Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್‌ಪೋರ್ಸ್ ಸಮಿತಿ ಸಭೆ : ಅತಿವೃಷ್ಟಿಯಿಂದ ಮನೆ ಹಾನಿ ಉದಾರತೆಯಿಂದ ವರದಿ ನೀಡಿ, ಪರಿಹಾರ ವಿತರಿಸಿ: ಶಾಸಕ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್‌ಪೋರ್ಸ್ ಸಮಿತಿ ಸಭೆ : ಅತಿವೃಷ್ಟಿಯಿಂದ ಮನೆ ಹಾನಿ ಉದಾರತೆಯಿಂದ ವರದಿ ನೀಡಿ, ಪರಿಹಾರ ವಿತರಿಸಿ: ಶಾಸಕ ಎ.ಎಸ್.ಪೊನ್ನಣ್ಣ

ಜೂನ್ 2, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.2 NEWS DESK :  ಈಗಾಗಲೇ ಮುಂಗಾರು ಆರಂಭವಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಸೂಚಿಸಿದ್ದಾರೆ. ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ಸೋಮವಾರ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆಚ್ಚಿನ ಮಳೆಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಉದಾರವಾಗಿ ವರದಿ ನೀಡಿ ಮನೆ ಪರಿಹಾರ ಹಣ ಬಿಡುಗಡೆಗೆ ಕ್ರಮವಹಿಸುವಂತೆ ಕಂದಾಯ, ಪಂಚಾಯತ್ ರಾಜ್, ಲೋಕೋಪಯೋಗಿ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು. ಸಂಪೂರ್ಣ ಮನೆ ಹಾನಿಯಾದ ಕುಟುಂಬಗಳಿಗೆ ಸರ್ಕಾರ ನೀಡುವುದು ರೂ.1.20 ಲಕ್ಷ ರೂ. ಮಾತ್ರ. ಆದ್ದರಿಂದ ಮನೆ ಹಾನಿ ವರದಿ ನೀಡುವಾಗ ಅಧಿಕಾರಿಗಳು ಉದಾರತೆ ತೋರಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಹಾಗೂ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ತಿಳಿಸಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರತೀ ಗ್ರಾಮ ಪಂಚಾಯಿತಿಗೆ 50 ರಿಂದ 75 ಸಾವಿರ ರೂ. ಬಿಡುಗಡೆಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗುವುದು. ಪ್ರವಾಹ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದರು. ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವುದರಿಂದ ಕಂದಾಯ, ಅರಣ್ಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಗೃಹರಕ್ಷಕ ದಳ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಎಂಜಿನಿಯರುಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕರು ಸೂಚಿಸಿದರು. ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಸ ವಿಲೇವಾರಿಗೆ ಜಾಗ ಕಾಯ್ದಿರಿಸಬೇಕು. ಜಾಗ ಇಲ್ಲದಿದ್ದಲ್ಲಿ ಕಂದಾಯ ಇಲಾಖೆಗೆ ಮನವಿ ಮಾಡಬೇಕು. ಅದರ ಪ್ರತಿಯನ್ನು ಕಳುಹಿಸಿಕೊಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ರಸ್ತೆ ಬದಿ ಕಸ ಬಿಸಾಡಬಾರದು. ರಸ್ತೆ ಬದಿ ಕಸ ಬಿಸಾಡುವವರಿಗೆ ದಂಡ ವಿಧಿಸುವಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಶಾಸಕರು ತಾಕೀತು ಮಾಡಿದರು. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತಿ ಹಾಡಿಗೂ ಭೇಟಿ ನೀಡಿ ಆದಿವಾಸಿ ಜನರ ಕುಂದುಕೊರತೆ ಆಲಿಸಬೇಕು. ಗುಣಮಟ್ಟದ ಪೌಷ್ಟಿಕ ಆಹಾರ ವಿತರಿಸಬೇಕು. ಮಳೆಗಾಲದಲ್ಲಿ ಆದಿವಾಸಿ ಜನರು ತುಂಬಾ ಕಷ್ಟದ ಜೀವನ ನಡೆಸುತ್ತಾರೆ. ಆದ್ದರಿಂದ ಆದಿವಾಸಿ ಜನರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು. ಆದಿವಾಸಿ ಜನರು ವಾಸಿಸುವ ಬಸವೇಶ್ವರ ಕಾಲೋನಿಯಲ್ಲಿ ಹೆಚ್ಚಿನ ಮಳೆಯಿಂದ ರಸ್ತೆ ಸಂಪರ್ಕ ವ್ಯತ್ಯಯವಾಗಿ ತೊಂದರೆಗೆ ಸಿಲುಕಿದ್ದರು. ಇಂತಹ ಕಡೆಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ ಸರಿಪಡಿಸುವಂತಾಗಬೇಕು. ಎಂದು ಶಾಸಕರು ಸೂಚಿಸಿದರು. ಈ ಬಾರಿ ಮೇ ತಿಂಗಳಲ್ಲಿ ದಾಖಲೆಯ ಮಳೆಯಾಗಿದೆ. ವ್ಯಾಪಕ ಮಳೆ ಹಾಗೂ ಬಿರುಗಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು. ರಸ್ತೆ ಬದಿ ಹಳೆ ಹಾಗೂ ಶೀತಲವಾಗಿರುವ ಮರಗಳನ್ನು ತೆರವುಗೊಳಿಸುವಂತಾಗಬೇಕು ಎಂದು ನಿರ್ದೇಶನ ನೀಡಿದರು. ವಿದ್ಯುತ್ ಕಂಬಗಳ ಬಗ್ಗೆಯೂ ಸಹ ಎಚ್ಚರವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದರು. ಕಾಡಾನೆ ಹಾವಳಿ ತಡೆಯಬೇಕು. ಕಾಡಂಚಿನ ಪ್ರದೇಶಗಳಲ್ಲಿ ಯಾರೂ ಸಹ ಜೀವ ಭಯದಿಂದ ಬದುಕಬಾರದು. ನಾಗರಿಕರ ರಕ್ಷಣೆ ಆಗಬೇಕು ಎಂದರು. ಪ್ರವಾಹ ಪೀಡಿತ ಹಾಗೂ ಸೂಕ್ಷ್ಮಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸ್ಥಳಾಂತರಕ್ಕೆ ಕ್ರಮವಹಿಸಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಕುಗ್ರಾಮಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ನಿರ್ದೇಶನ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಗಮನಹರಿಸಬೇಕು. ಈ ಬಗ್ಗೆ ಅರಿವು ಮೂಡಿಸುವಂತೆ ನಿರ್ದೇಶನ ನೀಡಿದರು. ಶಾಲೆಗಳು ಆರಂಭವಾಗಿದ್ದು, ಅಂಗನವಾಡಿ ಮತ್ತು ಶಾಲಾ-ಕಾಲೇಜು ಕಟ್ಟಡಗಳು ಸುಸ್ಥಿತಿಯಲ್ಲಿವೆಯೇ ಎಂದು ಗಮನಹರಿಸಬೇಕು. ಶೀತಲದಿಂದ ಕೂಡಿರುವ ಕಟ್ಟಡಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರು ಮಾತನಾಡಿ ಈ ಬಾರಿ 28 ಹಳೇ ಮರಗಳನ್ನು ತೆರವುಗೊಳಿಸಲಾಗಿದೆ. ಹಳೇ ಹಾಗೂ ಶೀತಲದಿಂದ ಕೂಡಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಆಕ್ಷೇಪ ಇರುವುದಿಲ್ಲ ಎಂದರು. ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್ ಅವರು ಮಾತನಾಡಿ ಪೊನ್ನಂಪೇಟೆ ತಾಲ್ಲೂಕಿನಲ್ಲಿ 15 ಮನೆಗಳು ಹಾನಿಯಾಗಿದ್ದು, 12 ಭಾಗಶಃ, 3 ಮನೆಗಳು ಸಂಪೂರ್ಣ ಹಾನಿಯಾಗಿದೆ. ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು. ವಿರಾಜಪೇಟೆ ತಹಶೀಲ್ದಾರ್ ಅನಂತಶಂಕರ ಅವರು ಮಾತನಾಡಿ ವಿರಾಜಪೇಟೆ ತಾಲ್ಲೂಕಿನ 14 ಮನೆಗಳು ಹಾನಿಯಾಗಿದ್ದು, 13 ಮನೆಗಳು ಭಾಗಶಃ, 01 ಮನೆ ಸಂಪೂರ್ಣ ಹಾನಿಯಾಗಿದೆ. ಮರ ಬಿದ್ದು ಇಬ್ಬರ ಪ್ರಾಣ ಹಾನಿಯಾಗಿದೆ ಎಂದು ವಿವರಿಸಿದರು. ಪರಿಹಾರ ವಿತರಿಸಲಾಗಿದೆ ಎಂದರು. ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಹಾಗೂ ಸತೀಶ್ ಅವರು ಮಾಹಿತಿ ನೀಡಿ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ 300 ಕ್ಕೂ ಹೆಚ್ಚು ಕಂಬಗಳು ಹಾನಿಯಾಗಿದ್ದು, ಅದನ್ನು ಸರಿಪಡಿಸಲಾಗಿದೆ. ಹಾತೂರು, ತೆರಾಲು, ಹೊಸ್ಕೇರಿ, ಬಿ.ಶೆಟ್ಟಿಗೇರಿ ಮತ್ತಿತರ ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸರಿಪಡಿಸಲಾಗುವುದು ಎಂದರು. ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯತಿರಾಜು ಅವರು ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇದರಿಂದ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಗಮನಹರಿಸಬಹುದು. ಆರೋಗ್ಯ ಇಲಾಖೆಯಿಂದ ಲಾರ್ವಾ ಸರ್ವೆ ಮಾಡಲಾಗುತ್ತದೆ ಎಂದರು. ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು. ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ ಅವರು ನೆಹರು ನಗರ, ಅಯ್ಯಪ್ಪ ಬೆಟ್ಟ, ಮಲೆತಿರಿಕೆ ಬೆಟ್ಟದ ಸುಮಾರು 67 ಕುಟುಂಬಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಎರಡು ಗ್ರಾ.ಪಂ.ಗೆ ಒಬ್ಬರಂತೆ ಪಿಡಿಒಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಪಿಡಿಒಗಳ ಸಂಖ್ಯೆ ಮತ್ತಿತರ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮವಹಿಸಲಾಗುವುದು ಎಂದರು. ತಾ.ಪಂ.ಇಒ ಅಪ್ಪಣ್ಣ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ತೇಜರಾಜ, ಸ್ವಚ್ಛ ಭಾರತ ಮಿಷನ್ ಯೋಜನೆ ಸಂಬಂಧಿಸಿದಂತೆ ಸೂರಜ್, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಬಿಂದು, ಲೋಕೋಪಯೋಗಿ ಇಲಾಖೆಯ ಎಇಇ ಲಿಂಗರಾಜು ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಪ್ರಶಾಂತ್, ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.