
ಮಡಿಕೇರಿ ಮೇ 28 NEWS DESK : ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ ಶಿಬಿರಕ್ಕೆ ದೋಣಿ ಮುಖಾಂತರ ನದಿ ದಾಟಿಸುವುದು ತುಂಬಾ ಕಷ್ಟಕರ ಹಾಗೂ ಅಪಾಯಕಾರಿಯಾಗಿರುತ್ತದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದುಬಾರೆ ಸಾಕಾನೆ ಶಿಬಿರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.










