
ಮಡಿಕೇರಿ ಮೇ 28 NEWS DESK : ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳ ಸಂಶೋಧನ ಕೇಂದ್ರಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ 29 ರಿಂದ ಜೂನ್ 12 ರವರೆಗೆ ಹಮ್ಮಿಕೊಳ್ಳಲಾಗಿದೆ. ಮೇ 29 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ. ಮೇ 30 ರಂದು ಬೆಳಗ್ಗೆ 10 ಗಂಟೆಗೆ ಹುದಿಕೇರಿ ಮತ್ತು ನಾಪೋಕ್ಲು, ಮೇ 31 ರಂದು ಬೆಳಗ್ಗೆ 10 ಗಂಟೆಗೆ ಕೊಡ್ಲಿಪೇಟೆ ಮತ್ತು ಅಮ್ಮತ್ತಿ, ಜೂ. 2 ರಂದು ಬೆಳಗ್ಗೆ 10 ಗಂಟೆಗೆ ಭಾಗಮಂಡಲ ಮತ್ತು ಶ್ರೀಮಂಗಲ, ಜೂ. 3 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಮತ್ತು ಮಡಿಕೇರಿ, ಜೂ. 4 ರಂದು ಬೆಳಗ್ಗೆ 10 ಗಂಟೆಗೆ ಬಾಳೆಲೆ ಮತ್ತು ಸುಂಟಿಕೊಪ್ಪ, ಜೂನ್, 05 ರಂದು ಬೆಳಗ್ಗೆ 10 ಗಂಟೆಗೆ ಸಂಪಾಜೆ ಮತ್ತು ಶಾಂತಳ್ಳಿ, ಜೂನ್, 06 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆ ಮತ್ತು ಶನಿವಾರಸಂತೆ, ಜೂನ್, 07 ರಂದು ಬೆಳಗ್ಗೆ 10 ಗಂಟೆಗೆ ಮಾಲ್ದಾರೆ ಮತ್ತು ಕೂತಿ, ಜೂನ್, 09 ರಂದು ಬೆಳಗ್ಗೆ 10 ಗಂಟೆಗೆ ಅವರೆಸುಂದ ಮತ್ತು ತೋಳೂರುಶೆಟ್ಟಿ, ಜೂನ್, 10 ರಂದು ಬೆಳಗ್ಗೆ 10 ಗಂಟೆಗೆ ಚೆನ್ನಯ್ಯನಕೋಟೆ ಮತ್ತು ಚೌಡ್ಲು, ಜೂನ್, 11 ರಂದು ಬೆಳಗ್ಗೆ 10 ಗಂಟೆಗೆ ಗೂಡ್ಲೂರು ಮತ್ತು ಕೊಡಗರಹಳ್ಳಿ, ಜೂನ್, 12 ರಂದು ಬೆಳಗ್ಗೆ 10 ಗಂಟೆಗೆ ಹೆಬ್ಬಾಲೆ ಮತ್ತು ಅರೆಯೂರು. ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಇತರ ಸಂಶೋಧನ ಕೇಂದ್ರಗಳ ವಿಜ್ಞಾನಿಗಳು, ಇಲಾಖೆಯ ಅಧಿಕಾರಿಗಳು ರೈತರ ಕಡೆ ತೆರಳಿ, ಜಿಲ್ಲೆಯ ಎಲ್ಲಾ ರೈತರಿಗೆ ಹೋಬಳಿ ಹಾಗೂ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ. ಇಲ್ಲಿಯ ರೈತರನ್ನು ಒಗ್ಗೂಡಿಸಿ ನೂತನ ತಂತ್ರಜ್ಞಾನಗಳು, ಹೊಸ ತಳಿಗಳ ಮತ್ತು ಬೀಜಗಳ ನಿಖರವಾದ ಹವಾಮಾನ ಮಾಹಿತಿ ಮತ್ತು ಸಕರ್ಾರದ ನಾನಾ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚು ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಗುವುದು. ರೈತರು ನೀಡುವ ಪ್ರಕ್ರಿಯೆಗಳನ್ನು ಸಂಗ್ರಹಿಸಿ ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ. ಬೆಳೆ, ಮಣ್ಣು ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ತಜ್ಞರಿಂದ ಸಲಹೆಗಳನ್ನು ನೀಡಲಾಗುತ್ತದೆ. ಜೊತೆಗೆ ಸಕರ್ಾರದ ವಿವಿಧ ಯೋಜನೆಗಳ ಲಾಭ ಪಡೆಯುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಕೊಡಗು ಜಿಲ್ಲೆಯ ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಭೇಟಿ ನೀಡುವ ಬಗ್ಗೆ ಅಲ್ಲಿನ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಆಯಾಯ ಗ್ರಾಮಗಳಿಗೆ/ ಹೋಬಳಿಗೆ ಬಂದಾಗ ಈ ಕಾರ್ಯಕ್ರಮದಲ್ಲಿ ರೈತರು ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕಾರ್ಯಕ್ರಮದ ಲಾಭವನ್ನು ಪಡೆದು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬಹುದು ಎಂದು ಗೋಣಿಕೊಪ್ಪಲುವಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ.









