
ಮಡಿಕೇರಿ ಮೇ 31 NEWS DESK : ಮಡಿಕೇರಿಯ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ನೋಂದಾಯಿತ ವೆಲ್ಡರ್‌ಗಳಿಗೆ ನೋಂದಣಿಯ ಹಿರಿತನದ ಆಧಾರದ ಮೇಲೆ ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರುಗಳಾದ ಎಂ.ಯು.ಅಬ್ದುಲ್ ರಜಾಕ್, ಮಂದ್ರಿರಾ ಮೋಹನ್ ದಾಸ್, ಶ್ಯಾಮ್ ಸುಬ್ಬಯ್ಯ, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಇದ್ದರು.









