Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ*

ಮೇ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 22  NEWS DESK : ಕೊಡವ ಸಾಹಿತ್ಯ ರಚನೆಕಾರ, ಸಂಗೀತ ನಿರ್ದೇಶಕ, ಹಾಡುಗಾರ, ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜ ಅಪ್ಪಯ್ಯ ಅವರನ್ನು ಕೊಡಗು ಕಲಾವಿದರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಮೈಸೂರು ಕೊಡವ ಸಮಾಜದಲ್ಲಿ ನಡೆದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಕಲಾವಿದರ ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಕಲಾವಿದರ ಕಲಾ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಚೆಕ್ಕೆರ ತ್ಯಾಗರಾಜ ಅವರ ಕಲಾ ಸೇವೆ ಅಪಾರವಾಗಿದ್ದು, ಇತರರಿಗೆ ಮಾದರಿಯಾಗಿದೆ ಎಂದರು. ಸಂಘದ ವತಿಯಿಂದ ಮೊದಲ ಬಾರಿಗೆ ಚೆಕ್ಕೆರ ತ್ಯಾಗರಾಜ ಅವರನ್ನು ಗುರುತಿಸಿ ಸನ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮ ನಿರಂತರವಾಗಿ ನಡೆಯಲಿದ್ದು, ಇದಕ್ಕೆ ಸರ್ವ ಕಲಾಭಿಮಾನಿಗಳು ಸಹಕರಿಸಬೇಕೆಂದು ಮನವಿ ಮಾಡಿದರು. ಹಿರಿಯ ಕಲಾವಿದ ಹಾಗೂ ಆಯೋಜಕ ನೆರವಂಡ ಉಮೇಶ್ ಅವರು ಮಾತನಾಡಿ ತ್ಯಾಗರಾಜ ಅವರಂತೆ ಅವರ ತಂದೆ ಅಪ್ಪಯ್ಯ ಅವರು ಕೂಡ ಕಲಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನೇ ನೀಡಿದ್ದಾರೆ. ಕೊಡಗಿನಿಂದ ಮದ್ರಾಸ್ ವರೆಗೆ ಪಯಣ ಬೆಳೆಸಿ ಕಲಾ ಸೇವೆ ಮಾಡಿದ್ದಾರೆ ಎಂದು ಬಣ್ಣಿಸಿದರು. ಚೆಕ್ಕೆರ ತ್ಯಾಗರಾಜ ಅವರು ಸಂಗೀತವನ್ನೇ ಉಸಿರಾಗಿಸಿಕೊಂಡಿದ್ದು, 18 ವರ್ಷಗಳ ಭಾರತೀಯ ಸೇನಾ ಸೇವೆಯ ನಂತರ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಯಶಸ್ವೀ ಕಲಾವಿದರೆನಿಸಿಕೊಂಡಿದ್ದಾರೆ. ಸೇನೆ ಮತ್ತು ಕಲಾ ಸೇವೆಯಲ್ಲಿ ತೊಡಗಿಸಿಕೊಂಡ ತ್ಯಾಗರಾಜ ಅವರನ್ನು ಸನ್ಮಾನಿಸುವುದೇ ಹೆಮ್ಮೆಯ ವಿಚಾರವೆಂದರು. ಬೆಂಗಳೂರಿನ ಉದ್ಯಮಿ ಪೊನ್ನಚೆಟ್ಟಿರ ರಮೇಶ್ ಮಾತನಾಡಿ ಕಲಾವಿದರ ಸಂಘದ ಸದಸ್ಯತ್ವವನ್ನು ಹೆಚ್ಚಿಸಬೇಕು, ಈ ರೀತಿಯ ಅರ್ಥಪೂರ್ಣ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಇದೇ ಜೂನ್ ತಿಂಗಳಿನಲ್ಲಿ ಬೆಂಗಳೂರು ಕೊಡವ ಸಮಾಜದಲ್ಲಿ ಕಲಾ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸರ್ವರು ಕೈ ಜೋಡಿಸುವಂತೆ ಕೋರಿದರು.
ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ವಿಠಲ್ ನಂಜಪ್ಪ ಅವರು ಕಲಾವಿದ ತ್ಯಾಗರಾಜ ಅವರ ಸಂಗೀತ ಕ್ಷೇತ್ರದ ಸಾಧನೆಯ ಬಗ್ಗೆ ವಿವರಿಸಿ, ತ್ಯಾಗರಾಜರ ಕುರಿತು ಸಾಕ್ಷ್ಯಚಿತ್ರ ತಯಾರಿಸಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು. ಸೃಷ್ಟಿ ಕೊಡವ ರಂಗದ ನಿರ್ದೇಶಕಿ ಅಡ್ಡಂಡ ಸಿ.ಅನಿತಾ ಕಾರ್ಯಪ್ಪ ಅವರು ಮಾತನಾಡಿ ಚೆಕ್ಕೆರ ತ್ಯಾಗರಾಜರ ಸಂಗೀತ ಪ್ರೀತಿಯನ್ನು ಕೊಂಡಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತ್ಯಾಗರಾಜ ಅವರು ಕೊಡಗು ಕಲಾವಿದರ ಸಂಘ ಎಲೆಮರೆಯ ಕಾಯಿಗಳನ್ನು ಗುರುತಿಸಿ ಸಮಾಜಕ್ಕೆ ಪರಿಚಯ ಮಾಡುವ ಮತ್ತು ಸನ್ಮಾನಿಸುವ ಮಹಾಕಾರ್ಯ ಮಾಡುತ್ತಿದೆ. ಮಂದ್ ಲ್ ತಕ್ಕಾರ ಕಿಂಜಿ ಸಂದ್ ಲ್ ತಕ್ಕಾರಕ್ ಬೆಲೆ ಜಾಸ್ತಿ, ನನ್ನನ್ನು ಗುರುತಿಸಿ ಮೈಸೂರಿಗೆ ಬಂದು ಸನ್ಮಾನಿಸಿ ಗೌರವಿಸಿರುವುದರಿಂದ ಹೃದಯ ತುಂಬಿ ಬಂದಿದೆ ಎಂದು ಭಾವುಕರಾದರು. ಮೈಸೂರು ಕೊಡವ ಸಮಾಜದ ಉಪಾಧ್ಯಕ್ಷ ಮಾಚಿಮಾಡ ನಾಣಯ್ಯ ಹಾಗೂ ಕಾರ್ಯದರ್ಶಿ ಕೇಟೋಳಿರ ರವಿ ಮಾತನಾಡಿದರು.
ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಕಾರ್ಯದರ್ಶಿ ಈರಮಂಡ ಹರಿಣಿ ವಿಜಯ್, ಕಲಾವಿದರಾದ ನೆರವಂಡ ಉಮೇಶ್, ಅಲ್ಲಾರಂಡ ವಿಠ್ಠಲ್ ನಂಜಪ್ಪ, ಕಾಡ್ಯಾಮಡ ಸುಮನ್, ತಾತಂಡ ಪ್ರಭಾ ನಾಣಯ್ಯ, ಚೆರುವಾಳಂಡ ಸುಜಲ ನಾಣಯ್ಯ, ಕಾಳಿಮಾಡ ದಿನೇಶ್ ನಾಚಪ್ಪ, ಪೊಡಮಾಡ ಭವಾನಿ ನಾಣಯ್ಯ, ಈರಮಂಡ ವಿಜಯ್ ಮತ್ತಿತರರು ಚೆಕ್ಕೆರ ತ್ಯಾಗರಾಜ ಅವರನ್ನು ಸನ್ಮಾನಿಸಿ ಗೌರವಿಸಿದರು. ಪೊಡಮಾಡ ಭವಾನಿ ನಾಣಯ್ಯ ಅವರು ಒಡಿಕತ್ತಿ, ಕಾಳಿಮಾಡ ದಿನೇಶ್ ಹಾಗೂ ಅಲ್ಲಾರಂಡ ವಿಠಲ್ ನಂಜಪ್ಪ ಅವರು ತ್ಯಾಗರಾಜರ ಭಾವಚಿತ್ರವನ್ನು ನೀಡಿ ಅಭಿಮಾನ ಮೆರೆದರು. ಹಿರಿಯ ಕಲಾವಿದ ತ್ಯಾಗರಾಜ ಅವರು ತಮ್ಮೊಂದಿಗೆ ತಂದಿದ್ದ ತಮ್ಮ ಒಡನಾಡಿ ಹಾರ್ಮೋನಿಯಂನ್ನು ನುಡಿಸಿ ಅಂಬಿಕಾ… ಅಂಬಿಕಾ… ಹಾಡನ್ನು ಹಾಡಿ ಸಂಗೀತದ ಮೇಲಿನ ತಮ್ಮ ಅಭಿರುಚಿಯನ್ನು ತೋರ್ಪಡಿಸಿದರು. ಕಲಾವಿದರಾದ ಬಯವಂಡ ಬಿನು ಸಚಿನ್, ಪೊಡಮಾಡ ಭವಾನಿ ನಾಣಯ್ಯ, ಮಾಳೇಟಿರ ಅಜಿತ್, ಸೋಮೆಯಂಡ ಬೋಸ್ ಸೋಮಯ್ಯ ಮತ್ತಿತರರು ಹಾಡುಗಳನ್ನು ಹಾಡಿ ರಂಜಿಸಿದರು. ಕಲಾವಿದರಾದ ಖ್ಯಾತ ಯೂಟ್ಯೂಬರ್ ಕಳ್ಳಿಚಂಡ ಡಿಂಪಲ್ ನಾಚಪ್ಪ, ಮಲ್ಲಮಾಡ ಶ್ಯಾಮಲ, ಕುಪ್ಪಣಮಾಡ ಜಾನ್ಸಿ, ಆಚಿಯಡ ಗಗನ್ ಗಣಪತಿ, ಬಿದ್ದಂಡ ಉತ್ತಮ್, ಬಲ್ಯಂಡ ವರ್ಷ (ವಿಜಯ್) ಸೇರಿದಂತೆ ಕೊಡಗು ಹಾಗೂ ಮೈಸೂರಿನ ಕಲಾವಿದರು, ಕಲಾಭಿಮಾನಿಗಳು ಉಪಸ್ಥಿತರಿದ್ದರು. ಚೆರುವಾಳಂಡ ಸುಜಲ ನಾಣಯ್ಯ ಪ್ರಾರ್ಥಿಸಿ, ತಾತಂಡ ಪ್ರಭಾ ನಾಣಯ್ಯ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಈರಮಂಡ ಹರಿಣಿ ವಿಜಯ್ ನಿರೂಪಿಸಿ, ಈರಮಂಡ ವಿಜಯ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.