ರಚಲಿತದಲ್ಲಿದೆ. ಬುದ್ಧ ಹುಟ್ಟಿದ ಭಾರತದಲ್ಲಿ ಇಡೀ ವಿಶ್ವಕ್ಕೆ ಬುದ್ಧನ ಸಂದೇಶಗಳು ಸ್ಮರಣೀಯವಾಗಿದೆ ಎಂದರು. ನಗರಸಭೆ ಸದಸ್ಯರಾದ ಸತೀಶ್, ಡಿಎಸ್‍ಎಸ್ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ, ಪ್ರಮುಖರಾದ ಪ್ರೇಮ್ ಕುಮಾರ್, ಎಸ್.ಕೆ.ಸ್ವಾಮಿ ಇತರರು ಇದ್ದರು. ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಹಾಗೂ ದಸಂಸ ಭೀಮವಾದ ಸಂಘಟನಾ ಸಂಚಾಲಕರಾದ ಕೆ.ಬಿ.ರಾಜು ಅವರು ಬುದ್ಧನ ಕುರಿತು ಹಾಡು ಹಾಡಿ ಗಮನ ಸೆಳೆದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.