
ಮಡಿಕೇರಿ ಮೇ 29 NEWS DESK : ಕರ್ನಾಟಕ ಮಾನವ ಬಂಧತ್ವ ವೇದಿಕೆ, ಮಹಿಳಾ ಬಂಧುತ್ವ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಮೇ 31 ರಂದು “ಸಮಕಾಲೀನ ಬಿಕ್ಕಟ್ಟುಗಳು ಮತ್ತು ಸವಾಲುಗಳು” ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ಪತ್ರಿಕಾ ಪ್ರಟಕಟಣೆ ನೀಡಿರುವ ಮಾನವ ಬಂಧುತ್ವ ವೇದಿಕೆ ಗೌರವ ಸಂಚಾಲಕ ರಮಾನಾಥ್ ಬೇಕಲ್, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸಮೀಪದ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮೊದಲ ಗೋಷ್ಠಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಡಾ.ಎ.ಬಿ.ರಾಮಚಂದ್ರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಹಿರಿಯ ಪತ್ರಕರ್ತ ದಿನೇಶ್ ಅವಿೂನ್ ಮಟ್ಟು “ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ) ಒಳ ನೋಟಗಳು” ಎಂಬ ವಿಷಯದ ಕುರಿತು ವಿಷಯ ಮಂಡಣೆ ಮಾಡಲಿದ್ದಾರೆ. ಎಂ.ಬಿ.ಎ ಮಂಗಳೂರು ವಿಭಾಗೀಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್ ಪ್ರಾಸ್ತವಿಕ ಮಾತನಾಡಲಿದ್ದಾರೆ. ಕೊಡಗು ಎಂ.ಬಿ.ಎ ಗೌರವ ಸಂಚಾಲಕ ರಮಾನಾಥ್ ಬೇಕಲ್, ವಿಚಾರ ಸಂಕಿರಣ ಸ್ವಾಗತ ಸಮಿತಿ ಸಂಚಾಲಕ ನೆರವಂಡ ಉಮೇಶ್, ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್, ಕೊಡಗು ಮಹಿಳಾ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಡಾ.ಕಾವೇರಿ ಉಪಸ್ಥಿತರಿರಲಿದ್ದಾರೆ. ಎರಡನೇ ಗೋಷ್ಠಿಯನ್ನು ಕೆಪಿಸಿಸಿ ಉಪಾಧ್ಯಕ್ಷ ಎಸ್.ಎ.ಹುಸೇನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಂ.ಬಿ.ಎ ಮೈಸೂರು ವಿಭಾಗೀಯ ಸಂಚಾಲಕರಾದ ಡಾ.ಲೀಲಾ ಸಂಪಿಗೆ ವಹಿಸಲಿದ್ದಾರೆ. ಲೇಖಕರು ಮತ್ತು ಪ್ರಾಧ್ಯಾಪಕರಾದ ಡಾ.ರಾಜಪ್ಪ ದಳವಾಯಿ “ಮೀಸಲಾತಿ ಎಂದರೇನು ? ಮತ್ತು ಅದರ ಚರಿತ್ರೆ” ಎಂಬ ವಿಷಯದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ ಪ್ರಾಧ್ಯಾಪಕರು ಹಾಗೂ ಪ್ರಗತಿಪರ ಚಿಂತಕರಾದ ಪ್ರೊ.ಕಾಳೇಗೌಡ ನಾಗವಾರ ಪಾಲ್ಗೊಳ್ಳಲಿದ್ದಾರೆ ಎಂದು ರಮಾನಾಥ್ ಬೇಕಲ್ ತಿಳಿಸಿದ್ದಾರೆ.









