Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪದಲ್ಲಿ ಡಿ ಶಿವಪ್ಪ ಸ್ಮಾರಕ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪದಲ್ಲಿ ಡಿ ಶಿವಪ್ಪ ಸ್ಮಾರಕ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ*

May 13, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 13 NEWS DESK : ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 16 ರಿಂದ 25ರ ವರೆಗೆ ಡಿ ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಂ.ಆಲಿಕುಟ್ಟಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ 26ನೇ ವರ್ಷದ ನಾಕೌಟ್ ಮಾದರಿಯ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಗೋಲ್ಡ್ ಕಪ್ ಕಪ್‍ಗಾಗಿ 25 ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದರು. ಪಂದ್ಯಾವಳಿಯ ಪ್ರಥಮ ಮತ್ತು ದ್ವಿತೀಯ ವಿಜೇತ ತಂಡಕ್ಕೆ ಡಿ.ವಿನೋದ್ ಶಿವಪ್ಪ ಮತ್ತು ಅವರ ಪುತ್ರ ವಿಶಾಲ್ ಶಿವಪ್ಪ ಅವರು ಡಿ.ಶಿವಪ್ಪ ಸ್ಮರಣಾರ್ಥವಾಗಿ 1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ 50 ಸಾವಿರ ನಗದು ಮತ್ತು ಟ್ರೋಫಿ ಜೊತೆಗೆ ವೈಯಕ್ತಿಕ ಬಹುಮಾನವನ್ನು ನೀಡಲಿದ್ದಾರೆ ಎಂದು ಹೇಳಿದರು. ಪ್ರತಿ ನಿತ್ಯ ಮಧ್ಯಾಹ್ನ 3 ಗಂಟೆಯಿಂದ ಎರಡು ಪಂದ್ಯಾವಳಿ ನಡೆಯಲಿದ್ದು, ಭಾನುವಾರ 3 ಪಂದ್ಯ ಆಯೋಜಿಸಲಾಗಿದೆ. ಮೇ 24 ರಂದು ಸೆಮಿಫೈನಲ್ ಪಂದ್ಯ ಜರುಗಲಿದೆ ಎಂದು ತಿಳಿಸಿದರು. ಕೊಡಗಿನ ಕೊಲ್ಕೋತ್ತಾ ಎಂದೇ ಖ್ಯಾತವಾದ ಸುಂಟಿಕೊಪ್ಪಕ್ಕೆ ಪುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರಸಿದ್ಧಿಯಿದೆ. ಫುಟ್ಬಾಲ್ ಆಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 38 ವರ್ಷದ ಹಿಂದೆ ಸುಂಟಿಕೊಪ್ಪದಲ್ಲಿ ಸ್ಥಾಪನೆಯಾದ ಬ್ಲೂ ಬಾಯ್ಸ್ ಯುವಕ ಸಂಘ ಇದೀಗ ಸಾಕಷ್ಟು ಸಾಧನೆಗಳೊಂದಿಗೆ ಮತ್ತೊಂದು ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಸಜ್ಜುಗೊಂದಿದೆ. ಸುಂಟಿಕೊಪ್ಪದಲ್ಲಿ ಫುಟ್ಬಾಲ್ ಪಂದ್ಯಾಟಕ್ಕೆ 66 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವುದು ಸುಂಟಿಕೊಪ್ಪದ ಹೆಗ್ಗಳಿಕೆಯಾಗಿದೆ ಎಂದರು. ಸುಂಟಿಕೊಪ್ಪದಲ್ಲಿ ಫುಟ್ಬಾಲ್ ಪಂದ್ಯಾಟಕ್ಕೆ ಪ್ರೋತ್ಸಾಹ ನೀಡಿದವರಲ್ಲಿ ಬೆಟ್ಟಗೇರಿ ಎಸ್ಟೇಟ್ ಮಾಲೀಕ ದೊಡ್ಡಮನೆ ಶಿವಪ್ಪ ಪ್ರಮುಖರಾಗಿದ್ದರು. ಅವರ ಕಾಲಾನಂತರ ಶಿವಪ್ಪ ಅವರ ಪುತ್ರ ವಿನೋದ್ ಶಿವಪ್ಪ ತನ್ನ ತಂದೆ ಡಿ.ಶಿವಪ್ಪ ಸ್ಮರಣಾರ್ಥ ಬ್ಲೂಬಾಯ್ಸ್ ಯುವ ಸಂಘಕ್ಕೆ ಪ್ರತಿವರ್ಷ ಟ್ರೋಫಿ, ನಗದು ಬಹುಮಾನ ನೀಡುವ ಮೂಲಕ ಫುಟ್ಬಾಲ್ ಪಂದ್ಯಾವಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸುಂಟಿಕೊಪ್ಪ ವ್ಯಾಪ್ತಿಯ ಅನೇಕ ದಾನಿಗಳು ಪ್ರಾಯೋಜರು ಪುಟ್ಬಾಲ್ ಪಂದ್ಯಾವಳಿಗೆ ಸಹಕಾರ ನೀಡುತ್ತಾ ಕ್ರೀಡಾ ನಿರಂತರತೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು.
ಪ್ಲಾಂಟರ್ ಹಾಗೂ ದಾನಿಗಳಾದ ಡಿ. ವಿನೋದ್ ಶಿವಪ್ಪ ಮಾತನಾಡಿ, 1996 ರಿಂದ ಸುಂಟಿಕೊಪ್ಪದಲ್ಲಿ ಡಿ.ಶಿವಪ್ಪ ಸ್ಮಾರಕ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಾ ಬರುತ್ತಿರುವ ಬ್ಲೂ ಬಾಯ್ಸ್ ಯುವಕ ಸಂಘ ಮಕ್ಕಳಿಂದ ಹಿರಿಯವರೆಗೆ ಈ ಪಂದ್ಯಾವಳಿ ಮೂಲಕ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಪುಟ್ಬಾಲ್ ಕ್ರೀಡೆಯತ್ತ ಆಕರ್ಷಣೆ ಮೂಡಿಸುವಲ್ಲಿ ಸಹಕಾರಿಯಾಗಿದೆ. ಪ್ರತೀ ವರ್ಷ ಡಿ.ಶಿವಪ್ಪ ಸ್ಮಾರಕ ಪುಟ್ಬಾಲ್ ಪಂದ್ಯಾವಳಿಯನ್ನು ಸಾವಿರಾರು ಕ್ರೀಡಾ ಪ್ರೇಮಿಗಳು ವೀಕ್ಷಿಸುತ್ತಾ ಕ್ರೀಡಾ ಮನರಂಜನೆ ಪಡೆಯುತ್ತಿದ್ದಾರೆ ಎಂದರು. ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ತಮಿಳುನಾಡು, ಮಂಡ್ಯ, ಮೈಸೂರು, ಕೇರಳ ಕ್ಯಾಲಿಕಟ್, ಮಂಗಳೂರು, ಕೂತುಪರಂಬ ಕಣ್ಣೂರು, ಕುಂಬಳೆ, ಉಪ್ಪಳ, ಊಟಿ, ತಿರುಚ್ಚಿ, ಕೆಜಿಎಫ್‍ನ ವಾರಿಯರ್ಸ್ ಫುಟ್ಬಾಲ್ ಕ್ಲಬ್, ಬೈಲಕುಪ್ಪ, ಕೊಡಗಿನ ಪ್ರತಿಷ್ಟಿತ ತಂಡಗಳಾದ ಕುಶಾಲನಗರ, ಮಿಡ್ ಸಿಟಿ, ಪನ್ಯ, ಬೆಟ್ಟಗೇರಿ, ಗೋಣಿಕೊಪ್ಪ, ಕೊಡಗರಹಳ್ಳಿಯ ನೇತಾಜಿ ಯುವಕ ಸಂಘ, ಗದ್ದೆಹಳ್ಳದ ಎಮಿಟಿ ತಂಡಗಳೂ ಸೇರಿದಂತೆ ಅತಿಥೇಯ ಸುಂಟಿಕೊಪ್ಪದ ಬ್ಲೂಬಾಯ್ಸ್ ಯೂತ್ ತಂಡವೂ ಪಾಲ್ಗೊಳ್ಳಲಿದೆ ಎಂದರು. ಸುಂಟಿಕೊಪ್ಪ ವಾಹನ ಚಾಲಕ ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮನ್ ಮಾತನಾಡಿ, ಮೇ 16 ರಂದು ಮಧ್ಯಾಹ್ನ 3 ಗಂಟೆಗೆ ಪಂದ್ಯಾವಳಿಯನ್ನು ಕೊಡಗಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಮತ್ತು ಕುಶಾಲನಗರ ಉಪವಿಭಾಗದ ಉಪ ಅಧೀಕ್ಷಕರಾದ ಪಿ.ಚಂದ್ರಶೇಖರ್ ಹಾಗೂ ಡಿ.ವಿಶಾಲ್ ಶಿವಪ್ಪ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಈಗಾಗಲೇ ಬ್ಲೂ ಬಾಯ್ಸ್ ಯುವಕ ಸಂಘವು ಅನೇಕ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸಂತ್ರಸ್ಥರಿಗೆ ನೆರವು ನೀಡಿದ ಸಂಘದ ಸದಸ್ಯರು, ಹಲವಾರು ವರ್ಷಗಳಿಂದ ರಕ್ತದಾನ ಶಿಬಿರ, ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಪ್ರತೀ ವರ್ಷ ಒಂದಲ್ಲ ಒಂದು ರೀತಿಯ ಕ್ರೀಡಾ ಚಟುವಟಿಕೆ. ರಾಷ್ಟ್ರೀಯ ಉತ್ಸವಗಳು ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಆಟಗಾರರು ರಾಜ್ಯಮಟ್ಟದ ಹೊನಲು ಬೆಳಕಿನ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿರುವುದು ವಿಶೇಷ. ಅಲ್ಲದೇ ಸಂಘದ ಸದಸ್ಯರಲ್ಲಿಯೇ ಅನೇಕರು ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿರುವುದು ಕೂಡ ಗಮನಾರ್ಹ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಟಿ.ವಿ.ಪ್ರಸನ್ನ, ಉಪಾಧ್ಯಕ್ಷ ಎನ್.ಎಸ್.ಆದಿಶೇಷ, ಸಹಕಾರ್ಯದರ್ಶಿ ಯು.ಎಂ.ಅನಿಲ್ ಕುಮಾರ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬಿಜೆಪಿ ಮಂದಿಯನ್ನು ಗುರಿ ಮಾಡುತ್ತಿರುವ ಕಾಂಗ್ರೆಸ್ : ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*
Next Article *ಮೇ 14 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.