
ಮಡಿಕೇರಿ ಮೇ 31 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 75ನೇ ವರ್ಷದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಪೋಷಕರು ಹಾಗೂ ಶಿಕ್ಷಕರ ಸಂಘ, ಮಡಿಕೇರಿಯ ಕ್ರಿಯೆಟಿವ್ ಖಲೀಲ್ ಹಾಗೂ ಆಲ್ಫಾ ಟೆಕ್ನಾಲಜೀಸ್‌ನ ಹೆಂಟ್ರಿಕ್ ಮಾರ್ಟಿನ್ ಜಿ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಉದ್ಘಾಟಿಸಲಾಯಿತು. ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವ ಸುರೇಶ್ ಎಂ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜೀರ ಬಿ.ಅಯ್ಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಅಭಿವೃದ್ಧಿಗೆ ಕೈ ಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿಯೂ ಕಾಲೇಜು ಹಳೆಯ ವಿದ್ಯಾರ್ಥಿ ಸಂಘ, ಪೋಷಕರ ಹಾಗೂ ಶಿಕ್ಷಕರ ಸಂಘ ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಉತ್ತಮವಾಗಿ ಮುನ್ನಡೆಯಲಿದೆ ಎಂದು ಹೇಳಿದರು. ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವ ಎಂ. ಸುರೇಶ್ ಮಾತನಾಡಿ, ಕಾಲೇಜಿನ ಹಳೆ ವಿದ್ಯಾರ್ಥಿಗಳ ಸವಿ ನೆನಪನ್ನು ನೆನಪಿಸಲು ಈ ಸೆಲ್ಫಿ ಪಾಯಿಂಟ್ ಕಾರಣವಾಗಲಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪ್ರವೇಶಾತಿಗೂ ಇದು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜೀರ ಬಿ.ಅಯ್ಯಪ್ಪ ಮಾತನಾಡಿ, ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಅಭಿವೃದ್ಧಿಗೆ ಸದಾಕಾಲ ಶ್ರಮಿಸಲಿದೆ. ಎಲ್ಲ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಪ್ರೋತ್ಸಾಹ ನೀಡುವ ಗುರಿಯನ್ನು ಹೊಂದಿದೆ. ಹಳೆ ವಿದ್ಯಾರ್ಥಿಗಳೆಲ್ಲ ಕಾಲೇಜಿನ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಹೇಳಿದರು. ಈ ಸಂದರ್ಭ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ, ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಪ್ರಾಧ್ಯಪಕರುಗಳಾದ ಪ್ರೋ ಕೃಷ್ಣ ಎಂ.ಪಿ., ಪ್ರೋ.ತಿಪ್ಪೆಸ್ವಾಮಿ, ಬಿ.ಹೆಚ್.ತಲವಾರ್, ಡಾ.ಜೆ.ಜಿ.ಮಂಜುನಾಥ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ಸೆಲ್ಫಿ ಪಾಯಿಂಟ್ ಆಕರ್ಷಣೆ :: ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸೆಲ್ಫಿ ಪಾಯಿಂಟ್ ಎಲ್ಲರನ್ನು ಆಕರ್ಷಿಸುತ್ತಿದ್ದು, ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಸೆಲ್ಫಿ ಪಾಯಿಂಟ್‌ನ್ನು ಮೆಚ್ಚಿ ಸೆಲ್ಫೀ ಕ್ಲಿಕ್ಕಿಸಿಕೊಳ್ಳುವ ಮೂಲಕ ಕಾಲೇಜಿನ ಮೇಲಿನ ಪ್ರೀತಿ, ಅಭಿಮಾನವನ್ನು ತೋರ್ಪಡಿಸುತ್ತಿದ್ದು, ತಾವು ಕಳೆದ ಸಮಯವನ್ನು ಮೆಲುಕು ಹಾಕುತ್ತಿದ್ದಾರೆ. ಸೆಲ್ಫಿ ಪಾಯಿಂಟ್ ಕಾಲೇಜಿಗೆ ಆಗಮಿಸುವ ನೂತನ ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿರೀಕ್ಷೆ ಇದ್ದು, ಇದರ ಮೂಲಕ ಪ್ರವೇಶಾತಿಯನ್ನು ಕೂಡ ಹೆಚ್ಚಿಸುವ ಗುರಿ ಹೊಂದಲಾಗಿದೆ.










