Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*25ನೇ ದಿನಕ್ಕೆ ಕಾಲಿರಿಸಿದ ನಿವೇಶನ ರಹಿತರ ಅಹೋರಾತ್ರಿ ಧರಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*25ನೇ ದಿನಕ್ಕೆ ಕಾಲಿರಿಸಿದ ನಿವೇಶನ ರಹಿತರ ಅಹೋರಾತ್ರಿ ಧರಣಿ*

ಮೇ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 NEWS DESK : ಅಮ್ಮತ್ತಿ ಮತ್ತು ಕಾರ್ಮಾಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಿಶಿಷ್ಟರು, ಬಡವರು, ಹಿಂದುಳಿದವರು ಹಾಗೂ ಕಾರ್ಮಿಕರು ನಿವೇಶನದ ಬೇಡಿಕೆಯನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 25ನೇ ದಿನಕ್ಕೆ ಕಾಲಿಟ್ಟಿದೆ. ಅಮ್ಮತ್ತಿ ನಾಡ ಕಚೇರಿ ಬಳಿ ಧರಣಿ ನಡೆಸುತ್ತಿರುವವರನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂಎಲ್ ಪಕ್ಷದ ರಾಜ್ಯ ಸಂಯೋಜಕ ಡಿ.ಎಸ್.ನಿರ್ವಾಣಪ್ಪ ನಿವೇಶನ ರಹಿತ ಬಡ ಕೂಲಿ ಕಾರ್ಮಿಕರು ದಬ್ಬಾಳಿಕೆಗೆ ಒಳಗಾಗುತ್ತಿದ್ದಾರೆ, ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಆಡಳಿತ ವ್ಯವಸ್ಥೆ ಭೂ ಮಾಲೀಕರ ಪರವಾಗಿ ಭೂ ಸುಧಾರಣೆಗಳನ್ನು ಮಾಡುತ್ತಿದ್ದಾರೆ. ಬಡವರ ಪರವಾದ ಜವಾಬ್ದಾರಿಗಳನ್ನು ಮರೆತ್ತಿದ್ದಾರೆ. ಬಡವರು ಬೀದಿ ಪಾಲಾಗಲು ಮತ್ತು ಬಡವರಾಗಿಯೇ ಉಳಿಯಲು ಅಧಿಕಾರಿಗಳೇ ನೇರ ಕಾರಣವೆಂದು ಆರೋಪಿಸಿದರು. ಬಡವರಿಗೆ ಹಾಗೂ ಶ್ರಮಿಕ ವರ್ಗಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಬಡವರ ಧರಣಿ ಸತ್ಯಾಗ್ರಹವನ್ನು ನಿರ್ಲಕ್ಷಿಸದೆ ನಿವೇಶನ ಹಂಚಿಕೆಗೆ ಮುಂದಾಗಬೇಕು, ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಸಿಪಿಐಎಂಎಲ್ ನ ರಾಜ್ಯ ಕಾರ್ಯದರ್ಶಿ ಪ್ರಕಾಶ್ ಮಾತನಾಡಿ, ಯಾವುದೇ ಸರ್ಕಾರಗಳು ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ, ಹೋರಾಟಗಳ ಮೂಲಕವೇ ಹಕ್ಕುಗಳನ್ನು ಪಡೆಯಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ಮಾತನಾಡಿ ನಿವೇಶನ ರಹಿತ ಬಡ ಕೂಲಿ ಕಾರ್ಮಿಕರ ಸ್ಥಿತಿಗತಿ ತೀರಾ ಶೋಚನೀಯವಾಗಿದೆ. ನಿವೇಶನ ರಹಿತರ ಹೋರಾಟಗಳಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ, ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ನಾಡಕಛೇರಿಗೆ ಬೀಗ ಜಡಿದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು, ಅಲ್ಲದೆ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರ ನಿವೇಶನ ರಹಿತ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಬಡವರಿಗೆ ಸಾಂವಿಧಾನಿಕ ಹಕ್ಕುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಅಮ್ಮತ್ತಿ ಹೋರಾಟ ಸಮಿತಿಯ ಅಧ್ಯಕ ಪಾಪಣ್ಣ, ಕಾರ್ಯದರ್ಶಿ ಹೊನ್ನಪ್ಪ, ಉಸ್ತುವಾರಿ ಮಾದೇಶ್, ಕಾರ್ಮಿಕ ಸಂಘದ ಜಿಲ್ಲಾ ಪದಾಧಿಕಾರಿ ಕಿರಣ್ ಜಗದೀಶ್, ಸಾಮಾಜಿಕ ಹೋರಾಟಗಾರ ಎಂ.ರಂಜಿತ್ ಮೌರ್ಯ, ಪೆಗ್ಗೊಲಿ ಹೋರಾಟ ಸಮಿತಿಯ ಸದಸ್ಯರಾದ ಕುಮಾರಿ, ಸುಜಾತ, ನಿವೇಶನ ರಹಿತ ಕುಟುಂಬಗಳ ಸದಸ್ಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.