Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ*

ಮೇ 19, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 19 NEWS DESK : ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳಿಗೆ ಅನುಮೋದನೆ ನೀಡಲಾಯಿತು. ಈ ಕುರಿತು ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಸಂಪನ್ಮೂಲ ಅರ್ಜಿಗಳಿಗೆ ಉಪ ವಿಭಾಗ ಮಟ್ಟದಲ್ಲಿ ಅನುಮೋದನೆ ದೊರೆತಿದ್ದು, ಜಿಲ್ಲಾ ಮಟ್ಟದಲ್ಲಿ ಅನುಮೋದಿಸಬೇಕಿದೆ ಎಂದು ಕೋರಿದರು. ಪೊನ್ನಂಪೇಟೆ ತಾಲ್ಲೂಕಿನ ಪರಿಶಿಷ್ಟ ಪಂಗಡದ ಕಾಡುಕುರುಬ ಸಮಾಜದ ತಿತಿಮತಿಯ ದೊಡ್ಡರೇಷ್ಮೆ ಹಡ್ಲುವಿನ ಸ್ವಾಮಿ ಬಿ.ಕೆ ಬಿನ್ ಕಾಳ, ನಾಲ್ಕೇರಿ ಗ್ರಾ.ಪಂ.ನ ಗೋಳಿಗದ್ದೆಯ ಪರಿಶಿಷ್ಟ ಪಂಗಡದ ಜೇನುಕುರುಬ ಜೆ.ಬೋಜಿ, ಜೆ.ಆರ್.ಸಣ್ಣಪ್ಪ ಬಿನ್ ಪೌತಿ ರಂಗ, ಕುಶಾಲನಗರ ನಂಜರಾಯಪಟ್ಟಣ ಗ್ರಾ.ಪಂ.ವ್ಯಾಪ್ತಿಯ ರಾಮು ವೈ.ಡಿ.ಬಿನ್ ಪೌತಿ ದೊರೆಸ್ವಾಮಿ ಪರಿಶಿಷ್ಟ ಪಂಗಡದ ಯರವ, ನಂಜರಾಯಪಟ್ಟಣದ ರಾಧ ಬಿ.ಎಂ. ಕೋಂ. ಪೌತಿ ಕೃಷ್ಣಪ್ಪ ಪರಿಶಿಷ್ಟ ಪಂಗಡದ ಜೇನು ಕುರುಬ, ನಂಜರಾಯ ಪಟ್ಟಣದ ಚೆಲ್ಲಪ್ಪ ಬಿ.ಕೆ. ಪೌತಿ ಕಾಳ ಪರಿಶಿಷ್ಟ ಪಂಗಡದ ಜೇನುಕುರುಬ, ತೊರೆನೂರು ಗ್ರಾ.ಪಂ. ವ್ಯಾಪ್ತಿಯ ಚಿಕ್ಕಳುವಾರ ಹಾಡಿಯ ಚಂದ್ರಕಲಾ ಕೋಂ. ಶಂಕರ ಪರಿಶಿಷ್ಟ ಪಂಗಡ, ಚಿಕ್ಕಳುವಾರ ಹಾಡಿಯ ಬಸಪ್ಪ ಬಿನ್ ಕಾಳಸಪ್ಪ ಪರಿಶಿಷ್ಟ ಪಂಗಡ, ಚಿಕ್ಕಳುವಾರದ ಮರಿಯಪ್ಪ ಬಿನ್ ಹುಚ್ಚಪ್ಪ ಪರಿಶಿಷ್ಟ ಪಂಗಡ, ಇವರ ವೈಯಕ್ತಿಕ ಅರ್ಜಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅನುಮೋದನೆ ದೊರೆಯಿತು. ಸಮುದಾಯ ಹಕ್ಕುಗಳಿಗೆ ಸಂಬಂಧಿಸಿದಂತೆ ತಿತಿಮತಿ ಗ್ರಾ.ಪಂ.ವ್ಯಾಪ್ತಿಯ ದೊಡ್ಡರೇಷ್ಮೆ ಜೆ.ಬಿ.ರಾಮು ಹಾಗೂ 96 ಜನ ಪರಿಶಿಷ್ಟ ಪಂಗಡದವರಿಗೆ, ಚೇಣಿಹಡ್ಲು ಹಾಡಿಯ ಸುಬ್ಬ ಪಿ.ಎಸ್.ಬಿನ್ ಪೌತಿ ನಂಜ ಹಾಗೂ 66 ಜನ ಪರಿಶಿಷ್ಟ ಪಂಗಡದವರಿಗೆ, ಬೊಂಬುಕಾಡು ರಾಮು ಪಿ.ಕೆ. ಬಿನ್ ಕರಿಯ ಹಾಗೂ 41 ಜನ ಪರಿಶಿಷ್ಟ ಪಂಗಡದವರಿಗೆ, ಮಜ್ಜಿಗೆಹಳ್ಳ, ಆನೆ ಕ್ಯಾಂಪು, ಜೆ.ಬಿ.ಕುಮಾರ ಹಾಗೂ 22 ಜನ ಪರಿಶಿಷ್ಟ ಪಂಗಡದವರಿಗೆ, ಆಯಿರಸುಳಿ ರಾಮು ಪಿ.ಎಸ್. ಹಾಗೂ 46 ಜನ ಪರಿಶಿಷ್ಟ ಪಂಗಡದವರಿಗೆ, ಜಂಗಲ್‍ಹಾಡಿ ಪಿ.ಸಿ.ಮಾದ ಮತ್ತು 32 ಜನ ಪರಿಶಿಷ್ಟ ಪಂಗಡದವರಿಗೆ, ಮಜ್ಜಿಗೆ ಹಳ್ಳ ಫಾರ್ಮ್ ಪಿ.ಎಂ.ಸುಬ್ಬಣ್ಣ ಹಾಗೂ 63 ಜನ ಪರಿಶಿಷ್ಟ ಪಂಗಡದವರಿಗೆ, ಕಾರೆಕಂಡಿ ಹಾಡಿಯಲ್ಲಿ ಪಾಪಣ್ಣ ಪಿ.ಎಸ್. ಹಾಗೂ 51 ಜನ ಪರಿಶಿಷ್ಟ ಪಂಗಡದವರಿಗೆ, ಸಮುದಾಯ ಹಕ್ಕು ಕಾಯ್ದೆಯಡಿ ಕಿರು ಅರಣ್ಯ ಸಂಗ್ರಹಕ್ಕಾಗಿ ಅನುಮೋದನೆ ದೊರೆತಿದೆ. 2012 ರಲ್ಲಿ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ 45 ಸಮುದಾಯ ಸಂಪನ್ಮೂಲ ಅರ್ಜಿಗಳನ್ನು ಒಂದಕ್ಕಿಂತ ಹೆಚ್ಚು ಸಾಕ್ಷಿ ಕೋರಿ ಅನುಮೋದಿಸಲಾಗಿದ್ದು, ಈ ಪೈಕಿ ಮರು ಸರ್ವೆ ನಡೆಸಿ ಇಲ್ಲಿಯವರೆಗೆ ಮಡಿಕೇರಿ ತಾಲ್ಲೂಕಿನ 8 ಮತ್ತು ವಿರಾಜಪೇಟೆ ತಾಲ್ಲೂಕಿನ 8 ಒಟ್ಟು 16 ಸಮುದಾಯ ಸಂಪನ್ಮೂಲ ಅರ್ಜಿಗಳಿಗೆ ‘ಕಿರು ಅರಣ್ಯ ಸಂಗ್ರಹಕ್ಕಾಗಿ ಹಕ್ಕು ಪತ್ರ’ ವಿತರಿಸಲಾಗಿದೆ. 29 ಅರ್ಜಿಗಳು ಹಕ್ಕುಪತ್ರ ವಿತರಿಸಲು ಬಾಕಿ ಇದ್ದು, 8 ಅರ್ಜಿಗಳು ಮರು ಸರ್ವೆ ನಡೆಸಿ ಹಕ್ಕುಪತ್ರ ಸಹಿಗೆ ಸಲ್ಲಿಸಬೇಕಿದೆ. ಉಳಿದಂತೆ 21 ಅರ್ಜಿಗಳು ಬಾಕಿ ಇವೆ. ಮರು ಪರಿಶೀಲನೆಗಾಗಿ ಬಾಕಿ ಇರುವ ಅರ್ಜಿಗಳು ನಾಲ್ಕೇರಿ ಗ್ರಾ.ಪಂ.ವ್ಯಾಪ್ತಿಯ ನಾಗರಹೊಳೆ ವ್ಯಾಪ್ತಿಯ ತುಂಡುಮುಂಡಗೆ ಕೊಲ್ಲಿ, ನಿಟ್ಟೂರು ಗ್ರಾ.ಪಂ. ವ್ಯಾಪ್ತಿಯ ತಟ್ಟೆಕೆರೆ, ಕುಟ್ಟ ಗ್ರಾ.ಪಂ. ವ್ಯಾಪ್ತಿಯ ದೇವರಕಾಡು, ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಅವರೆಗುಂದ ಈ ಹಾಡಿಗಳಲ್ಲಿ ಮರು ಪರಿಶೀಲನೆಗೆ ಬಾಕಿ ಇದ್ದು, ಕಾನೂನು ರೀತಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆಯಡಿ ಕೊಡಗು ಜಿಲ್ಲೆಯಲ್ಲಿ ಸ್ವೀಕೃತವಾದ ಅರ್ಜಿಗಳ ವಿವರ ಇಂತಿದೆ. ಜಿಲ್ಲೆಯಲ್ಲಿ ಇದುವರೆಗೆ ಪರಿಶಿಷ್ಟ ಪಂಗಡದವರು 2847 ಅರ್ಜಿಗಳನ್ನು ಸಲ್ಲಿಸಿದ್ದು, ಇತರೆ 1373 ಜನರು ಅರ್ಜಿ ಸಲ್ಲಿಸಿದ್ದಾರೆ. ಹಾಗೂ 57 ಮಂದಿ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದು, ಒಟ್ಟು 4277 ಅರ್ಜಿಗಳು ಸಲ್ಲಿಕೆಯಾಗಿದೆ. ಇದರಲ್ಲಿ ಪರಿಶಿಷ್ಟ ಪಂಗಡದ 1840 ಅರ್ಜಿಗಳಿಗೆ ಅನುಮೋದನೆಯಾಗಿದೆ. ಇತರೆ ಸಮಾಜದಲ್ಲಿ 527 ಅರ್ಜಿಗಳು ಅನುಮೋದನೆಯಾಗಿದೆ. ಹಾಗೆಯೇ ಸಿಎಫ್‍ಆರ್ ನಡಿ 45 ಅರ್ಜಿಗಳು ಅನುಮೋದನೆಯಾಗಿದ್ದು, ಒಟ್ಟು 2412 ಅರ್ಜಿಗಳು ಅನುಮೋದನೆಯಾಗಿದೆ. ಉಳಿದಂತೆ 1865 ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿವೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ನಾಗರಹೊಳೆ ಹುಲಿ ಯೋಜನಾ ವಿಭಾಗದ ನಿರ್ದೇಶಕರಾದ ಸೀಮಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅನನ್ಯ ಕುಮಾರ್, ಲಕ್ಷ್ಮೀಕಾಂತ್, ಭೂದಾಖಲೆಗಳ ಉಪ ನಿರ್ದೇಶಕರಾದ ನಾರಾಯಣ ಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.