Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾತಿ ಗಣತಿಯನ್ನು ಬಹಿಷ್ಕರಿಸುವ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಾತಿ ಗಣತಿಯನ್ನು ಬಹಿಷ್ಕರಿಸುವ ಎಚ್ಚರಿಕೆ*

ಮೇ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 13 NEWS DESK : ಜಾತಿ ಗಣತಿ ಸಮೀಕ್ಷೆಯ ಸಂದರ್ಭ ಆದಿ ದ್ರಾವಿಡ ಸಮುದಾಯದವರನ್ನು ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎಂದು ನಮೂದಿಸಬೇಕು. ಸಮೀಕ್ಷಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ರಾಜ್ಯದಲ್ಲಿರುವ 12 ಲಕ್ಷದಷ್ಟು ಆದಿದ್ರಾವಿಡ ಸಮುದಾಯದವರು ಜಾತಿ ಗಣತಿಯನ್ನು ಬಹಿಷ್ಕರಿಸಲಿದ್ದಾರೆ ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘ ಎಚ್ಚರಿಕೆ ನೀಡಿದೆ. ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು, ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎದುರಿಸುತ್ತಿರುವ ಜಾತಿ ದೃಢೀಕರಣ ಪತ್ರದ ಸಮಸ್ಯೆಯ ಕುರಿತು ಗಮನ ಸೆಳೆದರು. ಮೀಸಲಾತಿ, ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಯ ವಿಶೇಷ ಜಾತಿಗಣತಿ ನಡೆಯುತ್ತಿದ್ದು, ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳ ಪಟ್ಟಿಯಲ್ಲಿ ವಿಶೇಷವಾಗಿ ಆದಿ ದ್ರಾವಿಡ/ ಆದಿ ಕರ್ನಾಟಕ/ ಆದಿ ಆಂಧ್ರ ಇವುಗಳು 1950ರಲ್ಲಿ ಅಧಿಕೃತವಾಗಿ ಅಧಿಸೂಚನೆಗೊಂಡ ಉಪ ಜಾತಿಗಳು. ಈ ಜಾತಿ ಪ್ರಮಾಣಪತ್ರವನ್ನು ಅಧಿಕೃತವಾಗಿ ಪಡೆದಿರುವುದಕ್ಕೆ 75 ವರ್ಷಗಳ ಇತಿಹಾಸವಿದೆ. ಒಂದು ಜಾತಿಯನ್ನು ಸೃಷ್ಟಿ ಮಾಡುವ ಅಥವಾ ನಿಷೇಧಿಸುವ ಅಧಿಕಾರವಿರುವುದು ಸಂವಿಧಾನ ಬದ್ಧವಾಗಿ ರಾಷ್ಟ್ರಪತಿಗಳಿಗೆ ಮಾತ್ರ.
ಈ ಬಾರಿಯ ಜಾತಿ ಗಣತಿಯ ಸಂದರ್ಭ ಆದಿದ್ರಾವಿ/ಆದಿ ಕರ್ನಾಟಕ/ಆದಿ ಆಂಧ್ರ ಇವುಗಳಲ್ಲಿ ಉಪಜಾತಿಯನ್ನು ಕಡ್ಡಾಯವಾಗಿ ನಮೂದಿಸಬೇಕು. ಇಲ್ಲದಿದ್ದಲ್ಲಿ ಮೀಸಲಾತಿಯಡಿ ಕುಟುಂಬವನ್ನು ಕೈಬಿಡಲಾಗುವುದು ಎಂದು ಆಯೋಗ ತಿಳಿಸಿದೆ. ಆದಿ ದ್ರಾವಿಡ ಬರೆದು ಈ 98 ಜಾತಿಯಲ್ಲಿ ಯಾವುದಾದರೂ ಒಂದನ್ನು ನಮೂದಿಸಿದರೆ ಅವರು ಉಪ ಜಾತಿಗೆ ಸಂಬಂಧಪಟ್ಟವರು ಎಂದು ಪರಿಗಣಿಸಲಾಗುವುದು. ಹಾಗಿರುವಾಗ ನಾವು ಮೂಲತಃ ಆದಿ ದ್ರಾವಿಡ ತುಳು ಭಾಷಿಕರು ಆಗಿರುವುದರಿಂದ ಸಮೀಕ್ಷೆ ಕಾರ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಆದಿ ದ್ರಾವಿಡ ಉಪ ಜಾತಿ (ತುಳು ಭಾಷಿಕರು) ಎಂದು ಮಾಹಿತಿ ನೀಡಬೇಕು ಮತ್ತು ಇದನ್ನು ಯಥಾವತ್ತಾಗಿ ದಾಖಲಿಸಬೇಕು. ಇದಲ್ಲದೆ ಬೇರೆ ಯಾವುದೇ ಇಲ್ಲದ ವಿಚಾರವನ್ನು ದಾಖಲು ಮಾಡಬಾರದೆಂದು ಹೆಚ್.ಎಂ.ಸೋಮಪ್ಪ ಮನವಿ ಮಾಡಿದರು. ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎಂದು ನಮೂದಿಸದೆ ಇದ್ದರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಅವಿಭಾಜ್ಯ ಉಡುಪಿ, ಮಲೆನಾಡು ಜಿಲ್ಲೆಗಳಲ್ಲಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚದುರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸುಮಾರು 12 ಲಕ್ಷದಷ್ಟು ಆದಿದ್ರಾವಿಡ ಸಮುದಾಯದವರು ಅವೈಜ್ಞಾನಿಕ ಜಾತಿ ಗಣತಿ ಸಮೀಕ್ಷಾ ಕಾರ್ಯವನ್ನು ಬಹಿಷ್ಕರಿಸಲಿದ್ದಾರೆ ಎಂದರು. ಮನವಿ ಸಲ್ಲಿಸುವ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಪಿ.ಎಲ್.ಸುರೇಶ, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಮಧು, ಸದಸ್ಯರಾದ ಎ.ಉಮೇಶ್ ಮಾದಾಪುರ, ಹೆಚ್.ಎಸ್.ಮನು, ರವಿ ಹೊನ್ನವಳ್ಳಿ, ಕುಮಾರ ಬಿಟಿಕಟ್ಟೆ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.