Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಕರ್ನಾಟಕ»ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ
ಕರ್ನಾಟಕ

ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ

ಮೇ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಲಂಡನ್ ಮೇ 21 NEWS DESK : ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು. 1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು. ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಸಿಎಂ ಸಿದ್ದರಾಮಯ್ಯ ಅಭಿನಂದನೆ ::  ಇನ್ನೂ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ‘ಹೃದಯ ದೀಪ’ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.