
ಮಡಿಕೇರಿ NEWS DESK ಮೇ 29 : ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಹೊಟೇಲ್ ಗಳ ಸಂಘದಿಂದ ನೀಡಲಾಗುವ ‘ಆತಿಥ್ಯ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರಿನ ಎಫ್‌ಕೆಸಿಸಿ ಭವನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮಿ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲಾಟ್ ಮತ್ತಿತರ ಪ್ರಮುಖರು ಪ್ರಶಸ್ತಿ ನೀಡಿ ಗೌರಿಸಿದರು. ಬಿ.ಆರ್.ನಾಗೇಂದ್ರ ಪ್ರಸಾದ್ ಅವರ ಹೊಟೇಲ್ ಉದ್ಯಮ, ಸಾಮಾಜಿಕ ಕಳಕಳಿ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.








