Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೈನಿಕರ ಪರ ಬೆಂಬಲಕ್ಕೆ ಎಲ್ಲರೂ ನಿಲ್ಲೋಣ  : ಸಂಸದ ಯದುವೀರ್ ಮನವಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸೈನಿಕರ ಪರ ಬೆಂಬಲಕ್ಕೆ ಎಲ್ಲರೂ ನಿಲ್ಲೋಣ  : ಸಂಸದ ಯದುವೀರ್ ಮನವಿ*

ಮೇ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಮೇ 16 NEWS DESK : ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಮಟ್ಟ ಹಾಕಲು ಭಾರತೀಯ ಯೋಧರು ನಡೆಸಿದ “ಆಪರೇಷನ್‌ ಸಿಂಧೂರ” ಕಾರ್ಯಾಚರಣೆಗೆ ಬೆಂಬಲ ವ್ಯಕ್ತಪಡಿಸಿ ಮೈಸೂರಿನಲ್ಲಿ ತಿರಂಗಾ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಸದ ಯದುವೀರ್‌, ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಲು, ಅವರಿಗೆ ಬೆಂಬಲ ಸೂಚಿಸಲು, ಅವರ ಕುಟುಂಬ ಸದಸ್ಯರ ಜೊತೆಗೆ ನಾವೆಲ್ಲರೂ ಇದ್ದೇವೆ ಎಂಬುದನ್ನು ಈ ತಿರಂಗಾ ಯಾತ್ರೆಯ ಮೂಲಕ ಸೂಚಿಸಲಿದ್ದೇವೆ ಎಂದು ತಿಳಿಸಿದರು. ಈ ಯಾತ್ರೆಯಲ್ಲಿ ಭಾಗಿಯಾಗುವಂತೆ ಸರ್ವಧರ್ಮದ ಮುಖ್ಯಸ್ಥರನ್ನು, ಮುಖಂಡರನ್ನು ಆಹ್ವಾನಿಸಿದ್ದೇವೆ ಎಂದು ಯದುವೀರ್‌ ತಿಳಿಸಿದ್ದಾರೆ. ಎಲ್ಲರೂ ಬನ್ನಿ ಭಾಗವಹಿಸಿ ಮೈಸೂರು ಜಿಲ್ಲೆಯ ಎಲ್ಲ ಪ್ರಮುಖರು, ಉದ್ಯಮಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ನಿವೃತ್ತ ಯೋಧರ ಸಂಘದ ಸದಸ್ಯರು, ಯೋಧರ ಕುಟುಂಬ ಸದಸ್ಯರು, ನಾಗರಿಕರು ಎಲ್ಲರೂ ಈ ಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಸಂಸದರು ಮನವಿ ಮಾಡಿದ್ದಾರೆ. ಮೈಸೂರಿನ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ವೃತ್ತದಿಂದ (ಮೆಟ್ರೋ ಪೋಲ್‌ ಸರ್ಕಲ್‌) ಬೆಳಗ್ಗೆ ಹತ್ತು ಗಂಟೆಗೆ ಈ ತಿರಂಗಾ ಯಾತ್ರೆ ಆರಂಭವಾಗಲಿದೆ ಎಂದು ಸಂಸದರು ಮಾಹಿತಿ ನೀಡಿದರು. ನಮ್ಮ ಭಾರತೀಯ ಯೋಧರು, ದೇಶದ ರಕ್ಷಣೆ ಹಾಗೂ ನಾಗರಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವ ಹಿಸಿದ್ದಾರೆ. ಜೊತೆಗೆ ಪಾಕಿಸ್ತಾನಕ್ಕೆ ನುಗ್ಗಿ, ಉಗ್ರರನ್ನು ಸದೆಬಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಯದುವೀರ್‌ ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ನಮ್ಮ ಭಾರತೀಯ ಯೋಧರನ್ನು ಕೆಲವರನ್ನು ಕಳೆದುಕೊಂಡಿದ್ದೇವೆ. ಇದು ನಿಜಕ್ಕೂ ದುಃಖದ ಸಂಗತಿ. ಅವರ ಕುಟುಂಬ ಸದಸ್ಯರ ಜೊತೆ ನಾವಿರುತ್ತೇವೆ. ಒಟ್ಟಾರೆಯಾಗಿ ಇಡೀ ದೇಶದ ಯೋಧರ ಬೆಂಬಲಕ್ಕೆ ನಾವು ಇದ್ದೇವೆ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ ಎಂದರು. ಈ ನಿಟ್ಟಿನಲ್ಲಿ ಎಲ್ಲರೂ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

:: ಸರ್ವ ಧರ್ಮದ ನಾಯಕರು ಭಾಗಿ ::  ತಿರಂಗಾ ಯಾತ್ರೆಯಲ್ಲಿ ಮೈಸೂರಿನ ಬಹುತೇಕ ಪ್ರಮುಖ ಧಾರ್ಮಿಕ ನಾಯಕರು ಭಾಗಿಯಾಗಲಿದ್ದಾರೆ. ಸಂಸದ ಯದುವೀರ್‌, ಶಾಸಕ ಶ್ರೀವತ್ಸ, ಹಿರಿಯ ನಾಯಕರು ಈಗಾಗಲೇ ಸರ್ವಧರ್ಮದ ನಾಯಕರನ್ನು ಭೇಟಿ ಮಾಡಿ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ. ಮೈಸೂರಿನ ಸುತ್ತೂರು ಮಠದ ಶ್ರೀ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಅವಧೂತ ದತ್ತ ಪೀಠಾಧಿಪತಿ ಜಗದ್ಗುರು ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರುˌ ಬಿಷಪ್ ಬರ್ನಾರ್ಡ್ ಮೋರಾಸ್ ಅವರು, ಸರ್ ಖಾಜಿ ಹಜರತ್ ಮೌಲಾನಾ ಮೊಹಮ್ಮದ್ ಉಸ್ಮಾನ್ ಶರೀಫ್ ಅವರನ್ನು ಭೇಟಿ ಮಾಡಿ ಈ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಆಮಂತ್ರಿಸಿ, ಅವರ ಬೆಂಬಲವನ್ನು ಸಂಸದರು ಕೋರಿದ್ದಾರೆ. ಎಲ್ಲರೂ ಈ ಬೃಹತ್‌ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.