
ಮಡಿಕೇರಿ ಮೇ 29 NEWS DESK : ಭಾಗಮಂಡಲ ಹೋಬಳಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಭೇಟಿ ನೀಡಿ ಪರಿಶೀಲಿಸಿದರು. ಬೆಂಗೂರು ಗ್ರಾಮದ ದೋಣಿಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ವೀಕ್ಷಿಸಿದರು. ನಂತರ ಪದಕಲ್ಲು ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಅವಲೋಕಿಸಿದರು. ಮಳೆಗಾಲದಲ್ಲಿ ಮುಂಜಾಗೃತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಬಾಲಕರ ಭವನ, ಭಾಗಮಂಡಲ ಐಟಿಐ ಕಾಲೇಜು ಹಾಗೂ ಕಾಶಿ ಮಠದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಹಾಜರಿದ್ದರು.











