
ಮಡಿಕೇರಿ ಮೇ 19 NEWS DESK : ಹುದಿಕೇರಿಯಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯ ಫೈನಲ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚೆಕ್ಕೇರ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ತಮ್ಮ ಅದ್ಭುತ ಬ್ಯಾಟಿಂಗ್ ಶೈಲಿ ಹಾಗೂ ಆಕರ್ಷಕ ಬೌಲಿಂಗ್ ಮೂಲಕ ಶಾಸಕರು ನೆರೆದ ಪ್ರೇಕ್ಷಕರ ಗಮನ ಸೆಳೆದರು. ಪುರುಷರ ವಿಭಾಗದಲ್ಲಿ ಅಚ್ಚಪಂಡ ಹಾಗೂ ನೆರವಂಡ, ಮಹಿಳಾ ವಿಭಾಗದಲ್ಲಿ ಓಡಿಯಂಡ ಮತ್ತು ಅರಮಣ ಮಾಡ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.










