Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬೇಟೋಳಿಯಲ್ಲಿ ವೈದಿಕ ಶಿಬಿರ ಸಮಾರೋಪ : ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಿ : ನಿವೃತ್ತ ಕ್ಯಾಪ್ಟನ್ ಭವಾನಿ ಶಂಕರ್ ಬೋರ್ಕಾರ್*
ಇತ್ತೀಚಿನ ಸುದ್ದಿಗಳು

*ಬೇಟೋಳಿಯಲ್ಲಿ ವೈದಿಕ ಶಿಬಿರ ಸಮಾರೋಪ : ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಿ : ನಿವೃತ್ತ ಕ್ಯಾಪ್ಟನ್ ಭವಾನಿ ಶಂಕರ್ ಬೋರ್ಕಾರ್*

May 17, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 17 NEWS DESK :  ಭಗವದ್ಗೀತೆಯಲ್ಲಿನ ಜೀವನ ಮೌಲ್ಯ ಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಭೂ ಸೇನೆಯ ನಿವೃತ್ತ ಕ್ಯಾಪ್ಟನ್ ಬಿ.ವಿ.ಭವಾನಿ ಶಂಕರ್ ಬೋರ್ಕಾರ್  ಅಭಿಪ್ರಾಯಪಟ್ಟರು. ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಂಗಣದಲ್ಲಿ ಜರುಗಿದ ಕೊಡಗು ಬಾಲವಲೀಕಾರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ಮಕ್ಕಳ ವೈದಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏನನ್ನಾದರೂ ಕಲಿಯಬೇಕಾದರೆ ಮೊದಲು ಆತನಲ್ಲಿ ಶ್ರದ್ಧೆ ಹಾಗೂ ಕಲಿಯುವ ಆಸಕ್ತಿ ಇರಬೇಕು. ಇದರೊಂದಿಗೆ ಕಲಿಯುವ ಸಂದರ್ಭದಲ್ಲಿ ಏಕಾಗ್ರತೆಯು ಅತಿ ಮುಖ್ಯವಾಗಿದ್ದು. ಗುರುಗಳು ಬೋಧಿಸಿದ್ದನ್ನು ಉತ್ತಮ ರೀತಿಯಲ್ಲಿ ಶ್ರವಣ ಮಾಡಿಕೊಳ್ಳಬೇಕು. ಶ್ರವಣ ಮಾಡಿಕೊಂಡದ್ದನ್ನು ಮನದಲ್ಲಿ ಮೇಲಿಂದ ಮೇಲೆ ಮನನ ಮಾಡಿಕೊಳ್ಳಬೇಕು. ಮನನ ಮಾಡಿಕೊಂಡ ನಂತರ ಅದನ್ನು ಅನುಷ್ಠಾನಗೊಳಿಸಬೇಕು. ಈ ರೀತಿ ಕಲಿತಂತಹ ಸಂದರ್ಭದಲ್ಲಿ ಮಾತ್ರ ಕಲಿತಂತಹ ವಿಚಾರವೂ ನಮ್ಮಲ್ಲಿ ಉಳಿಯುತ್ತದೆ. ಕಲಿಕೆಯ ಮೊದಲ ಹಂತವೇ ಏಕಾಗ್ರತೆ. ಮನಸ್ಸು ಚಂಚಲವಾಗಿದ್ದರೆ ಏನನ್ನು ಕಲಿಯಲು ಸಾಧ್ಯವಿಲ್ಲ. ಒಂದು ವೇಳೆ ಕಲಿತರು ಅದು ದೀರ್ಘಕಾಲದವರೆಗೆ ಯೋಚನೆಯಲ್ಲಿ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಮನಸ್ಸಿನ ಏಕಾಗ್ರತೆಗೆ ಯೋಗ ಹಾಗೂ ಧ್ಯಾನ ಅತಿ ಮುಖ್ಯ. ಇದರೊಂದಿಗೆ ಭಗವದ್ಗೀತೆ ಉಪನಿಷತ್ತು ಹಾಗೂ ಇನ್ನಿತರ ಶ್ಲೋಕಗಳನ್ನು ಪಠಣದಿಂದ ಮನಸ್ಸು ಹಾಗೂ ದೇಹದ ನಡುವೆ ಏಕಾಗ್ರತೆಯನ್ನು ಸಾಧಿಸುವುದರೊಂದಿಗೆ ಮನಶಾಂತಿ ಲಭಿಸುತ್ತದೆ. ಭಗವತ್ ಗೀತೆ ಪಠಣದಿಂದ ಕೃಷ್ಣನು ಬೋಧಿಸಿದ ಅಮೂಲ್ಯ ಸಂದೇಶ ದೊಂದಿಗೆ ಜೀವನ ಮೌಲ್ಯವನ್ನು ಅರ್ಥೈಸಿ ಜೀವನದಲ್ಲಿ ರೂಢಿಸಿಕೊಳ್ಳ ಬೇಕೆಂದರು. ಕಾರ್ಯಕ್ರಮದ ಮತ್ತೋರ್ವ ಅತಿಥಿಗಳಾದ ಪ್ರವೀಣ್ ಭಟ್ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಂಡಂತಹ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತಂತಹ ವಿಚಾರಗಳನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶಿಬಿರದಲ್ಲಿ ಕಲಿತ ವಿಚಾರ ಶಿಬಿರಕ್ಕೆ ಮಾತ್ರ ಸೀಮಿತವಾಗದೆ ಜೀವನದ ಉದ್ದಕ್ಕೂ ಪಾಲಿಸಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುದುಪಾಡಿ ಅಯ್ಯಪ್ಪ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಶೈಲೇಶ್ ಕಾಮತ್, ಕೊಡಗಿನಲ್ಲಿ ಇದೇ ಮೊದಲ ಬಾರಿ ಕೊಡಗು ಬಾಲವಳಿಕಾರ್ ರಾಜಪುರ ಸಾರಸ್ವತ ಬ್ರಾಹ್ಮಣರ ವೈದಿಕ ಶಿಬಿರವನ್ನು ನಡೆಸಲಾಗಿದ್ದು ಇದರಲ್ಲಿ ಒಟ್ಟು 15 ವಟುಗಳು ಪಾಲ್ಗೊಂಡಿದ್ದರು. ಮೂರು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ರಾಜೇಶ್ ಭಟ್ ಹಾಗೂ ಶ್ರೇಯಸ್ ಭಟ್ ನೇತೃತ್ವದಲ್ಲಿ ಶಿಬಿರಾರ್ಥಿಗಳಿಗೆ ಕುಲದೇವರ ಪೂಜೆ, ಸಂಧ್ಯಾವಂದನೆ, ಯೋಗ , ಬೋಜನ ವಿಧಿ, ಜನಿವಾರ ಧಾರಣೆ ಹಾಗೂ ಭಗವತ್ ಗೀತೆ ಪಠಣ ವನ್ನು ಕಲಿಸಲಾಗಿದ್ದು ಮುಂದಿನ ವರ್ಷ ಇನ್ನು ಹೆಚ್ಚಿನ ವಟುಗಳೊಂದಿಗೆ 7 ದಿನಗಳ ಶಿಬಿರ ನಡೆಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶ್ರೇಯಸ್ ಭಟ್ , ವೇಣುಗೋಪಾಲ್ ಭಟ್ ಹಾಜರಿದ್ದರು. ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಗೀತ, ರಾಮಶರ್ಮ, ಜ್ಯೋತಿ, ಸುಮನ ಹಾಗೂ ಪೋಷಕರು‌ ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಜೇನುನೊಣಗಳ ರೂಪದಲ್ಲಿ ನೆಲೆಸಿರುವ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ*
Next Article *ಮಹಾಬೋಧಿ ಪತ್ತಿನ ಸಹಕಾರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.