
ಮಂಗಳೂರು ಮೇ 29 NEWS DESK : ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿಯ ಪ್ರಸ್ತುತ ಪರಿಸ್ಥಿತಿಯ ಕುರಿತು ಗಂಭೀರ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ಯಾವುದೇ ಕಾರಣಕ್ಕೂ ದ್ವೇಷ ಇರಬಾರದು ಎಂಬ ಬಗ್ಗೆಯೂ ಬಿ.ಕೆ ಹರಿಪ್ರಸಾದ್ ಅವರ ಜೊತೆ ಚರ್ಚಿಸಿದೆ ಎಂದು ಹೇಳಿದರು. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು. ಈ ಸಂದರ್ಭ ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜೊತೆಗಿದ್ದರು.









