Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ವಿಪತ್ತು ನಿರ್ವಹಣೆ ಸಮರ್ಥವಾಗಿ ನಿಭಾಯಿಸಲು ಡಾ.ಎನ್.ವಿ.ಪ್ರಸಾದ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ವಿಪತ್ತು ನಿರ್ವಹಣೆ ಸಮರ್ಥವಾಗಿ ನಿಭಾಯಿಸಲು ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 27, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 27 NEWS DESK : ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್‍ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು. ಮಳೆಯಿಂದ ಉಂಟಾಗುವ ಹಾನಿ ಸಂಬಂಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸ್‍ಆಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ವಾಯ್ಸ್ ರೆಕಾರ್ಡ್ ಸಹಿತ ಮಾಹಿತಿ ನೀಡಬಹುದಾಗಿದೆ ಎಂದರು. ವಿಪತ್ತು ನಿರ್ವಹಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ವಾಟ್ಸ್‍ಆಪ್ ಗ್ರೂಪ್ ಮಾಡಿರುವಂತೆ ತಾಲ್ಲೂಕು ಮಟ್ಟದಲ್ಲಿಯೂ ಸಹ ತಹಶೀಲ್ದಾರರ ನೇತೃತ್ವದಲ್ಲಿ ವಾಟ್ಸ್‍ಆಪ್ ಗುಂಪು ರಚಿಸಿಕೊಂಡು ತಾ.ಪಂ.ಇಒ, ಪಿಡಿಒ, ಗ್ರಾ.ಪಂ.ಕಾರ್ಯದರ್ಶಿಗಳು, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರ್‍ಗಳು, ಪೊಲೀಸ್, ಅಗ್ನಿಶಾಮಕ, ಗ್ರಾಮ ಸಹಾಯಕರು, ಗೃಹರಕ್ಷಕದಳ ಗುಂಪಿಗೆ ಸೇರಿಸಿಕೊಂಡು ವಿಪತ್ತು ನಿರ್ವಹಣೆಯನ್ನು ನಿರ್ವಹಿಸಬೇಕು ಎಂದು ಹೇಳಿದರು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರ ಜೊತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಹ ಸಮನ್ವಯ ಸಾಧಿಸಿ ವಿಪತ್ತು ನಿರ್ವಹಣೆ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಡಾ.ಎನ್.ವಿ.ಪ್ರಸಾದ್ ಸೂಚಿಸಿದರು. ಜಿಲ್ಲೆಯಲ್ಲಿ ಮುಂಗಾರು ಹಿನ್ನೆಲೆ ಬಿರುಗಾಳಿ ಹೆಚ್ಚಾಗಿದ್ದು, ಇದರಿಂದ ಮನೆ ಹಾಗೂ ವಿದ್ಯುತ್ ಕಂಬಕ್ಕೆ ಹೆಚ್ಚಿನ ಹಾನಿಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕು ಎಂದರು. ಲೋಕೋಪಯೋಗಿ, ಪಂಚಾಯತ್ ಮತ್ತಿತರ ಎಂಜಿನಿಯರ್ ಇಲಾಖೆಗಳು ರಸ್ತೆ ಹಾನಿ, ರಸ್ತೆಗೆ ಮರ ಬಿದ್ದಲ್ಲಿ ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಡಾ.ಎನ್.ವಿ.ಪ್ರಸಾದ್ ಹೇಳಿದರು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಈ ಬಾರಿ ಮುಂಗಾರು ಮುಂಚಿತವಾಗಿ ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು. ಕಾಳಜಿ ಕೇಂದ್ರದಲ್ಲಿ ಉತ್ತಮ ಆಹಾರ ನೀಡಬೇಕು. ಯಾವುದೇ ಕಾರಣಕ್ಕೂ ದೂರು ಬರದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರು ಜಿಲ್ಲಾಡಳಿತ ಬಳಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ 40 ಕೋಟಿ ರೂ. ಹಣವಿದೆ. ಜೊತೆಗೆ ತಹಶೀಲ್ದಾರರ ಬಳಿಯು ಸಹ ಹಣವಿದೆ ಎಂದು ಮಾಹಿತಿ ನೀಡಿದರು. ಈ ಬಾರಿ ಮೇ ತಿಂಗಳಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಬಿರುಗಾಳಿಯಿಂದ ಮನೆಗೆ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಾರಿ 23 ಮನೆಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದರು. ಅಗ್ನಿಶಾಮಕ ದಳ, ಪೊಲೀಸ್ ರಕ್ಷಣಾ ತಂಡ, ಗೃಹರಕ್ಷಕ ದಳ, ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದು, ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಈ ಹಿಂದೆ ವಿಕೋಪವಾದ ಸ್ಥಳಗಳ ಆಧಾರದ ಮೇಲೆ ಗುರುತಿಸಲಾಗಿದೆ. ಒಟ್ಟು 43 ಪ್ರವಾಹ ಪೀಡಿತ ಮತ್ತು 44 ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಹೋಬಳಿವಾರು ಒಟ್ಟು 20 ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಿಕೋಪಗಳು ಸಂಭವಿಸಿದಲ್ಲಿ ಸ್ಥಳೀಯ ಮಟ್ಟ ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಕುಟುಂಬಗಳಿಗೆ ಕೂಡಲೇ ಪರಿಹಾರ ವಿತರಿಸಬೇಕು. ಹಾಗೆಯೇ ಮನೆ ಹಾನಿ ಸಂಬಂಧ ಪರಿಹಾರ ವಿತರಿಸಬೇಕು ಎಂದು ಹೇಳಿದರು. ಶಾಲಾ ಕಾಲೇಜು ಕಟ್ಟಡಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಶಾಲಾ ಕೊಠಡಿ ದುರಸ್ತಿಗೆ ಪಂಚಾಯತ್ ರಾಜ್ ಎಂಜಿನಿಯರ್‍ಗೆ ವಹಿಸಲಾಗಿದೆ ಎಂದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ಕ್ಷೀರಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವಂತಾಗಬೇಕು. ಯಾವುದೇ ಕಾರಣಕ್ಕೂ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯಬಾರದು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ 7 ಮಕ್ಕಳನ್ನು ಪತ್ತೆಹಚ್ಚಿ ಶಾಲೆಗೆ ಸೇರ್ಪಡೆ ಮಾಡಲಾಗಿದೆ ಎಂದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಪ್ರಗತಿ ಹಾಗೂ ವಸತಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಕಂಟ್ರೋಲ್ ರೂಮ್ ಸಹಾಯವಾಣಿ ಕೇಂದ್ರ 24*7 ಕಾರ್ಯ ನಿರ್ವಹಿಸಲಿವೆ. ಹಾಗೆಯೇ ಸೆಸ್ಕ್, ಅರಣ್ಯ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ವಿಕೋಪ ಪೀಡಿತ ಪ್ರದೇಶಗಳಲ್ಲಿ ಲಭ್ಯವಿರಬೇಕಾದ ಔಷಧ, ಚಿಕಿತ್ಸಾ ಉಪಕರಣಗಳ ಕುರಿತಂತೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಮಳೆಗಾಲದಲ್ಲಿನ ಸಮಸ್ಯೆಆದ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಲಭ್ಯವಿರುವಂತೆ ಆರೋಗ್ಯ ಇಲಾಖೆಯಿಂದ ಕ್ರಮವಹಿಸಲಾಗಿದೆ. ಈ ಕಾಳಜಿ ಕೇಂದ್ರಗಳ ಉಸ್ತುವಾರಿಯನ್ನು ಆಯಾಯ ನೋಡಲ್ ಅಧಿಕಾರಿ ನಿರ್ವಹಿಸಲಿದ್ದಾರೆ ಎಂದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಭೂವಿಜ್ಞಾನಿಗಳು ಭೂಕುಸಿತ ಪೀಡಿತ ಪ್ರದೇಶಗಳ ಬಗ್ಗೆ ಅಧ್ಯಯನ ನಡೆಸುತ್ತಿರುತ್ತಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾಹಿತಿ ನೀಡಿ ಈ ಬಾರಿ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಗುರಿ ಇದೆ. ಬಿತ್ತನೆ ಬೀಜ ಜೂನ್ ಮೊದಲ ವಾರದಿಂದ ವಿತರಿಸಲಾಗುತ್ತದೆ ಎಂದರು. 88 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಸೆಪ್ಟೆಂಬರ್‍ವರೆಗೂ ರಸಗೊಬ್ಬರ ಪೂರೈಕೆಯಾಗಿದೆ. ಉಳಿದಂತೆ ರಸಗೊಬ್ಬರ ಪೂರೈಕೆಯಾಗಲಿದ್ದು,. ಡಿಎಪಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು. ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನಗರಾಭಿವೃದ್ಧಿ ಇಲಾಖೆಗಳು ಮುಂತಾದ ಸಂಬಂಧಪಟ್ಟ ಎಂಜಿನಿಯರಿಂಗ್ ಇಲಾಖೆಗಳು ಪ್ರವಾಹದ ಪರಿಸ್ಥಿತಿ ತಲೆದೋರದಂತೆ ತಮ್ಮ ವ್ಯಾಪ್ತಿಯ ಚರಂಡಿ, ನಾಲೆಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಕಂದಾಯ ಇಲಾಖೆಗೆ ಸಂಬಂದಿದಂತೆ ಮಾಹಿತಿ ನೀಡಿದರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ.ಇಒಗಳು, ಎಂಜಿನಿಯರ್‍ಗಳು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ…

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.