
ಮಡಿಕೇರಿ NEWS DESK ಮೇ 30 : ಭಾರೀ ಗಾಳಿಗೆ ವಿದ್ಯುತ್ ಕಂಬ ಬಿದ್ದು ಹಸುವೊಂದು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಎಂ.ಟಿ.ರಘು ತಮ್ಮಯ್ಯ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶು ವೈದ್ಯರು ಮೃತ ಹಸುವಿನ ದೇಹವನ್ನು ತಪಾಸಣೆ ನಡೆಸಿದರು.








