Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡೇ ಕೇರ್ ಕಿಮೋಥೇರಪಿ ಕೇಂದ್ರ ಉದ್ಘಾಟನೆ : ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಡೇ ಕೇರ್ ಕಿಮೋಥೇರಪಿ ಕೇಂದ್ರ ಉದ್ಘಾಟನೆ : ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೇ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಮೇ 24 NEWS DESK : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದರು. ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ ಎಂದು ತಿಳಿಸಿದರು. 240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ.  ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ ಎಂದು ಹೇಳಿದರು. ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ. ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು.
ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.  ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು. ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸುವಂತೆ ಸಲಹೆ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.