
ಬೆಂಗಳೂರು ಮೇ 30 NEWS DESK : ಹಿರಿಯ ಸಾಹಿತಿ, ಖ್ಯಾತ ಕವಿ, ನಾಟಕ ರಚನೆಕಾರರ ಡಾ. ಎಚ್. ಎಸ್. ವೆಂಕಟೇಶ ಮೂರ್ತಿ (80) ಅವರು ಶುಕ್ರವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ, ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ವೆಂಕಟೇಶ ಮೂರ್ತಿ ಅವರು ನಾರಾಯಣ ಭಟ್ ಮತ್ತು ನಾಗರತ್ನಮ್ಮ ದಒಪತಿಯ ಮಗನಾಗಿ 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಬೆಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದ ಎಚ್ಎಸ್‌ವಿ ಅವರು ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೈಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಎಚ್ಎಸ್‌ವಿ ಅವರು ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕರಾಗಿಯೂ ಸೇವೆ ಸಲ್ಲಿಸಿದ್ದರು.









