Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಿ : ಪ್ರೊ. ಎಂ.ಸುರೇಶ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಿ : ಪ್ರೊ. ಎಂ.ಸುರೇಶ್ ಸಲಹೆ*

ಮೇ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಪ್ರೊ. ಎಂ.ಸುರೇಶ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಇತ್ತೀಚೆಗೆ ಉದ್ಯೋಗದಲ್ಲಿ ಹಿನ್ನಡೆ ಉಂಟಾಗುತ್ತಿದೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಬಿ.ಅಯ್ಯಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸ್ಪರ್ಧಾ ಮನೋಭಾವ ಕಡಿಮೆಯಾಗುತ್ತಿದ್ದು, ಅವಕಾಶಗಳು ಹೆಚ್ಚಿವೆ ಅವುಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಮನರಂಜನೆ ಬೇಕು ಆದರೆ ಹೆಚ್ಚಿನ ಗಮನ ಭವಿಷ್ಯದ ಬಗ್ಗೆ ಇರಬೇಕು ಎಂದು ಹೇಳಿದರು. ಈ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಲ್ಲಿ ಉನ್ನತ ಹುದ್ದೆಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ಇದೇ ಸಂದರ್ಭ ಕೊಡಗಿನ ಸಾಧಕರನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್ ಬಿ.ರಾಘವ, ಯಶಸ್ಸನ್ನು ಸಾಧಿಸಲು ಶಿಸ್ತು ಮತ್ತು ಶ್ರಮವಿರಬೇಕು. ಶಿಕ್ಷಣಕ್ಕೆ ಆದ್ಯತೆ ನೀಡಿದವರು ಯಾವಾಗಲು ಯಶಸ್ಸನ್ನು ಗಳಿಸುತ್ತಾರೆ. ಶಿಕ್ಷಣ ಎಂಬುದು ವ್ಯಕ್ತಿ, ವ್ಯಕ್ತಿತ್ವ, ಸಮಾಜ ದೇಶವನ್ನು ಪರಿವರ್ತನೆ ಮಾಡುವ ಅಸ್ತ್ರವಾಗಿದೆ. ಆದ್ದರಿಂದ ಶಿಕ್ಷಣಕ್ಕೆ ಒತ್ತು ನೀಡಬೇಕು. ಶಿಕ್ಷಣ, ದುಡಿದು ತಿನ್ನುವ ಅನ್ನ, ಭಕ್ತಿ ಪೂರ್ವಕ ಪ್ರಾರ್ಥನೆ ಮತ್ತು ಪ್ರಾಮಾಣಿಕವಾಗಿ ದುಡಿದ ಹಣ ಇವು ಒಂದಲ್ಲ ಒಂದು ದಿನ ಭವಿಷ್ಯಕ್ಕೆ ಆಧಾರ ಸ್ತಂಭಗಳಾಗುತ್ತವೆ. ಎಲ್ಲಿ ಹುಟ್ಟುತ್ತೀರಿ ಎಂಬುದು ಮುಖ್ಯ ಅಲ್ಲ, ಎಲ್ಲಿ ಮುಟ್ಟುತ್ತೀರಿ ಎಂಬುದು ಮುಖ್ಯ ಎಂದರು. ಪೋಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಜಯಂತಿ ರೈ ಮಾತನಾಡಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಜವಾಬ್ದಾರಿ ಇದೆ, ತಂದೆ-ತಾಯಿಯರ ಕನಸಿದೆ. ಸಾಧನೆಯ ಹಾದಿಯಲ್ಲಿ ಸಾಗಿ ಸಾಧಕರಾಗಿ ನಿಲ್ಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಐಕ್ಯೂಎಕ್ಯೂ ಸಂಚಾಲಕ ಪ್ರೊ.ನಾಗರಾಜ ಕೆ.ಪಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಮಹೇಂದ್ರ, ಅಲಿನ್ ಜೇಷ್ಮಾ, ಮೋನಿಶ್ ಎನ್‍ಸಿಸಿ ನಾಯಕ ಗುಣಶೇಖರ್, ಬಿ.ಬಿ.ಕೃತಿ, ಎನ್‍ಎಸ್‍ಎಸ್ ನಾಯಕರಾದ ಟಿ.ವಿ.ವರ್ಷ, ಎಂ.ಮನೋಜ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ.ಶ್ರೀಧರ ಹೆಗಡೆ ಸ್ವಾಗತಿಸಿದರು. ವಿದ್ಯಾರ್ಥಿ ವರ್ಷ ನಿರೂಪಿಸಿದರು. ವಾಣಿಜ್ಯಶಾಸ್ತ್ರದ ಮುಖ್ಯಸ್ಥರಾದ ಡಾ. ಶೈಲಶ್ರೀ ಅವರು ವಾರ್ಷಿಕ ವರದಿಯನ್ನು ವಾಚಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಕ್ರಿಯೇಟಿವ್ ಖಲೀಲ್, ವಿಶ್ವವಿದ್ಯಾನಿಲಯ ಪ್ರತಿನಿಧಿಸಿದ ಕ್ರೀಡಾಪಟು, ಎನ್‍ಸಿಸಿ ಕೆಡೆಟ್, ಎನ್‍ಎಸ್‍ಎಸ್ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.