Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿಜೆಪಿ ಮಂದಿಯನ್ನು ಗುರಿ ಮಾಡುತ್ತಿರುವ ಕಾಂಗ್ರೆಸ್ : ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ಬಿಜೆಪಿ ಮಂದಿಯನ್ನು ಗುರಿ ಮಾಡುತ್ತಿರುವ ಕಾಂಗ್ರೆಸ್ : ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*

May 13, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 13 NEWS DESK : ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಪೊಲೀಸರ ಮೇಲೆ ಒತ್ತಡ ಹೇರಿ, ಬಿಜೆಪಿ ಮಂದಿಯನ್ನು ಗುರಿ ಮಾಡಿ ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ರಾಜಾಸೀಟು ರಸ್ತೆಯಲ್ಲಿ ವಾಹನಗಳ ನಿಲುಗಡೆ ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಬಿಜೆಪಿ ನಗರಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ವಿರುದ್ಧ ಮೊಕದ್ದಮೆ ದಾಖಲಿಸಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ವಾಹನಗಳ ನಿಲುಗಡೆ ಶುಲ್ಕ ವಸೂಲಾತಿ ಕುರಿತು ದೂರು ಬಂದ ಹಿನ್ನೆಲೆ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಗುತ್ತಿಗೆ ನಿಯಮಕ್ಕೆ ವಿರುದ್ಧವಾಗಿ ಗಾಂಧಿ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಿ ಶುಲ್ಕ ವಸೂಲಿ ಮಾಡುತ್ತಿರುವುದು ಮತ್ತು ನಿಗಧಿತ ದರಕ್ಕಿಂತ ಅಧಿಕ ಶುಲ್ಕ ವಸೂಲಾತಿಯಲ್ಲಿ ತೊಡಗಿರುವುದು ಕಂಡು ಬಂದಿದೆ. ಸಹಜವಾಗಿಯೇ ನಗರಸಭಾ ಆಡಳಿತ ಮಂಡಳಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಸ್ಥಳದಲ್ಲಿದ್ದ ನಗರಸಭಾ ಸದಸ್ಯರೂ ಆಗಿರುವ ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಅವರು ಶುಲ್ಕ ವಸೂಲಾತಿಯ ಯಂತ್ರವನ್ನು ಕಸಿದುಕೊಂಡು ನಗರಸಭಾ ಅಧಿಕಾರಿಗಳಿಗೆ ನೀಡಿದ್ದಾರೆಯೇ ಹೊರತು ಯಂತ್ರವನ್ನು ಎಲ್ಲಿಗೂ ತೆಗೆದುಕೊಂಡು ಹೋಗಿಲ್ಲ.
ಆದರೆ ವಿನಾಕಾರಣ ಗಂಭೀರ ಆರೋಪ ಹೊರಿಸಿ ಉಮೇಶ್ ಸುಬ್ರಮಣಿ ಹಾಗೂ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ ಅವರುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕವನ್ ಕಾವೇರಪ್ಪ ಅವರು ಸ್ಥಳದಲ್ಲೇ ಇರಲಿಲ್ಲ ಎಂದು ತಿಳಿಸಿದ ರವಿ ಕಾಳಪ್ಪ, ರಾಜಕೀಯ ದುರುದ್ದೇಶಕ್ಕಾಗಿ ಕಾಂಗ್ರೆಸ್ಸಿಗರು ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಪೊಲೀಸ್ ಇಲಾಖೆ ನಾಗರೀಕರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ಕೊಡಗಿನ ಪೊಲೀಸರು ಕಾಂಗ್ರೆಸ್ ಪಕ್ಷದ ಏಜೆಂಟರುಗಳಂತೆ ವರ್ತಿಸುತ್ತಿದ್ದಾರೆ ಮತ್ತು ಬಿಜೆಪಿ ಕಾರ್ಯಕರ್ತರನ್ನು ಮಟ್ಟ ಹಾಕುವ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಿಸಿದರು. ಕಳೆದ 20- 25 ವರ್ಷಗಳಿಂದ ನಾವೂ ಕೂಡ ಶಾಸಕರಾಗಿದ್ದೆವು, ಆದರೆ ನಮ್ಮ ಅವಧಿಯಲ್ಲಿ ಯಾವುದೇ ದ್ವೇಷದ ರಾಜಕಾರಣ ಮಾಡಿಲ್ಲ. ರಾಜಕೀಯ ದುರುದ್ದೇಶಕ್ಕಾಗಿ ಪ್ರಕರಣ ದಾಖಲಿಸಿಲ್ಲ. ರಾಜಾಸೀಟು ರಸ್ತೆಯ ವಾಹನ ನಿಲುಗಡೆ ಶುಲ್ಕದ ವಿಚಾರವನ್ನು ಕಾಂಗ್ರೆಸ್ ರಾಜಕೀಯಕ್ಕಾಗಿ ಬಳಸಿಕೊಂಡಿದೆ. ಶುಲ್ಕ ವಸೂಲಾತಿ ಮಾಡುತ್ತಿದ್ದವರ ವಾಕಿಟಾಕಿ ಮತ್ತು ಯಂತ್ರವನ್ನು ಎಳೆದು ಅಧಿಕಾರಿಗಳಿಗೆ ನೀಡಲಾಗಿದೆ. ಆದರೆ ಪೊಲೀಸರು ಒತ್ತಡಕ್ಕೆ ಮಣಿದು ದರೋಡೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ವರ್ತನೆಯನ್ನು ವಿರೋಧಿಸಿ ಬೀದಿಗಿಳಿದು ಹೋರಾಟ ನಡೆಸುತ್ತೇವೆ ಮತ್ತು ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಾತನಾಡಿ ಕಾಂಗ್ರೆಸ್ಸಿಗರ ಒತ್ತಡಕ್ಕೆ ಮಣಿದು ಪೊಲೀಸರು ಗಂಭೀರ ಪ್ರಕರಣಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಸುಳ್ಳು ಮೊಕ್ಕದ್ದಮೆ ದಾಖಲಿಸಿ ಬಿಜೆಪಿ ಕಾರ್ಯಕರ್ತರಲ್ಲಿ ಭೀತಿ ಮೂಡಿಸುತ್ತಿರುವ ಕಾಂಗ್ರೆಸ್ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಜನರಿಂದ ಆಯ್ಕೆಯಾದ ಸದಸ್ಯರುಗಳನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಗೂಂಡಾಗಳು ಹಾಗೂ ಪುಂಡಾಟಿಕೆ ನಡೆಸುತ್ತಿರುವವರು ಎಂದು ಅವಮಾನ ಮಾಡಿದ್ದಾರೆ. ಇದು ಮತನೀಡಿ ಗೆಲ್ಲಿಸಿದ ಜನರಿಗೆ ಮಾಡಿದ ಅಪಮಾನವಾಗಿದ್ದು, ತಕ್ಷಣ ತಾವು ನೀಡಿದ ಹೇಳಿಕೆಯನ್ನು ಜಿಲ್ಲಾಧ್ಯಕ್ಷರು ವಾಪಾಸ್ಸು ಪಡೆಯಬೇಕೆಂದು ಒತ್ತಾಯಿಸಿದರು. ರಾಜಾಸೀಟು ರಸ್ತೆಯಲ್ಲಿ ನಿಗಧಿಗಿಂತ ಅಧಿಕ ಶುಲ್ಕವನ್ನು ಪ್ರವಾಸಿಗರಿಂದ ವಸೂಲಿ ಮಾಡಲಾಗುತ್ತಿದೆ. ಗಾಂಧಿ ಮೈದಾನದಲ್ಲಿ ನಿಯಮ ಬಾಹಿರವಾಗಿ ವಾಹನ ನಿಲುಗಡೆಗೆ ಅವಕಾಶ ನೀಡಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದನ್ನು ನಗರಸಭಾ ಪ್ರತಿನಿಧಿಗಳಾಗಿ ನಾವು ಪ್ರಶ್ನಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷೆ ಕಲಾವತಿ, ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಆದಂಪುರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ : ಸೈನಿಕರೊಂದಿಗೆ ಮಾತುಕತೆ*
Next Article *ಸುಂಟಿಕೊಪ್ಪದಲ್ಲಿ ಡಿ ಶಿವಪ್ಪ ಸ್ಮಾರಕ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.