Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಕೊಡಗು : ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*

ಮೇ 13, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 13 NEWS DESK  : ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜೂನ್ 6 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢೀಕೃತ ದಾಖಲೆಗಳನ್ನು ಡಿಜಿ ಲಾಕರ್ ಬಳಸಿ ಸ್ಕ್ಯಾನ್ ಮಾಡಿ ಅರ್ಜಿ ಸಲ್ಲಿಸುವುದು. ಆನ್‍ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯಥಿಗಳಿಗೆ ಜೂನ್, 09 ಕ್ಕೆ 19 ವರ್ಷ ಪೂರ್ಣಗೊಂಡಿರಬೇಕು. ಹಾಗೂ 35 ವರ್ಷ ಮೀರಿರಬಾರದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಭ್ಯರ್ಥಿಯು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ 13 ಅಂಗನವಾಡಿ :: ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ 13 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 32 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ www.anganwadirecruit.kar.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಗುರುತಿಸಲು ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಕಂದಾಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆಗೆ ಸಾಮಾನ್ಯ ಅರ್ಹತೆಗಳು, ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 19 ವರ್ಷ ಪೂರ್ಣಗೊಂಡಿರಬೇಕು. 35 ವರ್ಷದೊಳಗಿರಬೇಕು. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ವಿಕಲಚೇತನ ಅಭ್ಯರ್ಥಿಯಾಗಿದ್ದಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 45 ವರ್ಷ ವಯೋಮಿತಿಯೊಳಗಿರಬೇಕು.
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರಗಳು: ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾ.ಪಂ.ನ ಕಟ್ಟೆಮಾಡು-2 (ಇತರೆ), ಮಕ್ಕಂದೂರು ಗ್ರಾ.ಪಂ.ನ ಮಕ್ಕಂದೂರು-1(ಎಸ್‍ಸಿ), ಕಡಗದಾಳು ಗ್ರಾ.ಪಂ.ನ ಕತ್ತಲೆಕಾಡು (ಇತರೆ), ಕುಂದಚೇರಿ ಗ್ರಾ.ಪಂ.ನ ಸಿಂಗತ್ತೂರು(ಇತರೆ), ಭಾಗಮಂಡಲ ಗ್ರಾ.ಪಂ. ತಲಕಾವೇರಿ(ಇತರೆ), ಕುಂಜಿಲ ಕಕ್ಕಬೆ ಗ್ರಾ.ಪಂ. ಪರಂಬುಬಾಣೆ-2(ಇತರೆ), ಕೆರೆತಟ್ಟು(ಎಸ್‍ಸಿ), ಅಯ್ಯಂಗೇರಿ ಗ್ರಾ.ಪಂ.ಸಣ್ಣಪುಲಿಕೋಟು(ಇತರೆ), ಬೇಂಗೂರು ಗ್ರಾ.ಪಂ. ಕೊಟ್ಟೂರು (ಇತರೆ), ಮದೆ ಗ್ರಾ.ಪಂ. ಬೆಟ್ಟತ್ತೂರು (ಇತರೆ), ಪೆರಾಜೆ ಗ್ರಾ.ಪಂ.ನ ಅಮೆಚೂರು(ಇತರೆ), ಬೇಂಗೂರು ಗ್ರಾ.ಪಂ. ಪಾಕ(ಇತರೆ), ಹಾಕತ್ತೂರು ಗ್ರಾ.ಪಂ.ನ ತೊಂಭತ್ತುಮನೆ(ಇತರೆ).
ಸಹಾಯಕಿ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರಗಳು: ಮಡಿಕೇರಿ ತಾಲ್ಲೂಕಿನ ವಾರ್ಡ್ ನಂ.10ರ ಪೆನ್‍ಷನ್ ಲೈನ್(ಇತರೆ), ವಾರ್ಡ್ ನಂ.13 ಸ್ಟೋನ್ ಹಿಲ್(ಇತರೆ), ವಾರ್ಡ್ ನಂ.22-23 ಗದ್ದಿಗೆ(ಇತರೆ), ವಾರ್ಡ್ ನಂ.23 ಸಂಪಿಗೆಕಟ್ಟೆ(ಇತರೆ), ವಾರ್ಡ್ ನಂ.15 ಮಂಗಳಾದೇವಿ ನಗರ(ಇತರೆ), ವಾರ್ಡ್ ನಂ,7 ಕಾನ್ವೆಂಟ್ ಜಂಕ್ಷನ್(ಇತರೆ), ಮರಗೋಡಿನ ಕಟ್ಟೆಮಾಡು-2(ಇತರೆ), ಮರಗೋಡು(ಇತರೆ), ಗಾಳಿಬೀಡುವಿನ ವಣಚಲು(ಇತರೆ), ಹೊದ್ದೂರು ಗ್ರಾ.ಪಂ. ಪಾಲೇಮಾಡು (ಎಸ್‍ಸಿ), ಮೂರ್ನಾಡು ಗ್ರಾ,ಪಂ. ಎಂ.ಬಾಡ-1(ಎಸ್‍ಸಿ), ಮಕ್ಕಂದೂರು ಗ್ರಾ.ಪಂ. ಮಕ್ಕಂದೂರು-1(ಎಸ್‍ಸಿ), ಹೊಸ್ಕೇರಿ ಗ್ರಾ.ಪಂ. ಅರೆಕಾಡು-2(ಎಸ್‍ಸಿ), ಕೆ.ನಿಡುಗಣೆ ಗ್ರಾ,ಪಂ. ಚಂದ್ರಗಿರಿ(ಇತರೆ), ಮೇಕೇರಿಯ ಸುಭಾಷ್ ನಗರ ಮೇಕೇರಿ(ಇತರೆ), ಕರಿಕೆಯ ಮಂಡೆಸ್ಥಾನ(ಎಸ್‍ಟಿ), ನವೋದಯ(ಇತರೆ), ದೊಡ್ಡಚೆರಿ(ಇತರೆ), ಕೊಚ್ಚಿ-1(ಇತರೆ), ಕುಂಜಿಲ ಕಕ್ಕಬೆ ಗ್ರಾ.ಪಂ.ನ ಯವಕಪಾಡಿ(ಇತರೆ), ಕೊಣಂಗೇರಿಯ ಬಲಮುರಿ-2(ಇತರೆ), ಪಾರಾಣೆ(ಇತರೆ), ಬೆಟ್ಟಗೇರಿಯ ಕಾರುಗುಂದ-1(ಇತರೆ), ಬೇಂಗೂರು ಗ್ರಾ.ಪಂ. ಐವತ್ತೋಕ್ಲು(ಇತರೆ), ಪಾಕ(ಇತರೆ), ಬೇಂಗೂರು ಎಸ್‍ಸಿ. ಕಾಲೋನಿ(ಇತರೆ), ಎಮ್ಮೆಮಾಡು ಗ್ರಾ.ಪಂ. ಬೈರಾಂಡಾಣೆ(ಇತರೆ), ಪೆರಾಜೆಯ ಕುಂಡಾಂಡು ಗಿರಿಜನ ಕಾಲೋನಿ(ಎಸ್‍ಟಿ), ಮದೆ ಗ್ರಾ.ಪಂ. ಕೂರಣಬಾಣೆ(ಇತರೆ), ದೇವರಕೊಲ್ಲಿ(ಇತರೆ), ಅಯ್ಯಂಗೇರಿಯ ಅಯ್ಯಂಗೇರಿ-1 (ಇತರೆ) ಹಾಗೂ ಬಲ್ಲಮಾವಟಿಯ ನೆಲಜಿ(ಇತರೆ)
ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ್, 09 ರೊಳಗೆ ಅಥವಾ ಮುಂಚಿತವಾಗಿwww.anganwadirecruit.kar.nic.in ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ. ನಿಗಧಿತ ಅವಧಿಯ ನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.
ಆನ್‍ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು: ಅರ್ಜಿ ನಿಗದಿತ ನಮೂನೆಯಲ್ಲಿ(ಆನ್‍ಲೈನ್), ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕವಿರುವ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರರು, ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ(ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ಅಂಗವಿಕಲತೆ ಪ್ರಮಾಣ ಪತ್ರ(ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ). ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿಗಳಿಂದ ಪಡೆದ ಪ್ರಮಾಣ ಪತ್ರ, ಇಲಾಖಾ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರವರಿಂದ ಪಡೆದ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ, ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಅಭ್ಯರ್ಥಿಗಳು ಸಲ್ಲಿಸಲಾದ ಅಗತ್ಯ ದಾಖಲಾತಿಗಳಾದ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರಗಳು ಹಾಗೂ ಇತರೆ ದಾಖಲಾತಿಗಳು ಕ್ರಮಬದ್ಧವಾಗಿದ್ದಲ್ಲಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಯನ್ನು ನಿಯಮಾನುಸಾರ ನಿರ್ಧರಿಸಲಾಗುವುದು ಮತ್ತು ಯಾವುದೇ ಸಂದರ್ಶನ ಪ್ರಕ್ರಿಯೆ ಇರುವುದಿಲ್ಲ.
ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಆದೇಶಗಳಿಗೆ ಅನುಗುಣವಾಗಿ ಬದಲಾವಣೆ/ ಮಾರ್ಪಡಿಗೆ ಒಳಪಟ್ಟಿರುತ್ತದೆ. ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತದೆ. ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹೆಯಾನ ರೂ.11 ಸಾವಿರ ಗೌರವಧನ ಪಾವತಿಸಲಾಗುವುದು. ಸಹಾಯಕಿಯರಿಗೆ ರೂ.6 ಸಾವಿರ ಗೌರವಧನ ಪಾವತಿಸಲಾಗುವುದು ಎಂದು ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.