Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಅವಧಿಗೂ ಮುನ್ನ ಅತಿಯಾದ ಮಳೆ : ಎನ್‌ಡಿಆರ್‌ಎಫ್ ನಿಯೋಜನೆ :  ಮೇ 29 ಮತ್ತು 30 ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕೊಡಗಿನಲ್ಲಿ ಅವಧಿಗೂ ಮುನ್ನ ಅತಿಯಾದ ಮಳೆ : ಎನ್‌ಡಿಆರ್‌ಎಫ್ ನಿಯೋಜನೆ :  ಮೇ 29 ಮತ್ತು 30 ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮೇ 28, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಮೇ 28 : ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನ ಮಳೆ ಅತಿಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ. 2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದ ಅನಾಹುತಗಳ ಕರಾಳ ದಿನಗಳು ಹಸಿರಾಗಿರುವಾಗಲೇ ಪ್ರಸ್ತುತ ವರ್ಷ ಅವಧಿಗೂ ಮುನ್ನ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ. ಈ ಬೆಳವಣಿಗೆಯಿಂದ ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಎನ್‌ಡಿಆರ್‌ಎಫ್ ತಂಡವನ್ನು ಅವಧಿಗೂ ಮೊದಲೇ ಜಿಲ್ಲೆಯಲ್ಲಿ ನಿಯೋಜಿಸಿದೆ.
ಎನ್‌ಡಿಆರ್‌ಎಫ್ ವೃತ್ತ ನಿರೀಕ್ಷಕ ಹರಿಶ್ಚಂದ್ರ ಪಾಂಡೆ ನೇತೃತ್ವದ 80 ಯೋಧರ ತಂಡ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಿದ್ದು, ಜನರ ರಕ್ಷಣೆಗೆ ಸನ್ನದ್ಧವಾಗಿದೆ. ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಬೀಡು ಬಿಟ್ಟಿರುವ ಯೋಧರು ಗಾಳಿ, ಮಳೆ, ಪ್ರವಾಹ, ಭೂಕುಸಿತದಂತಹ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹರಿಶ್ಚಂದ್ರ ಪಾಂಡೆ ಕೊಡಗಿನಲ್ಲಿ ಅವಧಿಗೂ ಮೊದಲೇ ಮಳೆ ಆರಂಭಗೊಂಡಿರುವುದರಿಂದ ಜೂನ್ ತಿಂಗಳಿಗೆ ಬದಲಾಗಿ ಮೇ ತಿಂಗಳಿನಲ್ಲೇ ಆಗಮಿಸಿದ್ದೇವೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ವಾಹನಗಳು ಮತ್ತು ಪರಿಕರಗಳೊಂದಿಗೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದರು. ಈ ಹಿಂದಿನ ವರ್ಷಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ ಪ್ರದೇಶಗಳಿಗೆ ಯೋಧರು ಭೇಟಿ ನೀಡಿ ಮುಂಜಾಗೃತಾ ಕ್ರಮಗಳ ಕುರಿತು ಅವಲೋಕಿಸಲಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ರೆಡ್ ಅಲರ್ಟ್ ಇರುವುದರಿಂದ ಯಾವುದೇ ರಕ್ಷಣಾ ಕಾರ್ಯಕ್ಕೆ ಸನ್ನದ್ಧರಾಗಿದ್ದೇವೆ ಎಂದರು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಕಂದಾಯ ಇಲಾಖೆ ಮತ್ತು ಗ್ರಾ.ಪಂ ಗಳು ಎನ್‌ಡಿಆರ್‌ಎಫ್ ಕಾರ್ಯಾಚರಣೆಗೆ ಸಹಕಾರ ನೀಡಲಿವೆ. *ಶಾಲೆಗಳಿಗೆ ರಜೆ* ಈ ನಡುವೆ ಜಿಲ್ಲೆಯಲ್ಲಿ ಇಂದು ಗಾಳಿ ಮಳೆಯ ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೇ 29 ಮತ್ತು 30 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. *ಮಳೆ ವಿವರ* ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 62.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 589.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.90 ಮಿ.ಮೀ ಮಳೆಯಾಗಿತ್ತು.  ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.83 ಮಿ.ಮೀ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 806.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 447.77 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 613.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು.  ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.27 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 562.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 333.15 ಮಿ.ಮೀ. ಮಳೆಯಾಗಿತ್ತು.  ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 121.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 524.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 251 ಮಿ.ಮೀ. ಮಳೆಯಾಗಿತ್ತು.  ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 440.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 351.50 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 82, ನಾಪೋಕ್ಲು 66.80, ಸಂಪಾಜೆ 11, ಭಾಗಮಂಡಲ 103.50, ವಿರಾಜಪೇಟೆ 33.60, ಅಮ್ಮತ್ತಿ 35, ಹುದಿಕೇರಿ 66, ಶ್ರೀಮಂಗಲ 61, ಪೊನ್ನಂಪೇಟೆ 24, ಬಾಳೆಲೆ 18.07, ಸೋಮವಾರಪೇಟೆ 124, ಶನಿವಾರಸಂತೆ 124, ಶಾಂತಳ್ಳಿ 175, ಕೊಡ್ಲಿಪೇಟೆ 62.80, ಕುಶಾಲನಗರ 26, ಸುಂಟಿಕೊಪ್ಪ 73 ಮಿ.ಮೀ.ಮಳೆಯಾಗಿದೆ. *ಹಾರಂಗಿ ಜಲಾಶಯದ ನೀರಿನ ಮಟ್ಟ* ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2840.55 ಅಡಿಗಳು. ಕಳೆದ ವರ್ಷ ಇದೇ ದಿನ 2824.12 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 40.40 ಮಿ.ಮೀ., ಇಂದಿನ ನೀರಿನ ಒಳಹರಿವು 3852 ಕ್ಯುಸೆಕ್, ಕಳೆದ ವರ್ಷ ಇದೇ ದಿನ 230 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.