
ನಾಪೋಕ್ಲು ಜೂ.3 NEWS DESK : ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೂಗುಚ್ಚ ನೀಡಿ, ಸಿಹಿ ಹಂಚಿ ಬರಮಾಡಿಕೊಂಡರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷರು, ಆಡಳಿತ ಮಂಡಳಿ ಅಧ್ಯಕ್ಷರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿದರು. ಬೆಟ್ಟಗೇರಿ ಉದಯ ಪ್ರೌಢಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪೆನ್ನು ಹಾಗೂ ಸಿಹಿ ಹಂಚಿ ಸ್ವಾಗತಿಸಿದರು. ಸಮೀಪದ ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಆಂಗ್ಲ ಮಾದ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಒರಿಯಂಟೇಷನ್ ಕಾರ್ಯಕ್ರಮ ಜರುಗಿತು. ಶಾಲೆಯ ಪ್ರಾಂಶುಪಾಲರಾದ ಕವಿತಾ ಎಂ.ಎಂ ಹತ್ತನೇ ತರಗತಿಯಲ್ಲಿ ಪ್ರಥಮ ಅಂಕ ಗಳಿಸಿದ ಅಫ್ರಾ ಪರ್ವೀನ್ ಳನ್ನು ಅಭಿನಂದಿಸಿ. ಬಳಿಕ ಮಾತನಾಡಿ ಅಂದು ಮಾಡಿದಂತಹ ಪಾಠಗಳನ್ನು ಅಂದೇ ಓದಿ, ಬರೆದು, ಕಲಿಯಲು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಬಹು ಮುಖ್ಯ. ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ತಮ್ಮ ಪ್ರತಿಭೆಯನ್ನು ಹೊರಹಾಕಿದರು. ವಿದ್ಯಾರ್ಥಿನಿಯರಾದ ನಿಧಾ. ಪಿ.ಐ, ಅಫ್ನ.ಕೆ.ಎ ಪ್ರಾರ್ಥನೆಯನ್ನು ಮಾಡಿದರು. ವಿದ್ಯಾರ್ಥಿನಿ ಸಫಾ. ಕೆ.ಎಂ ಸರ್ವರನ್ನೂ ಸ್ವಾಗತಿಸಿ, ಆಯಿಶ. ಹನ್ನತ್ ಕೆ.ಎಂ.ಕಾರ್ಯಕ್ರಮದ ನಿರೂಪಿಸಿ ಕೆ.ಎಂ.ವಂದಿಸಿದರು.
ವರದಿ : ದುಗ್ಗಳ ಸದಾನಂದ.









