Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾವೇರಿ ಪದವಿ ಕಾಲೇಜಿನ ವಾರ್ಷಿಕೋತ್ಸವ : ನಮ್ಮೊಳಗಿನ ಶಕ್ತಿ ಹಾಗೂ ಚೈತನ್ಯದ ಅರಿವಾದಾಗ ಯಶಸ್ಸು ಶತಸಿದ್ಧ : ಪ್ರೊ.ಪಟ್ಟಡ ಪೂವಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾವೇರಿ ಪದವಿ ಕಾಲೇಜಿನ ವಾರ್ಷಿಕೋತ್ಸವ : ನಮ್ಮೊಳಗಿನ ಶಕ್ತಿ ಹಾಗೂ ಚೈತನ್ಯದ ಅರಿವಾದಾಗ ಯಶಸ್ಸು ಶತಸಿದ್ಧ : ಪ್ರೊ.ಪಟ್ಟಡ ಪೂವಣ್ಣ

ಮೇ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 27 NEWS DESK : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅನೇಕ ಅವಕಾಶಗಳು ದೊರಕುತ್ತದೆ. ಅದನ್ನು ಸದುಪಯೋಗಪಡಿಸಿಕೊಳ್ಳುವ ಗುಣ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ.ಪಟ್ಟಡ ಪೂವಣ್ಣ ಸಲಹೆ ನೀಡಿದರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಕಾಲೇಜಿನ ಕೌಸ್ತುಭ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಸೃಷ್ಟಿಕರ್ತನು ಎಲ್ಲಾ ವ್ಯಕ್ತಿಗಳಿಗೂ ಅಘೋಚರ ಶಕ್ತಿ ನೀಡಿರುತ್ತಾನೆ. ಅದನ್ನು ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಇದರೊಂದಿಗೆ ಜೀವನದಲ್ಲಿ ಋಣಾತ್ಮಕ ವಿಚಾರಗಳನ್ನು ತೆಗೆದು ಹಾಕಿದಾಗ ಮೇಲೇರಲು ಸಾಧ್ಯ. ಸಿಕ್ಕ ಅವಕಾಶವನ್ನು ಸಾಧ್ಯ ಪಡಿಸಿಕೊಳ್ಳುವ ಕೆಲಸ ವಿದ್ಯಾರ್ಥಿ ಜೀವನದಲ್ಲಿ ಮಾಡಬೇಕೆಂದರು. ಜೀವನದ ಮೌಲ್ಯಗಳೊಂದಿಗೆ ಮುಂದಿನ ಭವಿಷ್ಯ ನಿರ್ಧಾರದ ಗುರಿಹೊಂದಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು. ಭೂ ದಾಖಲೆಗಳ ಸಹಾಯಕ ನಿರ್ದೇಶಕ ಬಾನಂಗಡ ಅರುಣ ಮಾತನಾಡಿ ವಿದ್ಯಾರ್ಥಿ ಜೀವನದಿಂದಲೇ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಲು ಯುವಜನರು ಮುಂದಾಗಬೇಕು. ಮದ್ಯಪಾನ, ಮಾದಕ ದ್ರವ್ಯಗಳಿಗೆ ದಾಸರಾಗದೆ ನಮ್ಮ ಸುತ್ತಮುತ್ತಲಿರುವ ಅಂತಹ ವ್ಯಕ್ತಿಗಳನ್ನು ವ್ಯಸನ ಮುಕ್ತರನ್ನಾಗಿಸುವ ಪ್ರಯತ್ತ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ಗೀಳಿಗೆ ಬೀಳದೆ ಜ್ಞಾನಗಳಿಕೆಗೆ ಹೆಚ್ಚಿನ ಒತ್ತನ್ನು ನೀಡಿ ಉತ್ತಮ ವ್ಯಕ್ತಿತ್ವದೊಂದಿಗೆ ಕುಟುಂಬದ ಆಧಾರ ಸ್ಥಂಭವಾಗಿ ಸಮಾಜದಲ್ಲಿ ಧೀಮಂತ ವ್ಯಕ್ತಿಗಳಾಗಿ ಬಾಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾವೇರಿ ವಿದ್ಯಾ ಸಂಸ್ಥೆಯ ಅದ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಆಡಳಿತ ಮಂಡಳಿಯು ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಉನ್ನತ ಮಟ್ಟದ ಸಾಧನೆ ಮಾಡಬೇಕು. ಧೀಮಂತ ವ್ಯಕ್ತಿಗಳನ್ನು ಜೀವನಕ್ಕೆ ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಪ್ರಿಯ ಮುದ್ದಪ್ಪ, ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ ಮುಖ್ಯಸ್ಥರಾದ ಹೆಚ್.ವಿ.ನಾಗರಾಜು, ವಿದ್ಯಾರ್ಥಿ ನಾಯಕರುಗಳು, ಕಾವೇರಿ ಶಿಕ್ಷಣ ಸಂಸ್ಥೆಯ ನಿರ್ದೇಶಕರುಗಳಾದ ಸಿ.ಡಿ. ಮಾದಪ್ಪ , ಎನ್.ಕೆ.ಮೊಣ್ಣಪ್ಪ, ವಾಣಿ, ಸುಭಾಸ್, ಅಚ್ಚಯ್ಯ, ಉಪಸ್ಯಾಸಕರಾದ ಡಾ.ವೀಣಾ, ಅಂಬಿಕಾ, ರಾಘವೇಂದ್ರ, ಸೋಮಣ್ಣ, ನಿರ್ಮಿತ, ಬೋಜಮ್ಮ, ಕಾವೇರಮ್ಮ ಗಾಯಿತ್ರಿ, ಅನುಪಮ, ಆಡಳಿತಾತ್ಮಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪೋಷಕರೂ ಹಾಜರಿದ್ದರು.  ನಂತರ ವಿದ್ಯಾರ್ಥಿಗಳಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡಾನ 2024 -25 ನೇ ಸಾಲಿನಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ವಾರ್ಷಿಕ ವರದಿಯನ್ನು ವಾಚಿಸಿದರು. ನಂತರ 2024 -25 ನೇ ಸಾಲಿನಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು .  ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.