Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಯೋಗಿನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘ ಅಸ್ತಿತ್ವಕ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಯೋಗಿನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘ ಅಸ್ತಿತ್ವಕ್ಕೆ*

ಜೂನ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.7 NEWS DESK : ಕೊಡಗು ಜಿಲ್ಲೆಯಾದ್ಯಂತ ನೆಲೆಸಿರುವ ಬಲಿಜ ಸಮಾಜ ಬಾಂಧವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿ ‘ಶ್ರೀ ಯೋಗಿನಾರಾಯಣ ಕೊಡಗು ಜಿಲ್ಲಾ ಬಲಿಜ’ ಸಂಘವನ್ನು ಅಸ್ತಿತ್ವಕ್ಕೆ ತಂದು ನೋಂದಣಿ ಮಾಡಲಾಗಿದೆಯೆಂದು ಸಂಘದ ಜಿಲ್ಲಾಧ್ಯಕ್ಷರಾದ ಟಿ.ಜಿ.ಗಣೇಶ್ ನಾಯ್ಡು ಮೂರ್ನಾಡು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರ ಬಲಿಜ ಸಮಾಜ ಬಾಂಧವರು ನೆಲೆಸಿದ್ದಾರೆ. ಇವರಲ್ಲಿ ಶಿಕ್ಷಣದ ಜಾಗೃತಿಯೊಂದಿಗೆ, ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಕಷ್ಟ ಸುಖಗಳಿಗೆ ನೆರವಾಗುವ ಉದ್ದೇಶದಿಂದ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆಯೆಂದರು. ಸಂಘದ ಮುಖೇನ ಸಮಾಜ ಬಾಂಧವರಿಗೆ ಯೋಗ್ಯ ಶಿಕ್ಷಣವನ್ನು ಒದಗಿಸುವ ನಿಟ್ಟಿನ ಪ್ರಯತ್ನ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ನೆರವಾಗುವುದು, ಆರ್ಥಿಕ ಅಭಿವೃದ್ಧಿಗೆ ಪೂರಕ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡುವುದು, ಎಲೆ ಮರೆಯ ಕಾಯಿಯಂತಿರುವ ಸಮಾಜದ ಪ್ರತಿಭಾವಂತರನ್ನು ಗುರುತಿಸಿ ಬೆಳಕಿಗೆ ತರುವುದು ಹಾಗೂ ಸಮುದಾಯದ ಒಳಗಿನ ಯಾವುದೇ ಭಿನ್ನಾಭಿಪ್ರಾಯ ಗುಂಪುಗಾರಿಕೆಗಳನ್ನು ಇಲ್ಲವಾಗಿಸಿ ಸದೃಢವಾಗಿ ಬಲಿಜ ಸಮಾಜವನ್ನು ಕಟ್ಟುವುದು ಸಂಘದ ಪ್ರಮುಖ ಉದ್ದೇಶವಾಗಿದೆಯೆಂದು ತಿಳಿಸಿದರು. ಸಂಘವು ಆರಂಭಿಕ ಹಂತದಲ್ಲಿ ಪ್ರಮುಖವಾಗಿ ಬಲಿಜ ಸಮಾಜದಲ್ಲಿರುವ ಕಡುಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಸಹಕರಿಸುವುದು ಮತ್ತು ಗುಡ್ಡ ಗಾಡಿನ ಪ್ರದೇಶಗಳಲ್ಲಿ ನೆಲೆಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪಟ್ಟಣ ಪ್ರದೇಶಗಳಲ್ಲಿ ಶಿಕ್ಷಣವನ್ನು ಒದಗಿಸಲು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವುದು ನಮ್ಮ ಮುಂದಿರುವ ಪ್ರಮುಖ ಗುರಿಯಾಗಿದೆಯೆಂದು ಗಣೇಶ್ ನಾಯ್ಡು ತಿಳಿಸಿದರು.
ಸಮುದಾಯ ಭವನದ ಚಿಂತನೆ :: ಬಲಿಜ ಸಮಾಜ ಬಾಂಧವರಿಗೆ ಅವರ ಕಾರ್ಯಕ್ರಮಗಳ ಆಯೋಜನೆಗೆ ಅವರದೇ ಆದ ಯಾವುದೇ ಸಮುದಾಯ ಭವನವಿಲ್ಲ. ಈ ಹಿನ್ನೆಲೆ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಮೂಲಕ ಸಮುದಾಯ ಭವನ ನಿರ್ಮಾಣದ ಉದ್ದೇಶವು ತಮ್ಮ ಮುಂದಿದೆ. ಸಮಾಜ ಬಾಂಧವರಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವುದು, ಸಮಾಜದ ವಧು-ವರರ ಸಮಾವೇಶವನ್ನು ಕನಿಷ್ಟ ವರ್ಷಕ್ಕೆ ಎರಡು ಬಾರಿ ನಡೆಸುವುದು, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡಲು ಸಂಘ ಉದ್ದೇಶಿಸಿರುವುದಾಗಿ ಮಾಹಿತಿ ನೀಡಿದರು. ಮೀಸಲಾತಿ 2ಎಗೆ ಆಗ್ರಹ :: ಬಲಿಜ ಸಮಾಜಕ್ಕೆ ಪ್ರಸ್ತುತ 2ಎ ಮೀಸಲಾತಿಯನ್ನು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತ ಮಾಡಲಾಗಿದೆ. ಈ ಸೌಲಭ್ಯವನ್ನು ಸರ್ಕಾರಿ ಉದ್ಯೋಗಗಳಿಗೂ ವಿಸ್ತರಿಸಲು ಸರ್ಕಾರ ಮುಂದಾಗಬೇಕೆಂದು ಗಣೇಶ್ ನಾಯ್ಡು ಆಗ್ರಹಿಸಿದರು. ಸದಸ್ಯತ್ವ :: ಸಂಘದ ಕೇಂದ್ರ್ರ ಕಛೇರಿ ಮೂರ್ನಾಡಿನಲ್ಲಿದ್ದು, ಸಂಘದ ಸದಸ್ಯತ್ವಕ್ಕೆ 200 ರೂ.ಗಳನ್ನು ನಿಗದಿಪಡಿಸಲಾಗಿದೆ. ಸಮಾಜದ ಪ್ರತಿಯೊಬ್ಬರು ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್. ಸುಬ್ರಮಣಿ, ಖಜಾಂಚಿ ಟಿ.ಎ.ಪ್ರಕಾಶ್, ನಿರ್ದೇಶಕರಾದ ಟಿ.ಆರ್. ಗಣೇಶ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.