Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಮಹಾದೇಗುಲ»*ಜೇನುನೊಣಗಳ ರೂಪದಲ್ಲಿ ನೆಲೆಸಿರುವ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ*
ಮಹಾದೇಗುಲ

*ಜೇನುನೊಣಗಳ ರೂಪದಲ್ಲಿ ನೆಲೆಸಿರುವ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ*

ಮೇ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ 8 ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ. 1101 ಮೆಟ್ಟಿಲುಗಳನ್ನು ಹೊಂದಿರುವ ಬೆಟ್ಟವನ್ನು ಉತ್ತರ ದಕ್ಷಿಣವಾಗಿ ಎರಡು ಕಡೆಯಿಂದ ಹತ್ತಬಹುದು. ಬೆಟ್ಟದ ಮೇಲೆ ಸಿದ್ದೇಶ್ವರ ಸ್ವಾಮಿಯ ಪಾದವನ್ನು ಕಾಣಬಹುದು. ಈ ಬೆಟ್ಟದ ತುದಿಯಲ್ಲಿ ಒಂದು ಗೋಪುರವಿದೆ. ಅಲ್ಲೇ ಪಕ್ಕದಲ್ಲಿ ಗಂಗಮ್ಮ ಕೊಳ ಇದೆ. ಬೆಟ್ಟದ ಕೆಳಗೆ ಒಂದು ಬಸವಣ್ಣನ ಗುಡಿ ಇದೆ.  ಇತಿಹಾಸ :: ಹಿಂದೆ ಈ ಪ್ರಾಂತ್ಯ ಮೊದಲು ಅರಣ್ಯವಾಗಿತ್ತು. ಸಿದ್ಧರು ಅನೇಕ ವರ್ಷ ತಪಸ್ಸು ಮಾಡಿ ಸಿದ್ದಿಯಾದ ಸ್ಥಳವೇ ಯಾದಪುರವಾಯಿತೆಂದು ಪ್ರಚಲಿತದಲ್ಲಿ ಇದೆ. ಒಂದು ದಂತಕಥೆಯ ಪ್ರಕಾರ, ಒಮ್ಮೆ ಒಬ್ಬ ಸನ್ಯಾಸಿಯು ಈ ಹಳ್ಳಿಯ ಮೂಲಕ ಹಾದು ಹೋಗುತ್ತಿದ್ದಾಗ ಓರ್ವ ಮಹಿಳೆಯು ತನ್ನ ಮಗುವನ್ನು ಕಳೆದುಕೊಂಡು ದುಃಖಿಸುತ್ತಿರುತ್ತಾಳೆ. ಆಕೆಯ ಮಗುವಿನ ಸಾವಿಗೆ ಕಾರಣ ತಿಳಿದಾಗ ಗ್ರಾಮಸ್ಥರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಯುತ್ತದೆ. ಅದನ್ನು ತೊಡೆದುಹಾಕಲು ಸನ್ಯಾಸಿಯು ಸಿದ್ದೇಶ್ವರನನ್ನು ಕುರಿತು ತಪಸ್ಸು ಮಾಡಿ ಜೇನುಕಲ್ಲು ಸಿದ್ಧೇಶ್ವರ ಸ್ವಾಮಿಯನ್ನು (ಶಿವ) ಮೆಚ್ಚಿಸಿ, ಆ ಊರಿನಲ್ಲಿರುವ ಆರೋಗ್ಯದ ಸಮಸ್ಯೆಗಳನ್ನು ತೊಡೆದುಹಾಕುವ ವರವನ್ನು ಕೇಳುತ್ತಾರೆ. ಹೀಗೆ, ವಿವಿಧ ರೋಗಗಳಿಂದ ಬಳಲುತ್ತಿರುವ ಜನರು ಈ ಸ್ಥಳಕ್ಕೆ ಬಂದು ಗುಣಮುಖರಾದರಂತೆ.  ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯು ಬೆಟ್ಟದ ಮೇಲೆ ತಮ್ಮ ಎರಡು ಪಾದಗಳನ್ನು ಮಾತ್ರ ಮೂಡಿಸಿ ಕೆಳಗೆ ಯಾದಪುರದ ಊರ ಮಧ್ಯಭಾಗದಲ್ಲಿ ಮಲಗಿರುವ ಮುದ್ದು ನಂದಿಯ ರೂಪದಲ್ಲಿ ಉದ್ಭವಿಸಿದರಂತೆ.  ಹೆಸರಿನ ಉಗಮ :: ಹಿಂದೆ ಎತ್ತರವಾದ ಬೆಟ್ಟದಲ್ಲಿ ಶ್ರೀಯವರ ಸನ್ನಿಧಾನದ ಪಕ್ಕದಲ್ಲಿ ಜೇನುಗೂಡು ಸದಾಕಾಲ ಕಟ್ಟಿರುವುದರಿಂದ ಈ ಕ್ಷೇತ್ರಕ್ಕೆ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ಕ್ಷೇತ್ರವೆಂದು ಹೆಸರು ಬಂದಿದೆ. ಈ ಜೇನುಗೂಡುನಲ್ಲಿ, ಜೇನುನೊಣಗಳ ರೂಪದಲ್ಲಿ ದೇವತೆಗಳ ವಾಸಸ್ಥಾನವಾಗಿದ್ದಾರೆ ಎಂದು ಹೇಳಲಾಗುತ್ತದೆ. ಜೇನುಕಲ್ಲು ಸಿದ್ದೇಶ್ವರರನ್ನು ಅಜ್ಜಯ್ಯಾ, ಸಿದ್ದೇಶ್ವರ ಎಂಬ ಹೆಸರುಗಳಿಂದ ಕರೆಯುತ್ತಾರೆ. ಹುಣ್ಣಿಮೆ ಹಾಗೂ ಅಮವಾಸ್ಯೆಯಂದು ಭಕ್ತರು ದಂಡು ::  ಪ್ರತಿ ತಿಂಗಳು ಹುಣ್ಣಿಮೆ ಹಾಗೂ ಅಮವಾಸ್ಯೆಯಂದು ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ಏಪ್ರಿಲ್ / ಜೂನ್ ತಿಂಗಳಲ್ಲಿ ನಡೆಯುವ ಪ್ರಸಿದ್ಧವಾದ ಶ್ರೀ ಜೇನುಕಲ್ಲು ಸಿದ್ದೇಶ್ವರ ಉತ್ಸವಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

                    

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

ಡಿಸೆಂಬರ್ 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

ನವೆಂಬರ್ 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

ಅಕ್ಟೋಬರ್ 22, 2025

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.